ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೊಪ್ಪಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದು ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತೆ ಎಂದು ಹೇಳಿದ್ದಾರೆ. ಪಠ್ಯದಲ್ಲಿ ದೇಶದ ಧರ್ಮಗ್ರಂಥ ಅಳವಡಿಸುವುದರಲ್ಲಿ ತಪ್ಪೇನಿದೆ. ಭಗವದ್ಗೀತೆ ನಮ್ಮ ದೇಶದ ಆಸ್ಮಿತೆ. ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯಿಸಿದ್ದೇ ಕಾಂಗ್ರೆಸ್ ಎಂದಿದ್ದಾರೆ.

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಡಿಕೆ ಶಿವಕುಮಾರ
Follow us
TV9 Web
| Updated By: ಆಯೇಷಾ ಬಾನು

Updated on: Mar 24, 2022 | 9:37 PM

ಕೊಪ್ಪಳ: ಮುಂದಿನ ಶೈಕ್ಷಣಿಕ ವರ್ಷದಿಂದ ಗುಜರಾತ್ನಲ್ಲಿ 6 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆಯನ್ನು(Bhagavad Gita) ಬೋಧಿಸಲು ಗುಜರಾತ್ ಸರ್ಕಾರ ಆದೇಶಿಸಿದೆ. ಹೀಗಾಗಿ ಗುಜರಾತ್ ಮಾದರಿಯನ್ನ ರಾಜ್ಯದಲ್ಲೂ ತರಬೇಕು ಎಂಬ ಬಗ್ಗೆ ಚರ್ಚೆ ಶುರುವಾಗಿ ಅದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸದ್ಯ ಈ ಬಗ್ಗೆ ಡಿ.ಕೆ.ಶಿವಕುಮಾರ್(DK Shivakumar) ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ಈ ಬಗ್ಗೆ ಕೊಪ್ಪಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದ್ದು ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಯನ್ನು ಕಾಂಗ್ರೆಸ್ ಸ್ವಾಗತಿಸುತ್ತೆ ಎಂದು ಹೇಳಿದ್ದಾರೆ. ಪಠ್ಯದಲ್ಲಿ ದೇಶದ ಧರ್ಮಗ್ರಂಥ ಅಳವಡಿಸುವುದರಲ್ಲಿ ತಪ್ಪೇನಿದೆ. ಭಗವದ್ಗೀತೆ ನಮ್ಮ ದೇಶದ ಆಸ್ಮಿತೆ. ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯಿಸಿದ್ದೇ ಕಾಂಗ್ರೆಸ್. ದೂರದರ್ಶನದಲ್ಲಿ ಭಗವದ್ಗೀತೆ ಪ್ರಚಾರ ಮಾಡಿದ್ದು ಕಾಂಗ್ರೆಸ್. ದೇಶದ ಎಲ್ಲಾ ಧರ್ಮವನ್ನು ಕಾಂಗ್ರೆಸ್ ಪಕ್ಷ ಗೌರವಿಸುತ್ತದೆ ಎಂದರು.

ಇನ್ನು ಇದೇ ವೇಳೆ ಕಾಂಗ್ರೆಸ್ ಸದಸ್ಯತ್ವ ನೀಡಲು ಇನ್ನೂ 7 ದಿನ ಸಮಯವಿದೆ, ನಮ್ಮ ನಿರೀಕ್ಷೆಯಷ್ಟು ಡಿಜಿಟಲ್ ಸದಸ್ಯತ್ವ ಮಾಡಿಸುತ್ತೇವೆ ಎಂದಿದ್ದಾರೆ. ಇನ್ನು ಹೊಸಪೇಟೆಯಲ್ಲಿ ಇಂದು ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು, ಸತತ ಮೂರು ದಿನಗಳಿಂದ ನಾನು ಕಲ್ಯಾಣ ಕರ್ನಾಟಕ ಪ್ರವಾಸ ಮಾಡುತ್ತಿರುವೆ. ಪಕ್ಷದ ಆಧಾರಸ್ತಂಭ ಕಾರ್ಯಕರ್ತರು. ಪಕ್ಷದ ಸದಸ್ಯತ್ವ ಅಭಿಯಾನದ ಮೂಲಕ ನಿಜವಾದ ಕಾರ್ಯಕರ್ತರನ್ನ ಮಾಡಬೇಕಿದೆ. ಕೊಪ್ಪಳ‌ ಜಿಲ್ಲೆಯಲ್ಲಿ ಅತಿ ಹೆಚ್ಚು ಸದಸ್ಯರ ನೊಂದಣಿ ಮಾಡಲಾಗಿದೆ. ಇಡೀ ದೇಶದಲ್ಲಿ ತೆಲಂಗಾಣದಲ್ಲಿ 40 ಲಕ್ಷ ಸದಸ್ಯತ್ವ ಅಗಿದೆ. ನಮ್ಮ ರಾಜ್ಯದಲ್ಲಿ 28 ಲಕ್ಷ ಸದಸ್ಯತ್ವ ಆಗಿದೆ. ರಾಹುಲ್ ಗಾಂಧಿಯವರೇ ಸದಸ್ಯತ್ವ ನೊಂದಣಿ ಪರಿಶೀಲನೆ ನಡೆಸಲಿದ್ದಾರೆ. ಸದಸ್ಯತ್ವ ಆದ್ಯತೆ ನೀಡಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವೆ. ನಾವೂ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಸುತ್ತೇವೆ. ಸಿಎಂ ಅಧಿಕಾರದಲ್ಲಿ ಇದ್ದಾಗ ಮಾತ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆಸುತ್ತೇವೆ. ಈ ಬಾರಿ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚಿನ ಆದ್ಯತೆಯಲ್ಲಿ ಟಿಕೆಟ್ ಹಂಚಿಕೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: TV9 Kannada Survey: ಭಗವದ್ಗೀತೆ ಪಠ್ಯಕ್ರಮದಲ್ಲಿ ಅಗತ್ಯ ಇದೆ ? ಇಲ್ಲಿದೆ ಜನಾಭಿಪ್ರಾಯ

ಕಾಶ್ಮೀರ್ ಫೈಲ್ಸ್​​​ ತೆರಿಗೆ ಮುಕ್ತ ಮಾಡುವುದಕ್ಕಿಂತ ಯೂಟ್ಯೂಬ್​​ನಲ್ಲೇ ಹಾಕಿಬಿಡಿ, ಎಲ್ಲರೂ ನೋಡಲಿ: ಅರವಿಂದ ಕೇಜ್ರಿವಾಲ್

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ