ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಎಚ್ಚರಿಕೆ ಕೊಟ್ಟ ವಿದ್ಯಾರ್ಥಿನಿ, ವಿಡಿಯೋ ವೈರಲ್
ಶಾಲೆಯಲ್ಲಿ ಮೊಟ್ಟೆ ನೀಡಲು ಕೆಲ ಮಠಾಧೀಶರ ವಿರೋಧ ಹಿನ್ನಲೆಯಲ್ಲಿ ಮಠಾಧೀಶರ ವಿರುದ್ಧ ಎಸ್‌ಎಫ್‌ಐ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಮಠಾಧೀಶರಿಗೆ ಎಚ್ಚರಿಕೆ ಕೊಟ್ಟಿದ್ದಾಳೆ.
ಕೊಪ್ಪಳ: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ ಎಂದು ಆರೋಪಗಳನ್ನು ಮಾಡುತ್ತಿದ್ದಾರೆ. ಆದ್ರೆ ಇವುಗಳ ನಡುವೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ವಿದ್ಯಾರ್ಥಿನಿ, ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾಳೆ.
ಶಾಲೆಯಲ್ಲಿ ಮೊಟ್ಟೆ ನೀಡಲು ಕೆಲ ಮಠಾಧೀಶರ ವಿರೋಧ ಹಿನ್ನಲೆಯಲ್ಲಿ ಮಠಾಧೀಶರ ವಿರುದ್ಧ ಎಸ್‌ಎಫ್‌ಐ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಮಠಾಧೀಶರಿಗೆ ಎಚ್ಚರಿಕೆ ಕೊಟ್ಟಿದ್ದಾಳೆ. ಜೊತೆಗೆ ನಾವು ಮೊಟ್ಟೆ ತಿಂದ್ರೆ ಬದುಕುತ್ತೇವೆ, ಇಲ್ಲವಾದರೆ ಸಾಯುತ್ತೇವೆ. ನಮಗ್ಯಾಕೆ ವಿರೋಧಿಸುತ್ತಿದ್ದೀರಾ ಎಂದು ವಿದ್ಯಾರ್ಥಿನಿ ಪ್ರಶ್ನೆ ಮಾಡಿದ್ದಾಳೆ. ನಾವು ಒಂದಲ್ಲ ಎರಡು ಮೊಟ್ಟೆಯನ್ನು ತಿನ್ನುತ್ತೇವೆ ಅದನ್ನು ಕೇಳುವುದಕ್ಕೆ ನೀವ್ಯಾರೆಂದು ವಿದ್ಯಾರ್ಥಿನಿ ಆಕ್ರೋಶ ಹೊರ ಹಾಕಿದ್ದಾಳೆ. ಸದ್ಯ ವಿದ್ಯಾರ್ಥಿನಿ ಎಚ್ಚರಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.
ಮಕ್ಕಳು ದೇವರ ಸಮಾನ ಅಂತಾರೆ. ದೇವರ ಆಸೆ ಏಕೆ ಈಡೇರಿಸುವುದಿಲ್ಲ. ನಾವು ರಸ್ತೆಗಿಳಿದು ಹೋರಾಟ ಮಾಡಬೇಕ? ನಾವು ಒಂದಲ್ಲ ಎರಡು ಮೊಟ್ಟೆ ತಿಂತೀವಿ ಅದನ್ನ ಕೇಳಲು ನೀವು ಯಾರು. ನಿಮ್ಮ ಮಠಕ್ಕೆ ಸ್ನಾನ ಮಾಡಿ ಬಂದು ಪೂಜೆ ಮಾಡಿಲ್ವಾ? ನಿಮಗೆ ದಕ್ಷಿಣೆ ಹಾಕಿಲ್ವಾ ಎಂದು ವಿದ್ಯಾರ್ಥಿನಿ ಪ್ರಶ್ನಿಸಿದ್ದಾಳೆ.
ಇದನ್ನೂ ಓದಿ: ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ