AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ: ‘ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ’: ಬಿಜೆಪಿ ಶಾಸಕ ಗಂಭೀರ ಆರೋಪ

ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ ನೀಡಿದ್ದರ ಬಗ್ಗೆ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ ಎಂದಿದ್ದಾರೆ. ಸಚಿವ ಸ್ಥಾನಕ್ಕೆ 100-150 ಕೋಟಿ ರೂ ಬೇಡಿಕೆ ಇತ್ತು ಎಂಬ ತಮ್ಮ ಹಿಂದಿನ ಹೇಳಿಕೆಗೆ ಈಗಲೂ ಬದ್ಧ ಎಂದು ಹೇಳಿದ್ದಾರೆ.

ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ: ‘ಒಂದು ಕೋಟಾ, ಮತ್ತೊಂದು ಪೇಮೆಂಟ್ ಕೋಟಾ’: ಬಿಜೆಪಿ ಶಾಸಕ ಗಂಭೀರ ಆರೋಪ
ಶಿವರಾಜ ತಂಗಡಗಿ, ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ Image Credit source: tv9 kannada
ಶಿವಕುಮಾರ್ ಪತ್ತಾರ್
| Edited By: |

Updated on: Aug 03, 2026 | 3:39 PM

Share

ಕೊಪ್ಪಳ, ಆಗಸ್ಟ್​​ 03: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯ (Karnataka Cabinet) ಬೆನ್ನಲ್ಲೇ ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ್ (Doddanagouda Patil) ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳದಂತಹ ಸಣ್ಣ ಜಿಲ್ಲೆಗೆ ಎರಡು ಸಚಿವ ಸ್ಥಾನಗಳನ್ನು ನೀಡಿರುವುದನ್ನು ಸ್ವಾಗತಿಸುತ್ತಲೇ, ಇದರಲ್ಲಿ ‘ಒಂದು ಸ್ಥಾನ ಜಿಲ್ಲೆಯ ಕೋಟಾವಾದರೆ, ಮತ್ತೊಂದು ಪೇಮೆಂಟ್ ಕೋಟಾ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಟಾರ್ಗೆಟ್ ರೀಚ್ ಆಗಿರಬೇಕು: ಅದಕ್ಕೆ ಸಂಪುಟ ವಿಸ್ತರಣೆಯಾಗಿದೆ; ದೊಡ್ಡನಗೌಡ ಪಾಟೀಲ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ್, ‘ಹಣಕ್ಕಾಗಿ ಸಂಪುಟ ವಿಸ್ತರಣೆಯಾಗುತ್ತಿಲ್ಲ ಎಂದು ಹಿಂದೆ ಹೇಳಲಾಗಿತ್ತು. ಆದರೆ, ಈಗ ಹಣದ ಡೀಲ್ ಮತ್ತು ಸೆಟ್ಲ್‌ಮೆಂಟ್ ಮುಗಿದಿರಬೇಕು, ಟಾರ್ಗೆಟ್ ರೀಚ್ ಆಗಿರಬೇಕು, ಅದಕ್ಕೆ ಇಂದು ಸಂಪುಟ ವಿಸ್ತರಣೆಯಾಗಿದೆ’ ಎಂದು ವ್ಯಂಗ್ಯವಾಡಿದರು.

ಸಚಿವ ಸ್ಥಾನಕ್ಕಾಗಿ 100 ರಿಂದ 150 ಕೋಟಿ ರೂ ಬೇಡಿಕೆ: ಈ ಹೇಳಿಕೆಗೆ ಈಗಲೂ ಬದ್ಧ ಎಂದ ದೊಡ್ಡನಗೌಡ ಪಾಟೀಲ್

ಇನ್ನು ಮುಂದುವರಿದು ಮಾತನಾಡಿದ ಅವರು, ‘ಸಚಿವ ಸ್ಥಾನಕ್ಕಾಗಿ 100 ರಿಂದ 150 ಕೋಟಿ ರೂ ಬೇಡಿಕೆ ಇದೆ ಎಂದು ನಾನು ಈ ಹಿಂದೆ ಹೇಳಿದ್ದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಸಣ್ಣ ಜಿಲ್ಲೆಯಾಗಿದ್ದರೂ ಕೊಪ್ಪಳಕ್ಕೆ ಎರಡು ಸಚಿವ ಸ್ಥಾನ ಸಿಕ್ಕಿದೆ. ಇವುಗಳಲ್ಲಿ ಯಾರಿಗೆ ‘ಪೇಮೆಂಟ್ ಕೋಟಾ’ ಅಡಿಯಲ್ಲಿ ಸಚಿವ ಸ್ಥಾನ ಸಿಕ್ಕಿದೆ ಎಂಬುದು ಮುಂಬರುವ ದಿನಗಳಲ್ಲಿ ಗೊತ್ತಾಗಲಿದೆ’ ಎಂದಿದ್ದಾರೆ.

ಇದನ್ನೂ ಓದಿ: ‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಸಚಿವ ಸ್ಥಾನ ಸಿಕ್ಕಿದ್ದಕ್ಕೆ ವರಿಷ್ಠರಿಗೆ ಧನ್ಯವಾದ ಹೇಳಿದ ಶಿವಲಿಂಗೇಗೌಡ

ಇದೇ ವೇಳೆ, ನೂತನವಾಗಿ ಸಚಿವ ಸ್ಥಾನ ಪಡೆದಿರುವ ಶಿವರಾಜ ತಂಗಡಗಿ ಹಾಗೂ ಬಸವರಾಜ ರಾಯರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕರು, ‘ಇಬ್ಬರೂ ಸಚಿವರು ತಕ್ಷಣವೇ ಜಿಲ್ಲೆಯ ತ್ವರಿತಗತಿಯ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಿ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ