ಕೊಪ್ಪಳ: ಕ್ಷೌರ ಮಾಡುವ ವಿಚಾರಕ್ಕೆ ಜಗಳ, ಕ್ಷೌರಿಕನಿಂದ ದಲಿತ ಯುವಕನ ಕೊಲೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ಕ್ಷೌರಿಕನಿಂದ ದಲಿತ ಯುವಕನ ಕೊಲೆ ನಡೆದಿದೆ. ದಲಿತರಿಗೆ‌ ಕ್ಷೌರ ಮಾಡಲು ನಿರಾಕರಿಸಿದ್ದಕ್ಕೆ ಜಗಳ ನಡೆದು ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಕ್ಷೌರಿಕ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ: ಕ್ಷೌರ ಮಾಡುವ ವಿಚಾರಕ್ಕೆ ಜಗಳ, ಕ್ಷೌರಿಕನಿಂದ ದಲಿತ ಯುವಕನ ಕೊಲೆ
ಕೊಲೆಯಾದ ಯಮನೂರಸ್ವಾಮಿ ಬಂಡಿಹಾಳ, ಆರೋಪಿ ಮುದಕಪ್ಪ ಹಡಪದ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Aug 18, 2024 | 9:33 AM

ಕೊಪ್ಪಳ, ಆಗಸ್ಟ್​.18: ಕ್ಷೌರ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ (Murder) ಅಂತ್ಯ ಕಂಡಿದೆ. ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಳ ಗ್ರಾಮದಲ್ಲಿ ಕ್ಷೌರಿಕ ದಲಿತ ಯುವಕನ ಕೊಲೆ ಮಾಡಿದ್ದಾನೆ. ಯಮನೂರಸ್ವಾಮಿ ಬಂಡಿಹಾಳ(27) ಕೊಲೆಯಾದ ಯುವಕ. ಕಟಿಂಗ್ ಮಾಡುವ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ನಿನ್ನೆ ಕಟಿಂಗ್ ಮಾಡಿಸಿಕೊಳ್ಳಲು ಯಮನೂರಸ್ವಾಮಿ ಬಂಡಿಹಾಳ ಕಟಿಂಗ್ ಶಾಪ್​ಗೆ ಬಂದಿದ್ದರು. ಈ ವೇಳೆ ಕ್ಷೌರಿಕ ಮುದಕಪ್ಪ ಹಡಪದ ಹಾಗೂ ಯಮನೂರಸ್ವಾಮಿ ಬಂಡಿಹಾಳ ನಡುವೆ ಜಗಳ ಶುರುವಾಗಿತ್ತು. ಆಗ ಮುದಕಪ್ಪ ತನ್ನ ಕೈಯಲ್ಲಿದ್ದ ಕತ್ತರಿಯಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿ ಕ್ಷೌರಿಕ ಮುದಕಪ್ಪ ಹಡಪದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಲಿತರಿಗೆ‌ ಕ್ಷೌರ ಮಾಡಲು ನಿರಾಕರಿಸಿದ್ದಕ್ಕೆ ಜಗಳ ನಡೆದು ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಜೊತೆಗೆ ಕ್ಷೌರಿಕನಿಂದ‌ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ