‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ

Koppal: ಮಾಜಿ ಶಾಸಕ ಮಧು ಬಂಗಾರಪ್ಪ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಬಿಜೆಪಿ ನಡೆಸಿದ ವ್ಯವಹಾರ ಕುದುರಿರದ ಕಾರಣ, ಅದು ಬೀಳುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

‘ಬಿಜೆಪಿಯೆಂದರೆ ಬ್ಯುಸಿನೆಸ್ ಜನತಾ ಪಾರ್ಟಿ’: ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ
ಮಧು ಬಂಗಾರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: shivaprasad.hs

Updated on: Jul 25, 2021 | 11:16 AM

ಕೊಪ್ಪಳ: ಬಿಜೆಪಿ ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪ ಮಾಡಿದ್ದಾರೆ. ಕೊಪ್ಪಳದಲ್ಲಿ ಹೇಳಿಕೆ ನೀಡಿರುವ ಅವರು ಬಿಜೆಪಿಯವರು ಕೇವಲ ವ್ಯವಹಾರಕ್ಕಾಗಿ ಮಾತ್ರ ಬರುತ್ತಾರೆ. ನಂತರ ಇಡೀ ದೇಶ ಲೂಟಿ ಮಾಡಿ, ಹಾಳು ಮಾಡಿ ಹೋಗುತ್ತಾರೆ. ಇದು ನಮ್ಮೆಲ್ಲರ ದುರಂತ ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 

ವ್ಯವಹಾರ ಮಾಡಿದಾಗ ಅದು ಕುದುರದೇ ಹೋದರೆ ವ್ಯವಹಾರ ಬಿದ್ದುಹೋಗುತ್ತದೆ. ಬಿಜೆಪಿ ಸದ್ಯ ಅದೇ ಪರಿಸ್ಥಿತಿಯಲ್ಲಿದೆ. ಅವರ ವ್ಯವಹಾರ ಕುದುರದ ಕಾರಣ, ಸರ್ಕಾರ ಬಿದ್ದು ಹೋಗುವ ಹಂತದಲ್ಲಿದೆ ಎಂದು ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಾಮಾನ್ಯ ಜನರ ಸೇವೆ ಮಾಡುವುದು ಕಾಂಗ್ರೆಸ್ ಪಕ್ಷ. ಕರ್ನಾಟಕಕ್ಕೆ ಕಾಂಗ್ರೆಸ್ ಅವಶ್ಯಕತೆ ಇದೆ. ಯಾವಾಗ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷವೇ ಅಧಿಕಾರ ಸ್ಥಾಪಿಸಲಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಬಗ್ಗೆ ಕೇಳಿದಾಗ ಉತ್ತರಿಸಿದ ಅವರು, ತಾನು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದೀನೆಂದೂ ಜೆಡಿಎಸ್ ಬಗ್ಗೆ ತಿಳಿದಿಲ್ಲವೆಂದೂ ಅವರು ಪ್ರತಿಕ್ರಿಯಿಸಿದರು.

ಕೊಪ್ಪಳದ ಗವಿ ಮಠಕ್ಕೆ ಭೇಟಿ ನೀಡಿ, ಮಧು ಬಂಗಾರಪ್ಪ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗವಿ‌ ಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: Mann Ki Baat ದೇಶದ ಅಭಿವೃದ್ಧಿಗಾಗಿ ನಾವು ಶ್ರಮಿಸಬೇಕು: ದೇಶವನ್ನುದ್ದೇಶಿಸಿ ಮೋದಿ ಮನದ ಮಾತು

ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು ಕಳ್ಳತನ ಮಾಡುವ ಭಿಕ್ಷುಕರ ಗ್ಯಾಂಗ್, ಭಿಕ್ಷಕರನ್ನು ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲು ಮುಂದಾದ ಕಮಲ್ ಪಂತ್

ಇದನ್ನೂ ಓದಿ: ಪತ್ನಿಯ ವೇಷ ಧರಿಸಿ ವಿಮಾನ ಹತ್ತಿದ ಕೊವಿಡ್​ 19 ಸೋಂಕಿತ; ಮಾರ್ಗ ಮಧ್ಯೆ ಫ್ಲೈಟ್​ನ ಬಾತ್​ರೂಂನಲ್ಲಿ ಮಾಡಿದ ಅದೊಂದು ತಪ್ಪಿನಿಂದ ಸಿಕ್ಕಿಬಿದ್ದ !

(Former MLA Madhu Bangarappa alleged that BJP is nothing but Business Janatha Party)

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್