ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಇತಿ‌ಮಿತಿ ಇತ್ತು: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆ

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಇತಿ‌ಮಿತಿ ಇತ್ತು: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆ
ಬಸವರಾಜ್​ ರಾಯರೆಡ್ಡಿ (ಸಂಗ್ರಹ ಚಿತ್ರ)

Basavaraj Rayareddy : ಕಾಂಗ್ರೆಸ್ ಅವಧಿಯಲ್ಲಿನ ಭ್ರಷ್ಟಾಚಾರವನ್ನೂ ಒಪ್ಪಿಕೊಂಡಿರುವ ಬಸವರಾಜ್ ರಾಯರೆಡ್ಡಿ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಇತಿ‌ಮಿತಿ ಇತ್ತು ಎಂದಿದ್ದಾರೆ.

TV9kannada Web Team

| Edited By: shivaprasad.hs

May 07, 2022 | 9:21 AM

ರಾಜ್ಯದಲ್ಲಿ ಎಲ್ಲ ಸರ್ಕಾರಗಳ ಅವಧಿಯಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ (Basavaraj Rayareddy) ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅವಧಿಯಲ್ಲಿನ ಭ್ರಷ್ಟಾಚಾರವನ್ನೂ ಒಪ್ಪಿಕೊಂಡಿರುವ ಬಸವರಾಜ್ ರಾಯರೆಡ್ಡಿ, ‘‘ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಾಚಾರಕ್ಕೆ ಇತಿ‌ಮಿತಿ ಇತ್ತು. PSI ನೇಮಕಾತಿಯಲ್ಲಿ ಒಬ್ಬೊಬ್ಬರಿಂದ 1 ಕೋಟಿವರೆಗೆ ವಸೂಲಿಯಾಗಿದೆ. ಮೇಲ್ನೋಟಕ್ಕೆ ಇದು ಪ್ರೂವ್ ಆಗಿದೆ. ಖಾಸಗಿ ಶಾಲೆಗಳಲ್ಲಿ ಪ್ರಶ್ನೆಪತ್ರಿಕೆ‌ ಕೊಟ್ಟು ಪರೀಕ್ಷೆ ಬರೆಸಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸರ್ಕಾರ ಮತ್ತು ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಪ್ರಾಧ್ಯಾಪಕರ ನೇಮಕಾತಿಯಲ್ಲೂ 50-80 ಲಕ್ಷ ಲಂಚ ಪಡೆದಿದ್ದಾರೆ’’ ಎಂದು ಆರೋಪಿಸಿದ್ದಾರೆ.

ತಮ್ಮ ಸರ್ಕಾರದ ಅವಧಿಯಲ್ಲಿ ನಡೆದ ನೇಮಕಾತಿಯ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವರು, ‘‘ನಮ್ಮ ಅವಧಿಯಲ್ಲಿ 1,400 ಅಸಿಸ್ಟಂಟ್ ಪ್ರೊಫೆಸರ್ ನೇಮಕಾತಿ ಆಗಿದೆ. ನಾನಾಗಲಿ, ಅಧಿಕಾರಿಗಳಾಗಲಿ‌ 1 ರೂ. ಸಹ ಲಂಚ ತೆಗೆದುಕೊಂಡಿಲ್ಲ. ಇದನ್ನು ನಾನು ಹೇಳುತ್ತೇನೆ ಅಂತಾ ಬರೆಯಬೇಡಿ. ನೀವು ಬೇಕಿದ್ದರೆ ಹೋಗಿ ಚೆಕ್ ಮಾಡಿ’’ ಎಂದು ಹೇಳಿದ್ದಾರೆ. ನೇಮಕಾತಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ಫೇಲ್ ಆಗಿದೆ ಎಂದೂ ಹೇಳಿದ್ದಾರೆ ಬಸವರಾಜ್ ರಾಯರೆಡ್ಡಿ.

ಇಂದಿನಿಂದ ಎರಡು ದಿನ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ:

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ಎರಡು ದಿನ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜಂಟಿ ಪ್ರವಾಸ ಕೈಗೊಳ್ಳಲಿದ್ದು, ಎರಡು ದಿನಗಳ ಕಾಲ ಮೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೂರು ಕಡೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ನಡೆಯಲಿದೆ. 12ಗಂಟೆಗೆ ಅರಳಿಕಟ್ಟಿ ಗ್ರಾಮದಲ್ಲಿ ತೋಂಟದಾರ್ಯ ಮಠದ ಶಿವಮೂರ್ತಿ ದೇವರ ಪಟ್ಟಾಧಿಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಮಧ್ಯಾಹ್ನ 2ಕ್ಕೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಹಾರುಗೊಪ್ಪ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಬೈಲಹೊಂಗಲಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ, ಸಂಜೆ 5ಕ್ಕೆ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ರಾಮದುರ್ಗ ವಿಧಾನಸಭಾ ಕ್ಷೇತ್ರದ ಅವರಾದಿ, ಹುಲಕುಂದ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ನಾಳೆ ಸಂಜೆ 6.15ಕ್ಕೆ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಎಲೆಕ್ಷನ್‌ಗೆ ‘ಕೈ’ ಸಿದ್ಧತೆ:

ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಎಲೆಕ್ಷನ್‌ಗೆ ‘ಕೈ’ ಸಿದ್ಧತೆ ನಡೆಸುತ್ತಿದ್ದು, ಇಂದು (ಮೇ.7) ಬೆಳಗಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತೆರಳಲಿದ್ದಾರೆ. ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ನಾಲ್ಕು ಸಂಘಟನಾತ್ಮಕ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಮುಖಂಡರೊಂದಿಗೆ ಡಿಕೆಶಿ ಸಭೆ ನಡೆಸಲಿದ್ದಾರೆ. ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ 4 ಜಿಲ್ಲೆಗಳು ಅವಾಗಿದ್ದು, ಸಭೆ ಬಳಿಕ ಹುಬ್ಬಳ್ಳಿ ಮೂಲಕ ಬೆಂಗಳೂರಿಗೆ ಡಿಕೆಶಿ ವಾಪಸ್ ಆಗಲಿದ್ದಾರೆ.

ಬ್ರೇಕಿಂಗ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ

ಪ್ರಮುಖ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow us on

Related Stories

Most Read Stories

Click on your DTH Provider to Add TV9 Kannada