AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ನಿಷೇಧದ ನಡುವೆಯೂ ಹನುಮಮಾಲಾ ವಿಸರ್ಜನೆಗೆ ಭರ್ಜರಿ ಸಿದ್ಧತೆ

ಅಂಜನಾದ್ರಿ ಬೆಟ್ಟದ ಬದಲಿಗೆ ನಿಮ್ಮ ಮನೆಗಳಲ್ಲಿಯೇ, ಊರುಗಳಲ್ಲಿಯೇ ಹನುಮಮಾಲೆ ವಿಸರ್ಜನೆ ಮಾಡಿ ಎಂದು ಜಿಲ್ಲಾಡಳಿತ ಸೂಚಿಸಿದೆ.

ಕೊಪ್ಪಳ: ನಿಷೇಧದ ನಡುವೆಯೂ ಹನುಮಮಾಲಾ ವಿಸರ್ಜನೆಗೆ ಭರ್ಜರಿ ಸಿದ್ಧತೆ
ಹನುಮಮಾಲಾ ಧಾರಿಗಳ ಶೋಭಾಯಾತ್ರೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 15, 2021 | 10:49 PM

Share

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ (ಡಿ 13) ಹನುಮ ಮಾಲಾ ವಿಸರ್ಜನೆಗೆ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಂಡಿವೆ. ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ನಿಷೇಧಿಸಿದೆ. ನಿಷೇಧದ ಮಧ್ಯೆಯೂ ಪ್ರಸಾದಕ್ಕಾಗಿ ಸಂಘಟನೆಗಳು 10 ಸಾವಿರ ಲಡ್ಡು ಸಿದ್ಧಪಡಿಸಿವೆ. ಹನುಮಮಾಲಾ ವಿಸರ್ಜನೆಗಾಗಿ ರಾಜ್ಯದ ವಿವಿಧೆಡೆಯಿಂದ ಅಂಜನಾದ್ರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಸಾಧ್ಯತೆಯಿದೆ. ಅಂಜನಾದ್ರಿ ಬೆಟ್ಟದ ಬದಲಿಗೆ ನಿಮ್ಮ ಮನೆಗಳಲ್ಲಿಯೇ, ಊರುಗಳಲ್ಲಿಯೇ ಹನುಮಮಾಲೆ ವಿಸರ್ಜನೆ ಮಾಡಿ ಎಂದು ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾಡಳಿತದ ಆದೇಶದ ನಡುವೆಯೂ ಅಂಜನಾದ್ರಿಗೆ ಬರಲು ಮಾಲಾಧಾರಿಗಳು ನಿರ್ಧರಿಸಿದ್ದಾರೆ. ಅಂಜನಾದ್ರಿ ಬೆಟ್ಟದ ಆಡಳಿತ ಮಂಡಳಿ ಯಾವುದೇ ಪ್ರಸಾದ ವ್ಯವಸ್ಥೆ ಮಾಡಿಕೊಂಡಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸ್ಪಷ್ಟಪಡಿಸಿದ್ದಾರೆ. ನಾವು ಯಾವುದೇ ಊಟೋಪಚಾರ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಎಲ್ಲರೂ ಕೊವಿಡ್ ನಿಯಮ ಪಾಲಿಸಬೇಕೆಂದು ಹೇಳಿದ್ದಾರೆ.

ವಿಹಿಂಪ ಮನವಿ ಅಂಜನಾದ್ರಿ ಬೆಟ್ಟದಲ್ಲಿ ನಡೆಯಲಿರುವ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದಲ್ಲಿ 40 ಸಾವಿರಕ್ಕೂ ಹೆಚ್ಚು ಭಕ್ತರು ಸೇರುವ ಸಾಧ್ಯತೆಯಿದೆ. ದೇಗುಲದಲ್ಲಿ ಅರ್ಚಕರ ವ್ಯವಸ್ಥೆಯ ಜೊತೆಗೆ ಕುಡಿಯುವ ನೀರು, ಪ್ರಸಾದ, ವಾಹನ ಪಾರ್ಕಿಂಗ್​ಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ಮನವಿ ಮಾಡಿದ್ದರು. ಕೊವಿಡ್ ಆತಂಕ ಇರುವ ಕಾರಣ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಯ ಹನುಮ‌ ಭಕ್ತರು ಹನುಮ ಮಾಲಾ ವಿಸರ್ಜನೆಯನ್ನು ಸಾಂಕೇತಿಕವಾಗಿ ಮನೆಯಲ್ಲಿಯೇ ಆಚರಣೆ ಮಾಡಬೇಕು. ಇತರ ಜಿಲ್ಲೆಯ ಭಕ್ತರಿಗೆ ಪ್ರವೇಶ ನೀಡಬೇಡಿ ಎಂದು ಪೊಲೀಸರಿಗೆ ಜಿಲ್ಲಾಡಳಿತ ಸೂಚಿಸಿದೆ.

ಸಿದ್ಧತೆ ಅಂಜನಾದ್ರಿ ಬೆಟ್ಟದ ಮೇಲೆ ಹನುಮಮಾಲಾ ವಿಸರ್ಜನೆ, ಪವಮಾನ ಹೋಮ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧ ಮಾಡಿಕೊಳ್ಳಲಾಗಿದೆ. ಸಂಚಾರ ಮಾರ್ಗವನ್ನು ಬದಲಿಸಲು ಪೊಲೀಸರು ಸೂಚಿಸಿದ್ದಾರೆ. ಕೊರೊನಾ ಮಾರ್ಗಸೂಚಿ ಅನುಸರಿಸಿಯೇ ಕಾರ್ಯಕ್ರಮ ನಿರ್ವಹಿಸುತ್ತೇವೆ. ನಿರ್ಬಂಧಗಳನ್ನು ಸಡಿಲಿಸಿ ಎಂದು ಜಿಲ್ಲಾಡಳಿತಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಮನವಿ ಮಾಡಿದ್ದಾರೆ. ಭಕ್ತರಿಗೆ ಅನ್ನ ಪ್ರಸಾದದ ವ್ಯವಸ್ಥೆ ಮಾಡುತ್ತೇವೆ ಎಂದು ಶಾಸಕ ಪರಣ್ಣ ಮನವಳ್ಳಿ ತಿಳಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಹನುಮ ಮಾಲಾಧಾರಿಗಳಿಂದ ಸಿದ್ಧರಬೆಟ್ಟದಲ್ಲಿ ನಿಯಮ ಉಲ್ಲಂಘನೆ: ಸ್ಥಳೀಯರ ಆರೋಪ ಇದನ್ನೂ ಓದಿ: ಲಕ್ಷ ಲಕ್ಷ ಜನ ಧರಿಸುವ ಹನುಮ ಮಾಲೆಯ ರೋಚಕ ಇತಿಹಾಸ!

Published On - 10:48 pm, Wed, 15 December 21

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್