ಮಳೆಗಾಲ ಆರಂಭವಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ; ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಡೆಂಗ್ಯೂ, ಚಿಕನಗುನ್ಯಾ

ಮಳೆಗಾಲ ಆರಂಭವಾಗಿದ್ದು, ಇದರ ಜೊತೆಗೆ ಅನೇಕ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಶುರುವಾಗಿದೆ. ಕೊಪ್ಪಳದಲ್ಲಿ ಒಂದೆಡೆ ಡೆಂಗ್ಯೂ, ಚಿಕನಗುನ್ಯಾ ಸೇರಿದಂತೆ ಅನೇಕ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಗ್ರಾಮೀಣ ಭಾಗದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಕಲುಷಿತ ನೀರಿನ ಭೀತಿ ಕೂಡ ಆರಂಭವಾಗಿದೆ. ಹೀಗಾಗಿ ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಮಳೆಗಾಲ ಆರಂಭವಾಗ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ; ಗ್ರಾಮೀಣ ಭಾಗದಲ್ಲಿ ಹೆಚ್ಚಾದ ಡೆಂಗ್ಯೂ, ಚಿಕನಗುನ್ಯಾ
ಮಳೆಗಾಲ ಆರಂಭವಾಗ್ತಿದ್ದಂತೆ ಹೆಚ್ಚಾಸ ಸಾಂಕ್ರಾಮಿಕ ರೋಗಗಳ ಭೀತಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 11, 2024 | 3:05 PM

ಕೊಪ್ಪಳ, ಜೂ.11: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಬೇಸಿಗೆ ನಾಡು ಕೊಪ್ಪಳ(Koppal) ಇದೀಗ ಮನಲೆನಾಡಿನಂತಾಗಿದೆ. ಬೇಸಿಗೆಯ ಬೇಸಿಲಿಗೆ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯುತ್ತಿದೆ. ಆದ್ರೆ, ಮಳೆಗಾಲ ಆರಂಭ ಆಗಿರುವುದು ಜನರ ಸಂತಸ ಎಷ್ಟು ಹೆಚ್ಚಿಸಿದೆಯೋ ಅಷ್ಟೇ ಆತಂಕವನ್ನು ಕೂಡ ಹೆಚ್ಚಿಸುತ್ತಿದೆ. ಹೌದು, ಅನೇಕ ಸಾಂಕ್ರಾಮಿಕ ರೋಗಗಳ ಆತಂಕ ಇದೀಗ ಎದುರಾಗಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗುವುದರಿಂದ ಡೆಂಗ್ಯೂ(Dengue), ಚಿಕನಗುನ್ಯಾ(Chikungunya), ಮಲೇರಿಯಾ ಪ್ರಕರಣಗಳು ಹೆಚ್ಚಾಗುವ ಆತಂಕ ಜನರಿಗೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂಧಿಯನ್ನು ಕಾಡುತ್ತಿದೆ.

ಜನವರಿ ಯಿಂದ ಇವರೆಗೆ 80 ಡೆಂಗ್ಯೂ ಪ್ರಕರಣ

ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಹಲವಡೆ ನೀರು ಸರಿಯಾಗಿ ಹರಿದುಕೊಂಡು ಹೋಗಲು ಸರಿಯಾದ ವ್ಯವಸ್ಥೆಯಿಲ್ಲ. ಹೀಗಾಗಿ ಅನೇಕ ಕಡೆ ನೀರು ನಿಂತಲ್ಲಿಯೇ ನಿಲ್ಲುತ್ತದೆ. ಇದರಿಂದ ಸೊಳ್ಳೆಗಳು ಸಂಖ್ಯೆ ದಿಢೀರನೆ ಹೆಚ್ಚಾಗುತ್ತಿದೆ. ಇನ್ನು ಕಳೆದ ಜನವರಿ ತಿಂಗಳಿಂದ ಇಂದಿನವರೆಗೆ ಜಿಲ್ಲೆಯಲ್ಲಿ 80 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಜುಲೈ ತಿಂಗಳಲ್ಲಿ ಕೂಡ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆಯಂತೆ. ಅದರಲ್ಲೂ ಕೊಪ್ಫಳ ತಾಲೂಕು, ಗಂಗಾವತಿ ತಾಲೂಕಿನಲ್ಲಿಯೇ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಜನರು ಜಾಗೃತಿ ವಹಿಸಬೇಕು, ಇಲ್ಲದಿದ್ದರೆ ಸಮಸ್ಯೆ ಹೆಚ್ಚಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ:ಕ್ಯೂಲೆಕ್ಸ್ ಸೊಳ್ಳೆಗಳಿಂದ ಬೆಂಗಳೂರಿಗೂ ವೆಸ್ಟ್ ನೈಲ್ ಜ್ವರದ ಆತಂಕ

ಇನ್ನು ಮಳೆಗಾಲ ಆರಂಭವಾಗುತ್ತಿದ್ದಂತೆ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಆಸ್ಪತ್ರೆಗಳು ರೋಗಿಗಳಿಂದ ತುಂಬುತ್ತಿವೆ. ಪ್ರತಿನಿತ್ಯ ಸಾವಿರಾರು ಜನರು ಜಿಲ್ಲಾ ಆಸ್ಪತ್ರೆ, ಸೇರಿದಂತೆ ಅನೇಕ ಖಾಸಗಿ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪೆಡದುಕೊಂಡು ಹೋಗುತ್ತಿದ್ದಾರೆ. ಒಂದೆಡೆ ಕೊಪ್ಪಳ ಜಿಲ್ಲೆಯಲ್ಲಿ ಚಿಕನಗುನ್ಯಾ, ಡೆಂಗ್ಯೂ ಜ್ವರದ ಭೀತಿ ಹೆಚ್ಚಾದ್ರೆ, ಇನ್ನೊಂದೆಡೆ ಕಲುಷಿತ ನೀರಿನ ಸಮಸ್ಯೆ ಕೂಡ ಹೆಚ್ಚಾಗುವ ಆತಂಕ ಇದೆ. ಈ ಹಿಂದಿನ ವರ್ಷದಲ್ಲಿ ಚರಂಡಿ ನೀರು ಕುಡಿಯುವ ನೀರಿನ ಜೊತೆ ಸೇರಿದ್ದರಿಂದ ಜಿಲ್ಲೆಯ ಅನೇಕ ಕಡೆ ಕೆಲ ಜನರು ಪ್ರಾಣ ಕಳೆದುಕೊಂಡಿದ್ದರು.

ಈ ಬಾರಿ ಕೂಡ ಗ್ರಾಮೀಣ ಭಾಗದಲ್ಲಿ ಕಲುಷಿತ ನೀರಿನ ಆತಂಕ ಆರಂಭವಾಗಿದೆ. ಹೀಗಾಗಿ ನೀರನ್ನು ಪರೀಕ್ಷೆ ಮಾಡುವುದು, ಜೊತೆಗೆ ನೀರನ್ನು ಸಂಗ್ರಹಿಸಿಡದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳು ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಕೊಪ್ಪಳದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗುತ್ತಿರುವುದರಿಂದ ಜನರು ಸ್ವಲ್ಪ ಜಾಗೃತಿ ವಹಿಸಬೇಕಿದೆ. ಸೊಳ್ಳೆಗಳ ಉತ್ಪತ್ತಿಯಾಗುವ ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕಿದೆ. ಇನ್ನೊಂದೆಡೆ ಆರೋಗ್ಯ ಇಲಾಖೆ ಕೂಡ ಇನ್ನಷ್ಟು ಕ್ರಮಗಳನ್ನು ಕೈಗೊಂಡು, ಜನರನ್ನು ರೋಗಗಳಿಂದ ದೂರವಾಗಿಡುವಂತೆ ನೋಡಿಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:02 pm, Tue, 11 June 24

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು