AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಬಾಣಿ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನ: ಪ್ರಮೋದ್ ಮುತಾಲಿಕ್ ಆರೋಪ

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಲಂಬಾಣಿ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಆ ಜನರ ಮುಗ್ದತೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮತಾಂತರ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅನಧಿಕೃತ ಚರ್ಚ್​ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಲಂಬಾಣಿ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನ: ಪ್ರಮೋದ್ ಮುತಾಲಿಕ್ ಆರೋಪ
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 19, 2024 | 9:14 PM

Share

ಕೊಪ್ಪಳ, ಫೆಬ್ರವರಿ 19: ಲಂಬಾಣಿ ಜನರನ್ನು ಮಂತಾತರ ಮಾಡುವ ಪ್ರಯತ್ನ ನಡೀತಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಲಂಬಾಣಿ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದಾರೆ ಎಂದಿದ್ದಾರೆ. ಆ ಜನರ ಮುಗ್ದತೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮತಾಂತರ ದೇಶಕ್ಕೆ ಅಂಟಿಕೊಂಡ ದೊಡ್ಡ ವೈರಸ್​ ಮತ್ತು ಕ್ಯಾನ್ಸರ್. ಮೂರು ಸಾವಿರ ಚರ್ಚ್​ಗಳು ಕಾನೂನು ಬಾಹಿರ. ಮತಾಂತರ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅನಧಿಕೃತ ಚರ್ಚ್​ಗಳನ್ನು ಬುಲ್ಡೋಜರ್ ಮೂಲಕ ಒಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳು ಮೇಲೆ ದೌರ್ಜನ್ಯ ಮಾಡುತ್ತಿದೆ

ವಸತಿ ಶಾಲೆಗಳ ಬರಹ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಕಾಂಗ್ರೆಸ್​ನವರು ಬಾಬರ್ ಪರವಾಗಿ ನಿಂತರೇ ವಿನಃ ರಾಮನ ಪರ ನಿಲ್ಲಲಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಿಂದೂಗಳು ಮೇಲೆ ದೌರ್ಜನ್ಯ ಮಾಡುತ್ತಿದೆ. ಕೈ ಮುಗಿದು ಒಳಗೆ ಬಾ ಅಂದರೆ ಕಾಂಗ್ರೆಸ್​ನವರಿಗೆ ಏನು ತೊಂದರೆ ಮಾಡಿತು. ಒಳಗೆ ಬೇಕಾದರೆ ಪ್ರಶ್ನೆ ಮಾಡಲಿ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಕುಂಕುಮ ಕಂಡರೆ ಆಗಲ್ಲ 

ಗಣೇಶ ಹಬ್ಬ ಮಾಡಿದರೆ, ಸರಸ್ವತಿ ಪುಜೆ ಮಾಡಿದರೆ ನಿಮಗೇನು ತೊಂದರೆ. ಮುಸ್ಲಿಂ ಓಲೈಕೆಗಾಗಿ ಈ ರೀತಿ ‌ಸರ್ಕಾರ ಮಾಡುತ್ತಿದೆ. ನಿಮಗೆ ಹ್ಯಾಗ್ ಬೇಕೋ ಹಾಗೆ ಬದಲಾಯಿಸ್ತೀರಾ? ಸಿಎಂ ಸಿದ್ದರಾಮಯ್ಯಗಂತ ಕುಂಕುಮ ಕಂಡರೆ ಆಗಲ್ಲ. ಆದರೆ ದರ್ಗಾಕ್ಕೆ ಹೋಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕೇರಳದ ನಾಸ್ತಿಕ ಸರ್ಕಾರಕ್ಕೆ ಶಬರಿಮಲೆ ದುಡ್ಡು ಬೇಕು, ಭಕ್ತರಿಗೆ ವ್ಯವಸ್ಥೆ ಮಾಡುತ್ತಿಲ್ಲ: ಚಿಕ್ಕೋಡಿಯಲ್ಲಿ ಪ್ರಮೋದ್ ಮುತಾಲಿಕ್ ಆಕ್ರೋಶ

ನೂರು ರಾಮ ಮಂದಿರ ಅಭಿವೃದ್ಧಿ ಮಾಡುತ್ತೇವೆ ಅಂತ ಹೇಳಿದ್ದರು. ಆದರೆ ಬಜೆಟ್​ನಲ್ಲಿ ಅನುದಾನ ನೀಡಲಿಲ್ಲ. ಆದರೆ ಮುಸ್ಲಿಂರಿಗೆ ಅನೇಕ ರೀತಿಯ ಅನುದಾನ ನೀಡಿದ್ದಾರೆ. ರಾಮ ಮಂದಿರದ ಆನಂದವನ್ನು ತಡೆದುಕೊಳ್ಳಲು ಕಾಂಗ್ರೆಸ್​ನವರಿಗೆ ಆಗುತ್ತಿಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತದೆ.

ಇದನ್ನೂ ಓದಿ: ಶಿವಾಜಿಯವರ 36 ಬಾಡಿಗಾರ್ಡ್​ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

ಸುಪ್ರೀಂ ಕೋರ್ಟ್ 63 ಎಕರೆ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿ ಅಂತ ಹೇಳಿದೆ. ಇಂತಲ್ಲಿಯೇ ಗುದ್ದಲಿ ಇಟ್ಟು ನಿರ್ಮಾಣ ಮಾಡಿ ಅಂತ ಹೇಳಿಲ್ಲ. ರಾಮನ ಬಗ್ಗೆ ಏನಾದರೂ ಮಾತನಾಡಿದರೆ ರಾಮನ ಶಾಪ ತಟ್ಟುತ್ತೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:13 pm, Mon, 19 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!