ಕೊಪ್ಪಳ ಗವಿಸಿದ್ದೇಶ್ವರ ಮಠಕ್ಕೆ ಆಸ್ಸಾಂ ಸಿಎಂ ಹಿಮಂತ್ ಬಿಸ್ವಾ ಭೇಟಿ: ವಿಜಯ ಸಂಕಲ್ಪ ಯಾತ್ರೆಯ ರೋಡ್ ಶೋದಲ್ಲಿ ಭಾಗಿ
ಆಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಕೊಪ್ಪಳದ ಗಂಗಾವತಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಭಾಗಿಯಾಗಲು ರಾಜ್ಯಕ್ಕೆ ಆಗಮಿಸಿದ್ದು, ನಾಡಿನ ಪ್ರಸಿದ್ದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗವಿಸಿದ್ದೇಶ್ವರ ಶ್ರೀಗಳ ಆಶಿರ್ವಾದ ಪಡೆದರು.
ಕೊಪ್ಪಳ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election) ಶೀಘ್ರದಲ್ಲೆ ದಿನಾಂಕ ಘೋಷಣೆಯಾಗಲಿದ್ದು, ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರ ನಡೆಸಿವೆ. ಬಿಜೆಪಿ (BJP) ರಾಜ್ಯ ಘಟಕ ಕೇಂದ್ರ ನಾಯಕರತ್ತವಾಲಿದ್ದು, ಒಬ್ಬರ ಹಿಂದೆ ಒಬ್ಬರು ಎಂಬಂತೆ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ನಿನ್ನೆ (ಮಾ.12) ತಾನೆ ಬಿಜೆಪಿ ಕೇಂದ್ರ ನಾಯಕ, ಪ್ರಧಾನಿ ನರೇಂದ್ರ ಮೋದಿ (Narendra Modi) ದಕ್ಷಿಣದಿಂದ ಉತ್ತರಕ್ಕೆ ಪ್ರಯಾಣ ಮಾಡಿ, ಬಿರು ಬಿಸಿಲಿನಲ್ಲಿ ಬಿಜೆಪಿಯ ದೂಳು ಎಬ್ಬಿಸಿದರು. ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮಗಳಿಗೆಂದು ಮಾತ್ರ ರಾಜ್ಯಕ್ಕೆ 6 ಬಾರಿ ಬಂದು ಹೋಗಿದ್ದು, ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Sing), ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಂತೆ ಆಸ್ಸಾಂ (Assam) ಮುಖ್ಯಮಂತ್ರಿ ಹಿಮಂತ್ ಬಿಸ್ವಾ (Himanta Biswa) ಕೊಪ್ಪಳದ ಗಂಗಾವತಿಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ (Vijaysankalp Ytara) ರೋಡ್ ಶೋನಲ್ಲಿ ಭಾಗಿಯಾಗಲು ರಾಜ್ಯಕ್ಕೆ ಆಗಮಿಸಿದ್ದು, ನಾಡಿನ ಪ್ರಸಿದ್ದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗವಿಸಿದ್ದೇಶ್ವರ ಶ್ರೀಗಳ ಆಶಿರ್ವಾದ ಪಡೆದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇನೆ. ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದಿದ್ದೆನೆ. ನಾನು ಮಠದ ಅವರಣದಲ್ಲಿ ನಿಂತು ರಾಜಕೀಯ ಮಾತನಾಡೋದಿಲ್ಲ. ಸ್ವಾಮೀಜಿಗಳ ಬಗ್ಗೆ ಬಹಳ ಗೌರವವಿದೆ. ಇವತ್ತು ಪೂರ್ತಿ ಇಲ್ಲೆ ಇರುತ್ತೆನೆ. ಮುಂದೆ ರಾಜಕೀಯದ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಜನರನ್ನು ವಂಚಿಸುವುದಕ್ಕಾಗಿ ಗಾಂಧಿ ಎಂದು ಹೆಸರಿಟ್ಟುಕೊಂಡಿದ್ದಾರೆ: ಸಿಟಿ ರವಿ ಕಿಡಿ
ಕೊಪ್ಪಳದಲ್ಲಿ ವಿಜಯ ಸಂಕಲ್ಪ ಯಾತ್ರೆ ಕಹಳೆ
ಬಿಜೆಪಿ ರಾಜ್ಯದ ನಾಲ್ಕು ದಿಕ್ಕಿನಿಂದ ವಿಜಯಸಂಕಲ್ಪ ರಥಯಾತ್ರೆ ಆರಂಭಿಸಿದೆ. ಕಲ್ಯಾಣ ಕರ್ನಾಟಕದ ಬಸವಕಲ್ಯಾಣದಿಂದ ಆರಂಭವಾದ ವಿಜಯ ಸಂಕಲ್ಪ ಯಾತ್ರೆ ನಿನ್ನೆ (ಮಾ.12) ರಂದು ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಮುಖಾಂತರ ಯಾತ್ರೆ ಸಂಜೆ ಕೊಪ್ಪಳ ನಗರದತ್ತ ಆಗಮಿಸಿತು. ಇಂದು (ಮಾ.13) ಗಂಗಾವತಿ ನಗರಕ್ಕೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆಗಮಿಸಿದ್ದು, ಮದ್ಯಾಹ್ನ 12 ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ್ತಕ್ಕೆ ಆಗಮಿಸಿದೆ. ಈ ವೇಳೆ ಬೃಹತ್ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನಲ್ಲಿ ಹೇಮಂತ್ ಬಿಸ್ವಾ, ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.
ನಾಳೆ (ಮಾ.14ಕ್ಕೆ) ಅಂಜನಾದ್ರಿಗೆ ತೆರಳಲಿದೆ. ಈ ವೇಳೆ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ವಿವಿಧ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದ ರಾಜ್ಯ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಸಚಿವ ನಾರಾಯಣ ಸ್ವಾಮಿ, ಕೇಂದ್ರ ರಾಜ್ಯ ಸಚಿವ ಭಗವಂತ ಖೂಬಾ,ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಹಾಲಪ್ಪ ಆಚಾರ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ, ಸಂಸದ ಸಂಗಣ್ಣ ಕರಡಿ, ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ ದಡೇಸ್ಗೂರು, ವಿಪ ಸದಸ್ಯೆ ಹೇಮಲತಾ ನಾಯಕ, ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಇತರರು ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ