ಬೆಳಗಾವಿ, ಕೊಪ್ಪಳದಲ್ಲಿ ಹೆಚ್ಚಾದ ಮಕ್ಕಳ ಕಳ್ಳರ ವದಂತಿ: ಇದು ಸುಳ್ಳು ಸುದ್ದಿ, ಇದಕ್ಕೆ ಕಿವಿ ಕೊಡ ಬೇಡಿ ಎಂದ ಎಸ್​ಪಿ

| Updated By: ಆಯೇಷಾ ಬಾನು

Updated on: Sep 14, 2022 | 9:09 AM

ಮಕ್ಕಳನ್ನ ಕದ್ದು ಅವರ ದೇಹದ ಭಾಗಗಳನ್ನ ತೆಗೆದು ಮಾರಾಟ ಮಾಡ್ತಿದ್ದಾರೆ ಅನ್ನೋ ವದಂತಿ ಹಬ್ಬುತ್ತಿವೆ. ಈ ರೀತಿ ಘಟನೆಗಳು ಬೆಳಗಾವಿ ಜಿಲ್ಲೆಯಲ್ಲಿ ನಡೆದಿಲ್ಲ ಎಂದು ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ, ಕೊಪ್ಪಳದಲ್ಲಿ ಹೆಚ್ಚಾದ ಮಕ್ಕಳ ಕಳ್ಳರ ವದಂತಿ: ಇದು ಸುಳ್ಳು ಸುದ್ದಿ, ಇದಕ್ಕೆ ಕಿವಿ ಕೊಡ ಬೇಡಿ ಎಂದ ಎಸ್​ಪಿ
ಸಾಂದರ್ಭಿಕ ಚಿತ್ರ
Follow us on

ಬೆಳಗಾವಿ: ಕೊಪ್ಪಳ ಹಾಗೂ ಬೆಳಗಾವಿಯಲ್ಲಿ ಮಕ್ಕಳ ಕಳ್ಳರು ಇದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಮಕ್ಕಳು ಕಳ್ಳರು ಬಂದಿದ್ದಾರೆ ಎಂಬ ವದಂತಿ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಮಕ್ಕಳು ಕಳ್ಳರು ಬಂದಿದ್ದಾರೆ ಅಂತಾ ವದಂತಿ ಹರಿದಾಡುತ್ತಿದೆ. ಮಕ್ಕಳನ್ನ ಕದ್ದು ಅವರ ದೇಹದ ಭಾಗಗಳನ್ನ ತೆಗೆದು ಮಾರಾಟ ಮಾಡ್ತಿದ್ದಾರೆ ಅನ್ನೋ ವದಂತಿ ಹಬ್ಬುತ್ತಿವೆ. ಈ ರೀತಿ ಘಟನೆಗಳು ಬೆಳಗಾವಿ ಜಿಲ್ಲೆಯಲ್ಲಿ ನಡೆದಿಲ್ಲ. ನಂದಗಡದಲ್ಲಿ ರಗ್ಗು ಮಾರುವವರನ್ನ ಹಿಡಿದು ಮಕ್ಕಳ ಕಳ್ಳರಂತಾ ತಿಳಿದುಕೊಂಡಿದ್ದರು. ಇನ್ನೊಂದು ಪ್ರಕರಣದಲ್ಲಿ ಅಸ್ವಸ್ಥನನ್ನ ಮಕ್ಕಳ ಕಳ್ಳ ಅಂತಾ ಹೇಳಲಾಗುತ್ತಿತ್ತು. ವಿಚಾರಿಸಿದಾಗ ಆತ ಮಾನಸಿಕ ಅಸ್ವಸ್ಥ ಅಂತಾ ಗೊತ್ತಾದ ಬಳಿಕ ಕುಟುಂಬಸ್ಥರಿಗೆ ಸೇರಿಸಲಾಗಿದೆ. ಕೌಜಲಗಿ ಗ್ರಾಮದಲ್ಲಿ ಸಿಕ್ಕವರು ಸಾಧುಗಳಾಗಿದ್ದು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಪ್ರಕರಣಗಳು ಈವರೆಗೂ ನಡೆದಿಲ್ಲ. ಯಾರು ಕೂಡ ಇದನ್ನ ನಂಬದೇ ಕಾನೂನು ಕೈಗೆ ತೆಗೆದುಕೊಳ್ಳಬಾರದು. ನಿಮ್ಮ ಪ್ರದೇಶದಲ್ಲಿ ಅಪರಿಚಿತರು ಕಂಡು ಬಂದ್ರೇ 112ಗೆ ಕರೆ ಮಾಡಿ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಸತ್ಯಾಸತ್ಯತೆ ಪರಿಶೀಲನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನರು ಕೈಜೋಡಿಸುವಂತೆ ಎಸ್‌ಪಿ ಡಾ‌.ಸಂಜೀವ ಪಾಟೀಲ್ ಮನವಿ‌ ಮಾಡಿದ್ದಾರೆ.

ಮತ್ತೊಂದು ಕಡೆ ಕೊಪ್ಪಳದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ಸುದ್ದಿ ಸುಳ್ಳು ಎಂದು ಕೊಪ್ಪಳ ಎಸ್ಪಿ ಅರುಣಾಂಗ್ಶುಗಿರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ಸುಳ್ಳು. ಭಯಾನಕ ವಿಡಿಯೋ ಮೂಲಕ ಜನರಲ್ಲಿ ಭೀತಿ ಎಬ್ಬಿಸಲಾಗುತ್ತಿದೆ. ಸಾಮಾಜಿಕ ಜಾಲತಾಣದ ಮೂಲಕ ಮಕ್ಕಳ ಕಳ್ಳರ ಸುಳ್ಳು ವದಂತಿ ಹರಡುತ್ತಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೊಪ್ಪಳ ಎಸ್ಪಿ ಸೂಚಿಸಿದ್ದಾರೆ. ಅನುಮಾನ ಬಂದರೆ ಪೊಲೀಸರಿ ಮಾಹಿತಿ ನೀಡಲು ತಿಳಿಸಿದ್ದಾರೆ.

ಯಾವುದೇ ಕಾರಣಕ್ಕೂ ಯಾರ ಮೇಲೆ ಹಲ್ಲೆ ಮಾಡದಂತೆ ಸೂಚಿಸಿದ್ದು ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಲಾಗಿದೆ. ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂಗೆ ಕರೆ ಮಾಡಲು ಮನವಿ ಮಾಡಲಾಗಿದೆ. ಭೀತಿಯಲ್ಲಿ ಯಾರ ಮೇಲೂ ಹಲ್ಲೆ ಮಾಡುವಂತಿಲ್ಲ. ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಸುಖಾಸುಮ್ಮನೆ ವಂದತಿ ಹಬ್ಬಿಸುವಂತಿಲ್ಲ. ಬಂದ ಸುಳ್ಳು ಸುದ್ದಿಗಳನ್ನು ಹರಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದರೆ ಕಾನೂನಿನ ಪ್ರಕಾರ ಕ್ರಮ ಅಂತಾ ಜಿಲ್ಲಾ ಎಸ್ಪಿ ಪ್ರಕಟಣೆ ಹೊರಡಿಸುವ ಮೂಲಕ ಖಡಕ್ ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Wed, 14 September 22