Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಏಪ್ರಿಲ್ 18 ಮತ್ತು 19ರಂದು ಕೊಪ್ಪಳ(Koppala) ಜಿಲ್ಲೆಯ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಏಪ್ರಿಲ್ 18, 19ರಂದು ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 13, 2024 | 3:08 PM

ಕೊಪ್ಪಳ, ಏ.13: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ(CET Exam)ಯು ಏಪ್ರಿಲ್ 18 ಮತ್ತು 19ರಂದು ಕೊಪ್ಪಳ(Koppala) ಜಿಲ್ಲೆಯ ಹಲವು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶಾತಿಯ ಸಿಇಟಿ ಪರೀಕ್ಷೆಯು ಏ.18 ಮತ್ತು 19ರ ಬೆಳಿಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿವೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕೊಪ್ಪಳದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ:ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಕೊಪ್ಪಳ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ವಿವರ

ಗಂಗಾವತಿಯ ಸರ್ಕಾರಿ ಬಾಲಕರ ಪಿಯು ಕಾಲೇಜ್, ಪಂಪಾನಗರದ ಹೆಚ್.ಆರ್.ಸರೋಜಮ್ಮ ಬಾಲಕಿಯರ ಪಿಯು ಕಾಲೇಜ್, ಸರ್ಕಾರಿ ಎಸ್.ಎಮ್.ಎನ್.ಎಮ್ ಬಾಲಕಿಯರ ಪಿಯು ಕಾಲೇಜು ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಸರಕಾರಿ ಬಾಲಕಿಯರ ಪಿಯು ಕಾಲೇಜ್, ಸರಕಾರಿ ಬಾಲಕರ ಪಿಯು ಕಾಲೇಜ್, ಭಾಗ್ಯನಗರದ ಸರಕಾರಿ ಪಿಯು ಕಾಲೇಜು, ಕುಷ್ಟಗಿ ರಸ್ತೆಯಲ್ಲಿರುವ ಕಾಳಿದಾಸ ಕಂಪೋಸಿಟ್ ಪಿಯು ಕಾಲೇಜು, ಭಾಗ್ಯನಗರದ ನವಚೇತನ ಪಿಯು ಸೈನ್ಸ್ ರೆಸಿಡೆನ್ಸಿಯಲ್ ಕಾಲೇಜು, ಕಿಡದಾಳನಲ್ಲಿರುವ ಶ್ರೀ ಶಾರದಾ ಪಿಯು ಕಾಲೇಜು.

ಜೊತೆಗೆ ಗವಿಮಠ ಕ್ಯಾಂಪಸ್​ನ ಎಸ್.ಜಿ.ವಿ.ವಿ.ಟಿ.ಎಸ್ ಪೂಜ್ಯಯ ಶ್ರೀ ಮರಿಶಾಂತವೀರ ಸ್ವಾಮೀಜಿ ಪಿಯು ಕಾಲೇಜ್, ಭಾಗ್ಯನಗರದ ಓಜನಹಳ್ಳಿ ರಸ್ತೆಯಲ್ಲಿರುವ ಜ್ಞಾನ ಬಂಧು ಪಿಯು ಕಾಲೇಜ್, ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಪ್ರೈಮರಿ ಅಂಡ್ ಹೈ ಸ್ಕೂಲ್ ಸೇರಿದಂತೆ ಈ ಎಲ್ಲಾ 14 ಪರೀಕ್ಷಾ ಕ್ಷೇದ್ರಗಳಲ್ಲಿ ಇಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರ್ನರಿ, ಫಾರ್ಮಸಿ, ಹಾಗೂ ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಏ.18 ಮತ್ತು 19 ರಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿವೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ