ವಿಕಸಿತ ಭಾರತ ಸಂಕಲ್ಪ ಯಾತ್ರೆ ವೇಳೆ ಮೋದಿ ಭಾವಚಿತ್ರವಿದ್ದ ಪೋಸ್ಟರ್ ಹಿಡಿಯಲು ನಿರಾಕರಿಸಿದ ಗ್ರಾ.ಪಂ. ಅಧ್ಯಕ್ಷೆ; ಬಿಜೆಪಿ ಗರಂ
ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವ ಪೋಸ್ಟರ್ ಹಿಡಿಯಲು ಹಿಂದೇಟು ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಫರೀದಾ ಬೇಗಂ ಅವರ ನಡೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.
ಕೊಪ್ಪಳ, ಜ.04: ಕೊಪ್ಪಳ ಜಿಲ್ಲೆಯಲ್ಲಿ ನಡೆದ ಘಟನೆಯೊಂದು ಬಿಜೆಪಿ ಕಾರ್ಯಕರ್ತರ (BJP Karnataka) ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ (Viksit Bharat Sankalp Yatra) ಕಾರ್ಯಕ್ರಮ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಾವಚಿತ್ರ ಇರುವ ಪೋಸ್ಟರ್ ಹಿಡಿಯಲು ಹಿಂದೇಟು ಹಾಕಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಗ್ರಾಮ ಪಂಚಾಯತ್ ಅಧ್ಯಕ್ಷೆ ಫರೀದಾ ಬೇಗಂ ಅವರು ಮೋದಿ ಭಾವಚಿತ್ರ ಇರುವ ಪೋಸ್ಟರ್ ಹಿಡಿಯಲು ನಿರಾಕರಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದುರಿಮೋತಿ ಗ್ರಾಮದಲ್ಲಿ ನಿನ್ನೆ ಗ್ರಾಮ ಪಂಚಾಯತ್ ಆಚರಣದಲ್ಲಿ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲಾರು ಪೋಸ್ಟರ್ ಹಿಡಿದು ಜನರಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡ್ತಾ ಇದ್ರು. ಆದರೆ ಗ್ರಾ.ಪಂ. ಅಧ್ಯಕ್ಷೆ ಫರೀದಾ ಬೇಗಂ ಅವರು ಮಾತ್ರ ಪೋಸ್ಟರ್ ಹಿಡಿಯಲು ಹಿಂದೇಟು ಹಾಕಿದ್ದಾರೆ. ಕೈಗೆ ಪೋಸ್ಟರ್ ಕೊಡಲು ಬಂದಾಗ ಅದನ್ನು ಹಿಡಿಯಲು ಪದೇ ಪದೇ ನಿರಾಕರಿಸಿದ್ದಾರೆ. ಗ್ರಾಮ ಪಂಚಾಯತ್ನ ಪ್ರಥಮ ಪ್ರಜೆಯಾದ್ರೂ ರಾಜಕೀಯ ಮಾಡ್ತಿದ್ದಾರೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷೆಯ ನಡೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊಸ ಹಾಕಿದ್ದಾರೆ. ಹಾಗೇ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ರಾಮಲಲ್ಲಾ ವಿಗ್ರಹ ಆಯ್ಕೆ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ: ಪೇಜಾವರ ಶ್ರೀ
ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ, ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಆದರೆ, ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಜನಸಾಮಾನ್ಯರು ಕೂಡ ಅನೇಕ ಯೋಜನೆಗಳನ್ನ ಸದುಪಯೋಗ ಕೂಡ ಪಡಿಸಿಕೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಎಂಬ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಪ್ರತಿ ಗ್ರಾಮಪಂಚಾಯತಿ ಮಟ್ಟದಲ್ಲೂ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ