ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ; ನಾಲ್ಕು ಜಿಲ್ಲೆಯ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
ಈ ಬಾರಿ ಬರಗಾಲದಿಂದ ನಾಲ್ಕು ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಇದೀಗ ಬೇಸಿಗೆ ಆರಂಭ ಆಗಿರುವುದರಿಂದ ಕುಡಿಯುವ ನೀರಿಗೂ ತತ್ವಾರ ಆರಂಭವಾಗಿದೆ. ಇನ್ನು ಈ ನಾಲ್ಕು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಪ್ರಮುಖ ಮೂಲ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯ. ಈ ಹಿನ್ನೆಲೆಯಲ್ಲಿ ಇಂದು ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ ನಡೆಸಲಾಗಿದೆ.
ಕೊಪ್ಪಳ, ಫೆ.23: ಕಲ್ಯಾಣ ಕರ್ನಾಟಕದ ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳನ್ನು ಬಿಸಿಲ ನಾಡು ಎಂದೇ ಕರೆಯುತ್ತಾರೆ. ಈ ಬಾರಿ ಬರಗಾಲ(drought)ದಿಂದ ನಾಲ್ಕು ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಇದೀಗ ಬೇಸಿಗೆ ಆರಂಭ ಆಗಿರುವುದರಿಂದ ಕುಡಿಯುವ ನೀರಿಗೂ ತತ್ವಾರ ಆರಂಭವಾಗಿದೆ. ಇನ್ನು ಈ ನಾಲ್ಕು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಪ್ರಮುಖ ಮೂಲ ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿರುವ ತುಂಗಭದ್ರಾ ಜಲಾಶಯ. ಈ ಹಿನ್ನೆಲೆಯಲ್ಲಿ ಇಂದು ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿಯ ತುರ್ತು ಸಭೆ ನಡೆಸಲಾಗಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ತುಂಗಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾಗಿರುವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ 121 ನೇ ತುರ್ತು ಸಲಹಾ ಸಮಿತಿ ಸಭೆಯನ್ನು ನಡೆಸಲಾಯಿತು. ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ, ಯಾವ ಜಿಲ್ಲೆಗೆ ಯಾವ ಕಾಲುವೆ ಮೂಲಕ ಎಷ್ಟು ನೀರು ಹರಿಸಬೇಕು. ಕುಡಿಯುವ ನೀರಿಗೆ ಹಾಗೂ ಕೃಷಿಗೆ ಎಷ್ಟು ನೀರು ಹರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ನಾಲ್ಕು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಕೆಲ ರೈತರು ಭಾಗಿಯಾಗಿದ್ದರು. ಇಂದಿನ ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಿ, ಕೆಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಬರಗಾಲದಲ್ಲಿಯೂ ಮಂತ್ರಾಲಯ ಮಠದ ಗೋ ಶಾಲೆಗೆ ಮೇವು ದಾನ: ರೈತರ ಕಾರ್ಯಕ್ಕೆ ಶ್ರೀಗಳ ಮೆಚ್ಚುಗೆ
ನೀರಾವರಿ ಸಲಹಾ ಸಮಿತಿಯ ನಿರ್ಣಯಗಳು
ತುಂಗಭದ್ರಾ ಎಡದಂಡೆಯ ಮುಖ್ಯ ಕಾಲುವೆ ಮೂಲಕ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ನೀರು ಬಿಡಲು ನಿರ್ಣಯ ಕೈಗೊಳ್ಳಲಾಗಿದೆ. 5.3.24 ರಿಂದ 16.3.24 ರ ವರಗೆ ಪ್ರತಿ ದಿನ 1200 ಕ್ಯೂಸೆಕ್ ನಂತೆ ಕುಡಿಯುವ ನೀರು ಹರಿಸಲು ನಿರ್ಧರಿಸಲಾಗಿದೆ.
ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ ಮೂಲಕ, ಬಳ್ಳಾರಿ ಜಿಲ್ಲೆಗೆ ಹಾಗೂ ಇತರೆ ಗ್ರಾಮೀಣ ಕುಡಿಯುವ ನೀರು ಯೋಜನೆಗಳಿಗೆ 10.3.24 ರಿಂದ 23.3.24 ರವವರಗೆ ಪ್ರತಿ ದಿನ ನೂರು ಕ್ಯೋಸೆಕ್ ನಂತೆ ನೀರು ಹರಿಸಲು ನಿರ್ಧಾರ. ಇನ್ನು ಹೆಚ್ಚಿನ ಅಗತ್ಯ ಬಿದ್ದರೆ, 21.3.24 ರಿಂದ 31.3.24 ರವರಗೆ ಪ್ರತಿ ದಿನ ನೂರು ಕ್ಯೂಸೆಕ್ ನಂತೆ ಕುಡಿಯುವ ನೀರು ಮತ್ತು ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸಲು ನಿರ್ಣಯಿಸಯಾಗಿದೆ.
ಇನ್ನು ರಾಯ ಮತ್ತು ಬಸವಣ್ಣ ಕಾಲುವೆಗಳಿಗೆ, ವಿಜಯನಗರ ಜಿಲ್ಲೆಗೆ ಹಂಚಿಕೆಯಾದ 0.260 ಟಿಎಂಸಿ ನೀರಿನಲ್ಲಿ 1.3.24 ರಿಂದ 30.5.24 ರವರಗೆ 100 ಕ್ಯೂಸೆಕ್ ನಂತ ದಿನಬಂದಿ ಆಧಾರದ ಮೇಲೆ ಕುಡಿಯುವ ನೀರನ್ನು ಹರಿಸಬಹುದಾಗಿದೆ ಎಂದು ನಿರ್ಣಯಿಸಲಾಗಿದೆ.
105.79 ಟಿಎಂಸಿ ನೀರು ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ ಇರೋದು ಕೇವಲ 9.11 ಟಿಎಂಸಿ ನೀರು ಮಾತ್ರ. ಇದೇ ಸಮಯದಲ್ಲಿ ಕಳೆದ ವರ್ಷ ಡ್ಯಾಂ ನಲ್ಲಿ 34.22 ಟಿಎಂಸಿ ನೀರು ಇತ್ತು. ಆದ್ರೆ ಈ ಬಾರಿ ಬರಗಾಲದಿಂದ ಡ್ಯಾಂ ಒಮ್ಮೆಯೂ ಸಂಪೂರ್ಣವಾಗಿ ತುಂಬಿಲ್ಲಾ. ಡ್ಯಾಂ ನೀರು ಖಾಲಿಯಾಗುವ ಹಂತಕ್ಕೆ ಬಂದಿದೆ. ಹೀಗಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಡ್ಯಾಂ ನಲ್ಲಿರುವ ನೀರನ್ನು ಸರಿಯಾಗಿ ಹಂಚಿಕೆ ಮಾಡುವ ಜವಾಬ್ದಾರಿ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ.
ಈ ಬಗ್ಗೆ ಪ್ರತಿಕ್ರಿಯೇ ನೀಡಿರುವ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ, ‘ಬರಗಾಲದಿಂದ ಡ್ಯಾಂಗೆ ಈ ಬಾರಿ ನಿರೀಕ್ಷಿತ ನೀರು ಹರಿದು ಬಂದಿಲ್ಲ. ಇರುವ ನೀರಲ್ಲಿಯೇ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದಿನ ಸಲಹಾ ಸಮಿತಿಯಲ್ಲಿ ಸದ್ಯ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಹಂಚಿಕೆ ಮಾಡಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಕಾಲುವೆಗೆ ನೀರು ಬಿಟ್ಟಾಗ ನೀರು ಕಳ್ಳತನ ನಡೆಯೋದರಿಂದ, ನೀರು ಬಿಡುವ ಸಮಯದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು 144 ಸೆಕ್ಷನ್ ಜಾರಿ ಮಾಡಿ ಬಂದೂಬಸ್ತ ಮಾಡಬೇಕು. ಕಾಲುವೆ ಬಳಿ ಸೂಕ್ತ ಬಂದೂಬಸ್ಥ ನೇಮಕ ಮಾಡಬೇಕು ಅಂತ ಸೂಚನೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ