ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ: ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ತೆರವು

ಕೊಪ್ಪಳದಲ್ಲಿ ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ ಹಾಕಲಾಗಿದ್ದು ಹಿಂದೂ ಸಂಘಟನೆಗಳ ವಿರೋಧದ ಬಳಿಕ ಫ್ರೀ ಪ್ಯಾಲೆಸ್ತೇನ್ ಬರಹಕ್ಕೆ ಪ್ಯಾಚ್ ಹಾಕಲಾಗಿದೆ. ಇದೀಗ ಹಿಂದೂ ಸಂಘಟನೆಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಸಂಘಟಕರು ಬ್ಯಾನರ್ ಬದಲಾವಣೆ ಮಾಡಿದ್ದಾರೆ. ಕೇವಲ ಈದ್ ಮಿಲಾದ್ ಹಬ್ಬದ ಹೊಸ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.

ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ: ಹಿಂದೂ ಸಂಘಟನೆಗಳ ಆಕ್ರೋಶದ ಬಳಿಕ ತೆರವು
ಕೊಪ್ಪಳ: ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Sep 16, 2024 | 9:04 AM

ಕೊಪ್ಪಳ, ಸೆ.16: ರಾಜ್ಯದಲ್ಲಿ ಈದ್ ಮಿಲಾದ್  (Eid Milad) ಹಬ್ಬ ಆಚರಣೆಗೆ ತಯಾರಿ ನಡೆಯುತ್ತಿದೆ. ಆದರೆ ಕೊಪ್ಪಳದಲ್ಲಿ ಈದ್​ ಮಿಲಾದ್​ ಬ್ಯಾನರ್​ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ ಹಾಕಲಾಗಿದ್ದು ಹಿಂದೂ ಸಂಘಟನೆಗಳ ವಿರೋಧದ ಬಳಿಕ ಫ್ರೀ ಪ್ಯಾಲೆಸ್ತೇನ್ ಬರಹಕ್ಕೆ ಪ್ಯಾಚ್ ಹಾಕಲಾಗಿದೆ. ಬ್ಯಾನರ್​ನ‌ ಒಂದು ಭಾಗದಲ್ಲಿ ‘ಫ್ರೀ ಪ್ಯಾಲೆಸ್ತೇನ್’ ಬರಹ ಹಾಕಲಾಗಿತ್ತು. ಇದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಫ್ರೀ ಪ್ಯಾಲೆಸ್ತೇನ್ ಎಂಬ ಬರಹಕ್ಕೆ ಪ್ಯಾಚ್ ಹಾಕಿದ್ದಾರೆ.

ಇಂದು ಈದ್​ ಮಿಲಾದ್​ ಹಬ್ಬ ಆಚರಣೆ ಹಿನ್ನೆಲೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಿಲ್ಲಾ ಏರಿಯಾದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಈ ಬ್ಯಾನರ್​ನ ಒಂದು ಭಾಗದಲ್ಲಿ ಫ್ರೀ ಪ್ಯಾಲೆಸ್ತೇನ್ ಎಂದು ಬರೆಯಲಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಿಂದ ಎಚ್ಚೆತ್ತ ಕಮಿಟಿ ಫ್ರೀ ಪ್ಯಾಲೆಸ್ತೇನ್ ಬರಹಕ್ಕೆ ಪ್ಯಾಚ್ ಹಾಕಿದೆ. ರಾತ್ರೋ ರಾತ್ರಿ ಬರಹಕ್ಕೆ‌ ಪ್ಯಾಚ್ ಹಾಕಲಾಗಿದೆ.

ಇದನ್ನೂ ಓದಿ: ಬೆಂಗಳೂರು ಈದ್​ ಮಿಲಾದ್​: ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

ಇನ್ನು ಹಿಂದೂ ಸಂಘಟನೆಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಸಂಘಟಕರು ಬ್ಯಾನರ್ ಬದಲಾವಣೆ ಮಾಡಿದ್ದಾರೆ. ಕೇವಲ ಈದ್ ಮಿಲಾದ್ ಹಬ್ಬದ ಹೊಸ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.

ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ

ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ ಹಿನ್ನೆಲೆ ಈದ್ ಮಿಲಾದ್ ದಿನವಾದ ಇಂದು ಬಿ.ಸಿ.ರೋಡ್ ಚಲೋಗೆ ಕರೆ ನೀಡಲಾಗಿದೆ. ಫೇಸ್ಬುಕ್ ನಲ್ಲಿ ಭಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ಪೋಸ್ಟ್ ಹಾಕಿದ್ದು, ಜಿಹಾದಿಗಳೇ ನಿಮ್ಮ ಸವಾಲನ್ನು ಸ್ವೀಕರಿಸಿದ್ದೇವೆ, ನಾವು ಬರುತ್ತಿದ್ದೇವೆ. ನಿಮಗೆ ತಾಕತ್ತು ಇದ್ದರೆ ತಡೆಯಿರಿ ಅಂತಾ ಬರೆದುಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ