ಕೊಪ್ಪಳ: ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಕಲುಷಿತ ನೀರು ಪೋರೈಕೆಯಾಗಲು ಕಾರಣರಾದವರ ಮೇಲೆ ಕ್ರಮಕ್ಕೆ ಸಚಿವರು ಮುಂದಾಗಿದ್ದಾರೆ.

ಕೊಪ್ಪಳ: ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ
Rakesh Nayak Manchi

Updated on: Jun 11, 2023 | 7:00 PM

ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ (Shivaraj Tangadagi) ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಸ್ಥರನ್ನು ಭೇಟಿಯಾದ ಸಚಿವರು ಸಾಂತ್ವನ ಹೇಳಿ ಪರಿಹಾರ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ಸೂಚನೆ ಮೇರೆಗೆ ಪರಿಹಾರ ಘೋಷಣೆ ಮಾಡಿದ್ದೇನೆ. ಒಂದು ವಾರದೊಳಗೆ ಅವರಿಗೆ ಪರಿಹಾರ ನೀಡುತ್ತೇವೆ ಹೇಳಿದ್ದಾರೆ.

ಜಲ ಜೀವನ್ ಕಾಮಗಾರಿ ವೇಳೆ ಲೋಪಗಳಾಗಿವೆ. ಇದರಿಂದ ಗ್ರಾಮದಲ್ಲಿ ನೀರು ಕಲುಷಿತವಾಗಿದೆ. ಈ ಪ್ರಕರಣದಲ್ಲಿ ಮೂರು ಜನ ಜೀವ ಹಾನಿಯಾಗಿದೆ. ಮೃತರಿಗೆ ಒಂದು ವಾರದಲ್ಲಿ 2 ಲಕ್ಷ ಪರಿಹಾರ ನೀಡಲಾಗತ್ತದೆ ಎಂದು ಹೇಳಿದ ಶಿವರಾಜ್ ತಂಗಡಗಿ, ಕಲುಷಿತ ನೀರು ಪೋರೈಕೆಯಾಗಲು ಕಾರಣರಾದವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನೊಂದೆಡೆ, ಕಾಮಗಾರಿ ನಡೆಸಿದ ಕಾಂಟ್ರಾಕ್ಟರ್​ನನ್ನು ಬ್ಲಾಕ್ ಲಿಸ್ಟ್​​ಗೆ ಸೇರಿಸಲು ಜಿಲ್ಲಾಡಳಿತ ಮುಂದಾಗಿದೆ.

ಇದನ್ನೂ ಓದಿ: ಆನೇಕಲ್: ಕಲುಷಿತ ನೀರು ಕುಡಿದು ಅಪಾರ್ಟ್‌ಮೆಂಟ್​ನ 127 ಜನ ಅಸ್ವಸ್ಥ; ಅವಘಡಕ್ಕೆ ಟ್ಯಾಂಕರ್ ನೀರು ಕಾರಣ

ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮದ ತನಿಖೆ ನಡೆಸುತ್ತೇವೆ. ಯಾರೇ ತಪ್ಪು ‌ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಪ್ರಕರಣಕ್ಕೆ ಸಹಕರಿಸಿದ ಅಧಿಕಾರಿಗಳನ್ನ ಅಮಾನತು ಮಾಡುತ್ತೇವೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿ ಒಂದೂವರೆ ವರ್ಷದ ಮಗು ತಾವರಗೇರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ನಂತರ ಹೊನ್ನಮ್ಮ ಎಂಬ ವೃದ್ದೆ ಸಾವನ್ನಪ್ಪಿದ್ದರು. ಆದರೆ ವೃದ್ಧೆಗೆ ಬೇರೆ ಬೇರೆ ಕಾಯಿಲೆಗಳಿದ್ದವು ಎಂದು ಕೊಪ್ಪಳ ಡಿಹೆಚ್​ಓ ತಿಳಿಸಿದ್ದರು. ಇದಾದ ನಂತರ ಬಿಜಕಲ್ ಗ್ರಾಮದಲ್ಲಿ ಕಲುಷಿತ ನೀರು ಸೇವೆನೆಯಿಂದ 15 ಕ್ಕೂ ಹೆಚ್ಚು ಜನ‌ ಆಸ್ಪತ್ರೆಗೆ ದಾಖಲಾಗಿತ್ತು. ಈ ಪೈಕಿ ಬಾಲಕಿ ಸಾವನ್ನಪ್ಪಿದ್ದಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us