ಕನಕಗಿರಿ: ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ; ಇಬ್ಬರ ಹತ್ಯೆ

ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಕನಕಗಿರಿ: ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ; ಇಬ್ಬರ ಹತ್ಯೆ
ಘರ್ಷಣೆಯ ನಂತರ ಕನಕಗಿರಿ ಆಸ್ಪತ್ರೆ ಆವರಣದಲ್ಲಿ ಗಾಯಾಳು ಮತ್ತು ಮೃತರ ಸಂಬಂಧಿಕರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 11, 2022 | 3:20 PM

ಕೊಪ್ಪಳ: ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯ ಗೆಳೆತನದ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಗ್ರಾಮದಲ್ಲಿ ಸಿಆರ್​ಪಿಸಿ 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಿಷೇಧಾಜ್ಞೆಯು ಆಗಸ್ಟ್ 20ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಪ್ಪಳ ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲ್ಲಶೆಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ. ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಡಿವೈಎಸ್​ಪಿ ರುದ್ರೇಶ್ ಉಜ್ಜನಕೊಪ್ಪ, ತಹಶೀಲ್ದಾರ್ ಧನಂಜಯ ಮಾಲಗತ್ತಿ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಧರ್ಮಣ್ಣ ಅವರನ್ನು ಪ್ರಸ್ತುತ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಿಂಸಾಚಾರ ಖಂಡಿಸಿ ಮುಸ್ಲಿಂ ಮಹಿಳೆಯರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಹೂ ತರಲು ಹೋಗಿದ್ದಾಗ ನಮ್ಮ ಹುಡುಗನಿಗೆ ಹೊಡೆದರು ಎಂದು ಹೇಳಿದ ಮಹಿಳೆಯರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ ಈ ಘಟನೆಗೆ ಕಾರಣ ಎಂದು ದೂರಿದರು.

ಆರ್​ಟಿಐ ಕಾಯ್ದೆಯ ಅಡಿ ಮಾಹಿತಿ ಕೇಳಿದ್ದಕ್ಕೆ ಕೊಲೆಯಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗ ಹತ್ಯೆಯ ಆರೋಪ ಹೊತ್ತಿರುವ ಹನುಮೇಶ್ ನಾಯಕ್ ಸದ್ಯ ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಗಲಾಟೆಯ ನಂತರ ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂಥ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

ಮುಂಜಾನೆ 9 ಗಂಟೆಯ ವೇಳೆಯಲ್ಲಿ ಗಲಭೆ ನಡೆದಿದ್ದು, ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್, ಟಾಟಾ ಏಸ್ ಸೇರಿದಂತೆ ಹಲವು ವಾಹನಗಳನ್ನು ಜಖಂ ಮಾಡಲಾಗಿದೆ. ಬೈಕ್​ಗಳ ಮೇಲೆ ಕಲ್ಲು ಎತ್ತಿಹಾಕಲಾಗಿದೆ.

ಗಲಾಟೆಗೆ ತಿರುಗಿದ ಮಾತಿನ ಚಕಮಕಿ: ಎಸ್​ಪಿ

ಹುಲಿಹೈದರ್ ಗ್ರಾಮದ ಗಲಾಟೆ ಕುರಿತು ಕೊಪ್ಪಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಪ್ರತಿಕ್ರಿಯಿಸಿದರು. ಯಂಕಪ್ಪ ಹಾಗೂ ಬಾಷಾವಲಿ ಇಬ್ಬರು ಮೃತಪಟ್ಟಿದ್ದಾರೆ. ಪ್ರಸ್ತುತ ಗ್ರಾಮದಲ್ಲಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪ್ರಸ್ತುತ ಗ್ರಾಮದಲ್ಲಿ 8 ಜನ ಪೊಲೀಸ್ ಅಧಿಕಾರಿಗಳು, 70ಕ್ಕೂ ಅಧಿಕ ಸಿಬ್ಬಂದಿ, ಹಾಗೂ ಕೆಎಸ್​ಆರ್​ಪಿ ತುಕಡಿ ನಿಯೋಜಿಸಲಾಗಿದೆ. ಗಲಾಟೆ ಏಕೆ ನಡೆಯಿತು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಶಾಲೆಗಳಿಗೆ ರಜೆ

ಹುಲಿಹೈದರ್​​ ಗ್ರಾಮದಲ್ಲಿ 2 ಗುಂಪುಗಳ ಮಾರಾಮಾರಿಯ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗಳಿಗೆ ರಜೆ ಘೋಷಿಸಿದರು. ಮಕ್ಕಳನ್ನು ಸ್ವತಃ ಮನೆಗಳಿಗೆ ತಲುಪಿಸಿ ಬಂದರು.

Published On - 1:46 pm, Thu, 11 August 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್