AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿಯಲ್ಲಿ ಜಟಾಪಟಿ: ಬಾಬಾ ಹಾಕಿದ್ದ ಬೀಗ ಒಡೆದು ದೇಗುಲ ಸುಪರ್ದಿಗೆ ಪಡೆದ ಜಿಲ್ಲಾಡಳಿತ

ಅಂಜನಾದ್ರಿ ದೇಗುಲದ ಆಡಳಿತಕ್ಕಾಗಿ ಕೊಪ್ಪಳ ಜಿಲ್ಲಾಡಳಿತ ಮತ್ತು ವಿದ್ಯಾದಾಸ್ ಬಾಬಾ ನಡುವೆ ಜಟಾಪಟಿ ಮುಂದುವರಿದಿದೆ. ಹೈಕೋರ್ಟ್ ಆದೇಶದಂತೆ ಬಾಬಾ ದೇಗುಲ ವಶಪಡಿಸಿಕೊಂಡು ಬೀಗ ಹಾಕಿದ್ದರು. ಆದರೆ ಇದೀಗ ಬೀಗ ಒಡೆದು ಜಿಲ್ಲಾಡಳಿತ ದೇಗುಲವನ್ನು ತನ್ನ ಸುಪರ್ದಿಗೆ ಪಡೆದುಕೊಂಡಿದೆ. ಈ ಬಗ್ಗೆ ಜಿಲ್ಲಾಡಳಿತ ಕಾನೂನು ಉಲ್ಲಂಘನೆ ಮಾಡಿದೆ ಎಂದು ಬಾಬಾ ಆರೋಪಿಸಿದ್ದಾರೆ.

ಅಂಜನಾದ್ರಿಯಲ್ಲಿ ಜಟಾಪಟಿ: ಬಾಬಾ ಹಾಕಿದ್ದ ಬೀಗ ಒಡೆದು ದೇಗುಲ ಸುಪರ್ದಿಗೆ ಪಡೆದ ಜಿಲ್ಲಾಡಳಿತ
ಅಂಜನಾದ್ರಿ ದೇಗುಲ
ಶಿವಕುಮಾರ್ ಪತ್ತಾರ್
| Edited By: |

Updated on: Oct 28, 2026 | 5:14 PM

Share

ಮುಖ್ಯಾಂಶಗಳು

  • ಹನುಮ ಜನ್ಮಸ್ಥಳ ಅಂಜನಾದ್ರಿ ದೇಗುಲದಲ್ಲಿ ಮುಂದುವರಿದ ಜಟಾಪಟಿ
  • ವಿದ್ಯಾದಾಸ್ ಬಾಬಾ ಮತ್ತು ಕೊಪ್ಪಳ ಜಿಲ್ಲಾಡಳಿತದ ನಡುವೆ ಜಟಾಪಟಿ
  • ದೇಗುಲವನ್ನು ಜಿಲ್ಲಾಡಳಿತ ವಶಕ್ಕೆ ಪಡೆಯಲು ಮುಂದಾದ ಅಧಿಕಾರಿಗಳು

ಕೊಪ್ಪಳ, ಅಕ್ಟೋಬರ್​​ 28: ಹನುಮ ಜನ್ಮಸ್ಥಳ ಅಂಜನಾದ್ರಿ ದೇಗುಲದ ಆಡಳಿತದ ಅಧಿಕಾರಕ್ಕಾಗಿ ಪ್ರಧಾನ ಅರ್ಚಕ ವಿದ್ಯಾದಾಸ್ ಬಾಬಾ ಮತ್ತು ಕೊಪ್ಪಳ ಜಿಲ್ಲಾಡಳಿತ ಅಧಿಕಾರಗಳ ನಡುವಿನ ಸಂಘರ್ಷ ಮುಂದುವರೆದಿದೆ. ಜಿಲ್ಲಾಡಳಿತ ಅಧಿಕಾರಿಗಳು ದೇಗುಲವನ್ನು ವಶಕ್ಕೆ ಪಡೆಯಲು ಮುಂದಾಗಿದ್ದು, ದೇವಸ್ಥಾನದ 8 ಕಚೇರಿಗಳಿಗೆ ಬಾಬಾ ಹಾಕಿದ್ದ ಬೀಗವನ್ನು ಒಡೆದಿದ್ದಾರೆ. ಇತ್ತ ಜಿಲ್ಲಾಡಳಿತದ ಕ್ರಮಕ್ಕೆ ವಿದ್ಯಾದಾಸ ಬಾಬಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಾಬಾ ಹಾಕಿದ್ದ ಬೀಗ ಒಡೆದ ಅಧಿಕಾರಿಗಳು 

ದೇವಸ್ಥಾನದ ಸುಪರ್ದಿಗಾಗಿ ಕೊಪ್ಪಳ ಜಿಲ್ಲಾಡಳಿತದಿಂದ ಕಾರ್ಯಾಚರಣೆ ಮಾಡಲಾಗಿದ್ದು, ಎಸಿ, ತಹಶೀಲ್ದಾರ್, DySP ನೇತೃತ್ವದಲ್ಲಿ ಬೆಟ್ಟಕ್ಕೆ ಭೇಟಿ ನೀಡಲಾಗಿದೆ. ಈ ವೇಳೆ ದೇವಸ್ಥಾನದ 8 ಕಚೇರಿಗಳಿಗೆ ಬಾಬಾ ಹಾಕಿದ್ದ ಬೀಗ ಒಡೆಯಲಾಗಿದೆ. ಬೆಟ್ಟದಲ್ಲಿ ಬಾಬಾ ಅಳವಡಿಸಿದ ಟ್ರಸ್ಟ್​ನ ಬ್ಯಾನರ್​ಗಳು ಕೂಡ ತೆರವು ಮಾಡಲಾಗಿದ್ದು, ಬಾಬಾ ನೇಮಕ ಮಾಡಿದ್ದ ಸಿಬ್ಬಂದಿಯನ್ನ ಹೊರಹಾಕಲಾಗಿದೆ. ದೇವಸ್ಥಾನದಲ್ಲಿ ಜಿಲ್ಲಾಡಳಿತ ಸಿಬ್ಬಂದಿ ಕಾರ್ಯನಿರ್ವಹಿಸುವಂತೆ ಎಸಿ ಸೂಚಿಸಿದ್ದಾರೆ.

ಕೋರ್ಟ್ ಆದೇಶ ತೋರಿಸಿ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಬಾಬಾ ಪ್ರಶ್ನೆ  

ಇನ್ನು ಜಿಲ್ಲಾಡಳಿತದ ಕ್ರಮಕ್ಕೆ ವಿದ್ಯಾದಾಸ ಬಾಬಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಕೋರ್ಟ್ ಆದೇಶ ತೋರಿಸಿ ಆಮೇಲೆ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳನ್ನೇ ಅವರು ಪ್ರಶ್ನಿಸಿದ್ದಾರೆ. ಈ ವೇಳೆ ಬಾಬಾ ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಉಂಟಾಗಿದೆ.

LIVE TV

ಏನಿದು ಪ್ರಕರಣ?

ಅಂಜನಾದ್ರಿಯಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ವಿವಾದ ಉಂಟಾಗಿತ್ತು. ಈ ಸಂಬಂಧದ ಕಾನೂನು ಹೋರಾಟದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಹಿಂದಿನ ಅರ್ಚಕ ವಿದ್ಯಾದಾಸ್ ಬಾಬಾ ಅವರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತೀರ್ಪು ನೀಡಿತ್ತು. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ 2018ರ ನೋಟಿಫೈ ಆರ್ಡರ್​ ರದ್ದು ಮಾಡಿ ಬಾಬಾಗೆ ಅವಕಾಶ ಕಲ್ಪಿಸಿತ್ತು.

ಇದನ್ನೂ ಓದಿ: ಅಂಜನಾದ್ರಿ ದೇಗುಲ ಪೂಜಾ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು, ಸರ್ಕಾರಕ್ಕೆ ಹಿನ್ನಡೆ

ಈ ಆದೇಶ ಸೆಪ್ಟೆಂಬರ್​ 7ರಂದು ಅಧಿಕೃತವಾಗಿ ಜಿಲ್ಲಾಡಳಿತಕ್ಕೂ ತಲುಪಿತ್ತು. ತೀರ್ಪು ಬಳಿಕ ವಕೀಲರು ಹಾಗೂ ಭಕ್ತರೊಂದಿಗೆ ವಿದ್ಯಾದಾಸ್ ಬಾಬಾ ಅಂಜನಾದ್ರಿಗೆ ಆಗಮಿಸಿದ್ದರು. ಅಂಜನಾದ್ರಿ ಮೇಲೆ ಸರ್ಕಾರ ಅಥವಾ ಜಿಲ್ಲಾಡಳಿತಕ್ಕೆ ಹಕ್ಕಿಲ್ಲ. ಅಂಜನಾದ್ರಿ ಪರ್ವತ ಟ್ರಸ್ಟ್​ಗೆ ಸೇರಬೇಕು ಎಂಬ ಆದೇಶವಾಗಿದೆ ಎನ್ನುವುದು ವಿದ್ಯಾದಾಸ್ ಬಾಬಾ ಹಾಗೂ ಭಕ್ತರ ವಾದ. ಆದರೆ ಜಿಲ್ಲಾಧಿಕಾರಿಗಳು ಪೂಜೆಗೆ ಮಾತ್ರ ಅವಕಾಶ. ಜೊತೆಗೆ ಅವರಿಗೆ ಒಂದು ರೂಮ್ ಕೊಡಲು ಮಾತ್ರ ಆದೇಶವಾಗಿದೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಬೆಂಗಳೂರು ಕ್ಲೀನಿಂಗ್​ಗೆ ಹೊಸ ಯೋಜನೆ ಘೋಷಿಸಿದ ಸಚಿವ ಕೃಷ್ಣಬೈರೇಗೌಡ
ಬೆಂಗಳೂರು ಕ್ಲೀನಿಂಗ್​ಗೆ ಹೊಸ ಯೋಜನೆ ಘೋಷಿಸಿದ ಸಚಿವ ಕೃಷ್ಣಬೈರೇಗೌಡ
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್!
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಸೌಜನ್ಯ ಪ್ರಕರಣ ಮರುತನಿಖೆ: ಸಿಎಂ ಡಿಕೆಶಿ ಭೇಟಿಯಾದ ಎಸ್‌ಐಟಿ ಮುಖ್ಯಸ್ಥ
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!
ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ವ್ಹೀಲ್ ಚೇರ್‌ನಲ್ಲಿ ಕಸ ಸಾಗಾಟ!