ಜಿಲ್ಲಾಡಳಿತ ನಿರ್ಧಾರ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್‌; ನವವೃಂದಾವನ ಗಡ್ಡೆ ರಾಯರ ಮಠಕ್ಕೆ ಹಿನ್ನಡೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿ ಸಮೀಪದ ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ತಾಲೂಕಾ ಆಡಳಿತ 144 ಸೆಕ್ಷನ್ ಜಾರಿ ಮಾಡಿರುವುದನ್ನು, ಪ್ರಶ್ನಿಸಿ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದ ರಾಯರ ಮಠಕ್ಕೆ ಹಿನ್ನಡೆಯಾಗಿದೆ.

ಜಿಲ್ಲಾಡಳಿತ ನಿರ್ಧಾರ ಎತ್ತಿ ಹಿಡಿದ ಧಾರವಾಡ ಹೈಕೋರ್ಟ್‌; ನವವೃಂದಾವನ ಗಡ್ಡೆ ರಾಯರ ಮಠಕ್ಕೆ ಹಿನ್ನಡೆ
ಧಾರವಾಡ ಹೈಕೋರ್ಟ್
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 15, 2022 | 9:55 PM

ಧಾರವಾಡ: ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ಹಂಪಿ (Hampi) ಸಮೀಪದ ಆನೆಗೊಂದಿಯಲ್ಲಿರುವ ನವವೃಂದಾವನ ಗಡ್ಡೆಯಲ್ಲಿ ತಾಲೂಕಾ ಆಡಳಿತ 144 ಸೆಕ್ಷನ್ ಜಾರಿ ಮಾಡಿರುವುದನ್ನು, ಪ್ರಶ್ನಿಸಿ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದ ರಾಯರ ಮಠಕ್ಕೆ ಹಿನ್ನಡೆಯಾಗಿದೆ. ಒಂದೇ ವೃಂದಾವನಕ್ಕೆ ರಘುವರ್ಯತೀರ್ಥಯತಿಗಳ ಹಾಗೂ ಜಯತೀರ್ಥಯತಿಗಳ  ನಾಮಫಲಕ ಅಳವಡಿಸಿಲಾಗಿತ್ತು. ಈ ಸಂಬಂಧ ಉತ್ತರಾದಿ ಮಠ ಮತ್ತು ರಾಯರ ಮಠದ ನಡುವೆ ವಿವಾದ ಸೃಷ್ಟಿಯಾಗಿತ್ತು.

ಈ ಮಧ್ಯೆ ರಘುವರ್ಯತೀರ್ಥರ ಆರಾಧನೆ ಹಾಗೂ ಜಯತೀರ್ಥರ ಆರಾಧನೆ ವಿಚಾರವಾಗಿ ಉತ್ತರಾದಿ ಮಠ ಮತ್ತು ರಾಯರ ಮಠದ ನಡುವೆ ವಿವಾದ ಉಂಟಾಗಿತ್ತು. ಜಯತೀರ್ಥರ ಆರಾಧನೆ ಮಾಡೋದಾಗಿ ರಾಯರ ಮಠ ವಾದ ಮಾಡಿದರೇ, ರಘುವರ್ಯತೀರ್ಥರ ಆರಾಧನೆಗೆ ಉತ್ತರಾದಿ ಮಠ ಪಟ್ಟು ಹಿಡದಿತ್ತು.

ಹೀಗಾಗಿ ಆರಾಧನೆಗೆ ಅವಕಾಶ ನೀಡಬೇಕು ಎಂದು ಎರಡೂ ಮಠಗಳ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ಉಪವಿಭಾಗಾಧಿಕಾರಿ ನೇತೃತ್ವದ ಸಭೆಯಲ್ಲಿ ಎರಡೂ ಮಠಗಳ ಪ್ರತಿನಿಧಿಗಳು ಒಮ್ಮತಕ್ಕೆ ಬರಲಿಲ್ಲ. ಹೀಗಾಗಿ ಜಿಲ್ಲಾಡಳಿತವು ನವಬೃಂದಾವನ ಗಡ್ಡೆಯಲ್ಲಿ ಆರಾಧನೆಗೆ ನಿರ್ಬಂಧ ವಿಧಿಸುವ ತೀರ್ಮಾನ ತೆಗೆದುಕೊಂಡಿತು.

ಹೀಗಾಗಿ ಜುಲೈ 13 ರಿಂದ 21 ರ ವರೆಗೂ 144 ಸೆಕ್ಷನ್ ಜಾರಿ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರು. ಈ ಸಂಬಂಧ ರಾಯರ ಮಠ 144 ಸೆಕ್ಷನ್ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಜಯತೀರ್ಥರ ಆರಾಧನೆಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡಿತ್ತು. ಆದರೆ ಹೈಕೋರ್ಟ್​​ ಜಿಲ್ಲಾಡಳಿತದ ನಿರ್ಧಾರವನ್ನು ಎತ್ತಿ ಹಿಡಿಯುವ ಮೂಲಕ ರಾಯರ ಮಠದ ಅರ್ಜಿಯನ್ನು ವಜಾಗೊಳಿಸಿದೆ. ರಾಯರ ಮಠಕ್ಕೆ ಹೈಕೋರ್ಟ್​ನಲ್ಲಿ ಹಿನ್ನೆಡೆಯಾಗಿದೆ.

Published On - 9:54 pm, Fri, 15 July 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?