ಕೊಪ್ಪಳ: ದಕ್ಷಿಣ ಭಾರತ ಮಹಾ ಕುಂಬಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಈಗ ಕ್ಷಣ ಗಣನೇ ಆರಂಭವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆಗಾಗಿ ಕೊಪ್ಪಳ ಜಿಲ್ಲೆಯ ಹಳ್ಳಿಯ ಜನತೆ ರೊಟ್ಟಿ ತಯಾರಿಯಲ್ಲಿ ತೊಡಗಿದ್ದಾರೆ.
ದಕ್ಷಿಣ ಭಾರತದ ಕುಂಭಮೇಳ ಅಂತಾನೆ ಪ್ರಖ್ಯಾತಿ ಪಡೆದಿರೋ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಇದೇ ಜನವರಿ 12 ರಂದು ಗವಿಸಿದ್ದೇಶ್ವರ ರಥೋತ್ಸವ ನಡೆಯಲಿದೆ. ಅಂದು ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ. ಈ ಜಾತ್ರೆಯ ವಿಶೇಷ ಅಂದ್ರೆ ಅಂದು ಆಗಮಿಸಿದ ಭಕ್ತರಿಗೆಲ್ಲಾ ರೊಟ್ಟಿ ಊಟ ಇರುತ್ತೆ. ಹೀಗಾಗಿ ಕೊಪ್ಪಳ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲೂ ರೊಟ್ಟಿ ತಯಾರಿ ಜೋರಾಗಿ ನಡೆದಿದೆ. ಅದ್ರಲ್ಲೂ ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮವೊಂದರಲ್ಲೇ ಬರೋಬ್ಬರಿ ಎರಡು ಕ್ವಿಂಟಾಲ್ ಜೋಳದ ಹಿಟ್ಟಿನಿಂದ ರೊಟ್ಟಿ ತಯಾರಿಸಲಾಗ್ತಿದೆ.
ಒಟ್ನಲ್ಲಿ ಉತ್ತರ ಕರ್ನಾಟಕ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರೋ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗ ಇನ್ನೊಂದೇವಾರ ಬಾಕಿ ಉಳಿದಿದೆ. ಜಾತ್ರೆಗಾಗಿ ಜಿಲ್ಲೆಯಾದ್ಯಂತ ಸಡಗರ ಸಂಭ್ರಮ ಜೋರಾಗಿದ್ದು, ಹಳ್ಳಿ ಹಳ್ಳಿಗಳಲ್ಲೂ ಲಕ್ಷಂತಾರ ರೊಟ್ಟಿ ತಯಾರಾಗ್ತಿವೆ.
Published On - 12:12 pm, Tue, 7 January 20