AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಡಿ ಸಂಗಣ್ಣ ಸ್ವಾಭಿಮಾನ ಸಮಾವೇಶ; ಸೆಡ್ಡು ಹೊಡೆದ ಬಿಜೆಪಿಯಿಂದ ಶಕ್ತಿ ಕುಂದಿಸುವ ತಂತ್ರ

ಲೋಕಸಭೆ ಚುನಾವಣೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಕೆಲವರಿಗೆ ಟಿಕೆಟ್ ಮಿಸ್ ಆಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಪೈಕಿ ಕೊಪ್ಪಳದ ಬಿಜೆಪಿ ಹಾಲಿ ಸಂಸದ ಕರಡಿ ಸಂಗಣ್ಣ ಒಬ್ಬರು. ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ ಬೆಂಬಲಿಗರ ಸಮಾವೇಶ ಆಯೋಜಿಸಿದ್ದಾರೆ. ಇದಕ್ಕೆ ಬಿಜೆಪಿ ಸೆಡ್ಡು ಹೊಡೆದಿದೆ.

ಕರಡಿ ಸಂಗಣ್ಣ ಸ್ವಾಭಿಮಾನ ಸಮಾವೇಶ; ಸೆಡ್ಡು ಹೊಡೆದ ಬಿಜೆಪಿಯಿಂದ ಶಕ್ತಿ ಕುಂದಿಸುವ ತಂತ್ರ
ಕರಡಿ ಸಂಗಣ್ಣ ಸ್ವಾಭಿಮಾನ ಸಮಾವೇಶ ವಿಫಲಗೊಳಿಸಲು ಬಿಜೆಪಿ ತಂತ್ರ
ಸಂಜಯ್ಯಾ ಚಿಕ್ಕಮಠ
| Updated By: Rakesh Nayak Manchi|

Updated on: Mar 21, 2024 | 12:51 PM

Share

ಕೊಪ್ಪಳ, ಮಾ.21: ಲೋಕಸಭೆ ಚುನಾವಣೆ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಕೆಲವರಿಗೆ ಟಿಕೆಟ್ ಮಿಸ್ ಆಗಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಪೈಕಿ ಕೊಪ್ಪಳದ (Koppal) ಬಿಜೆಪಿ ಹಾಲಿ ಸಂಸದ ಕರಡಿ ಸಂಗಣ್ಣ (Karadi Sanganna) ಒಬ್ಬರು. ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಕರಡಿ ಸಂಗಣ್ಣ ಅವರಿಗೆ ಬಿಜೆಪಿ ಟಿಕೆಟ್ ಮಿಸ್ ಆದ ಹಿನ್ನೆಲೆ ಬೆಂಬಲಿಗರ ಸಮಾವೇಶ ಆಯೋಜಿಸಿದ್ದಾರೆ. ಇದಕ್ಕೆ ಬಿಜೆಪಿ ಸೆಡ್ಡು ಹೊಡೆದಿದೆ.

ಬಿಜೆಪಿ ಹೈಕಮಾಂಡ್​ಗೆ ಸೆಡ್ಡು ಹೊಡೆದ ಕರಡಿ ಸಂಗಣ್ಣ ಅವರು ಕೊಪ್ಪಳದಲ್ಲಿ ಸ್ವಾಭಿಮಾನದ ಹೆಸರಲ್ಲಿ ಬೆಂಬಲಿಗರ ಸಮಾವೇಶ ಆಯೋಜಿಸಿದ್ದು, ಇದನ್ನು ವಿಫಲಗೊಳಿಸಲು ಬಿಜೆಪಿ ನಾಯಕರು ತಂತ್ರಗಾರಿ ಮಾಡಿದ್ದಾರೆ. ಸಭೆಗೆ ಹೋಗದಂತೆ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಮೌಖಿಕ ಸಂದೇಶ ನೀಡಿದ್ದಾರೆ. ಆ ಮೂಲಕ ಕರಡಿ ಸಂಗಣ್ಣ ಶಕ್ತಿ ಕುಂದಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಕೊಪ್ಪಳ ಲೋಕಸಭಾ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿರೋ ಕರಡಿ ಸಂಗಣ್ಣ ಅವರು ಇಂದು ಕೊಪ್ಪಳ ನಗರದಲ್ಲಿ ಸ್ವಾಭಿಮಾನಿ ಸಮಾವೇಶ ಹೆಸರಲ್ಲಿ ಬೆಂಬಲಿಗರ ಸಭೆ ಕರೆದಿದ್ದಾರೆ. ಬಿಜೆಪಿ ಹೈಕಮಾಂಡ್​ಗೆ ಸೆಡ್ಡು ಹೊಡೆದು ಸಭೆ ನಡೆಸಲು ಮುಂದಾಗಿರುವ ಸಂಗಣ್ಣ ಅವರು ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಕರೆದಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿಯನ್ನು ದಿಲ್ಲಿಗೆ ಕರೆಯಿಸಿಕೊಂಡು ಮಾತನಾಡಿದ ಶಾ, ಭೇಟಿ ಹಿಂದಿನ ರಹಸ್ಯವೇನು?

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದ ಕರಡಿ ಸಂಗಣ್ಣ, ಈ ಬಾರಿ ಕೂಡ ತನಗೆ ಸುಲಭವಾಗಿ ಟಿಕೆಟ್ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದರು. ಆದರೆ, ಬಿಜೆಪಿ ಹೈಕಮಾಂಡ್, ಕರಡಿ ಸಂಗಣ್ಣಗೆ ಕೈಕೊಟ್ಟಿದ್ದು, ವೈದ್ಯರಾಗಿರುವ ಡಾ. ಬಸವರಾಜ್ ಎನ್ನುವವರಿಗೆ ಕ್ಷೇತ್ರದಲ್ಲಿ ಮಣೆ ಹಾಕಿದೆ.

ಯಾವ ಕಾರಣಕ್ಕೆ ಟಿಕೆಟ್ ನೀಡಿಲ್ಲ, ತಪ್ಪಿಸಿದವರು ಯಾರು, ಟಿಕೆಟ್ಗೆ ಯಾವ ಮಾನದಂಡ ಅನುಸರಿಸಲಾಗಿದೆ. ಯಾಕೆ ನನ್ನ ಜೊತೆ ಹೈಕಮಾಂಡ್ ನಾಯಕರು ಮಾತನಾಡಲಿಲ್ಲ ಎಂದು ಪ್ರಶ್ನೆ ಮಾಡಿರುವ ಕರಡಿ ಸಂಗಣ್ಣ, ತನ್ನ ಪ್ರಶ್ನೆಗೆ ಹೈಕಮಾಂಡ್ ನಾಯಕರು ಉತ್ತರಿಸಬೇಕು ಹೇಳಿದ್ದರು. ಅಷ್ಟೇ ಅಲ್ಲದೆ, ಕರಡಿ ಸಂಗಣ್ಣ ಕಾಂಗ್ರೆಸ್​ಗೆ ಹೋಗ್ತಾರೆ, ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎನ್ನುವ ಹತ್ತಾರು ಉಹಾಪೋಹಗಳ ನಡುವೆ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ.

ಕರಡಿ ಸಂಗಣ್ಣ ಮನವೊಲಿಸುವ ಕಸರತ್ತು

ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಕರಡಿ ಸಂಗಣ್ಣ ಅವರನ್ನು ಮನವೊಲಿಸಲು ಬಿಜೆಪಿ ನಾಯಕರು ಕಸರತ್ತು ನಡೆಸಿದ್ದರು. ವಿಧಾನಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿರುವ ಜಿಲ್ಲೆಯ ಶಾಸಕ ದೊಡ್ಡನಗೌಡ ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀಳ್ ಗುಳಗಣ್ಣವರ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕರಡಿ ಸಂಗಣ್ಣ ಮನೆಗೆ ಭೇಟಿ ನೀಡಿ, ಸಂಗಣ್ಣ ಜೊತೆ ಮಾತುಕತೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ಪಕ್ಷ ಬಿಡುವ ನಿರ್ಧಾರ ಮಾಡಬೇಡಿ. ಸುದ್ದಿಗೋಷ್ಟಿ ಮಾಡಬೇಡಿ, ಪಕ್ಷದಲ್ಲಿಯೇ ಇರಿ, ಪಕ್ಷ ನಿಮ್ಮ ಸೇವೆಯನ್ನು ಗುರುತಿಸುತ್ತದೆ ಎಂದು ಹೇಳಿ ಮನವೊಲಿಸುವ ಯತ್ನ ನಡೆಸಿದ್ದರು. ಜೊತೆಗೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಜೊತೆ ಕೂಡ ಮಾತನಾಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ