ಬಳ್ಳಾರಿಯಿಂದ ಕೊಪ್ಪಳಕ್ಕೆ ವಿದ್ಯಾರ್ಥಿನಿಯನ್ನು ಅಪಹರಿಸಿ ಬೀಯರ್ ಕುಡಿಸಿ ನಾಲ್ವರಿಂದ ಅತ್ಯಾಚಾರ
ಬಿಕಾಂ ವ್ಯಾಸಾಂಗ ಮಾಡುತ್ತಿರುವ ಬಳ್ಳಾರಿಯ ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಸಣಾಪುರ ಬಳಿಯ ಹೋಟೆಲ್ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಕೊಪ್ಪಳ, ಅ.14: ಬಳ್ಳಾರಿಯ (Ballari) ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ (Koppal) ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಸಣಾಪುರ ಬಳಿಯ ಹೋಟೆಲ್ನಲ್ಲಿ ಅತ್ಯಾಚಾರ ಎಸಗಲಾಗಿದ್ದು, ಆರೋಪಿಗಳಾದ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬಿಕಾಂ ವ್ಯಾಸಾಂಗ ವ್ಯಾಸಾಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿದ್ದಳು. ಈ ವೇಳೆ ಅಣ್ಣ ಬಂದಿರುವುದಾಗಿ ಹೇಳಿದಾಗ ವಿದ್ಯಾರ್ಥಿನಿ ಕಾಲೇಜಿನಿಂದ ಹೊರಗಡೆ ಹೋಗಿದ್ದಾಳೆ. ಈ ವೇಳೆ ಆರೋಪಿಗಳು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳ ಜಿಲ್ಲೆಯ ಸಣಾಪುರ ಬಳಿಯ ಅಂತರಾಳ ಕೆಫೆ ಹೋಟೆಲ್ಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ
ಬಳಿಕ ಬಿಯರ್ ಕುಡಿಸಿ ಮತ್ತು ಬರಿಸಿದ ಆರೋಪಿಗಳು ಆಕೆಯ ಮೇಲೆ ಸ್ನೇಹಿತ ಸೇರಿದಂತೆ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಘಟನೆ ಸಂಬಂಧ ಸಂತ್ರಸ್ತ ಯುವತಿಯು ಬಳ್ಳಾರಿ ನಗರದ ಕೌಲ್ ಬಜಾರ್ನ ನವೀನ್, ಸಾಕೀಬ್, ತನು ಸೇರಿದಂತೆ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:22 am, Sat, 14 October 23