
ಕೊಪ್ಪಳ: ರಸ್ತೆಅಪಘಾತದಲ್ಲಿ ಗಾಯಗೊಂಡಿದ್ದ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಟನಕನಕಲ್ ಬಳಿ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಸಣ್ಣ ಕರಡಿ ಅವರು ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ (68) ಚಿಕಿತ್ಸೆ ಫಲಕಾರಿಯಾಗದೆ ಕೆ.ಎಸ್. ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದೂ ಓದಿ:
ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ- ಮಾಜಿ ಸಿಎಂ ಯಡಿಯೂರಪ್ಪ