ಕೊಪ್ಪಳ, ಸೆ.16: ರಾಜ್ಯದಲ್ಲಿ ಈದ್ ಮಿಲಾದ್ (Eid Milad) ಹಬ್ಬ ಆಚರಣೆಗೆ ತಯಾರಿ ನಡೆಯುತ್ತಿದೆ. ಆದರೆ ಕೊಪ್ಪಳದಲ್ಲಿ ಈದ್ ಮಿಲಾದ್ ಬ್ಯಾನರ್ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ ಹಾಕಲಾಗಿದ್ದು ಹಿಂದೂ ಸಂಘಟನೆಗಳ ವಿರೋಧದ ಬಳಿಕ ಫ್ರೀ ಪ್ಯಾಲೆಸ್ತೇನ್ ಬರಹಕ್ಕೆ ಪ್ಯಾಚ್ ಹಾಕಲಾಗಿದೆ. ಬ್ಯಾನರ್ನ ಒಂದು ಭಾಗದಲ್ಲಿ ‘ಫ್ರೀ ಪ್ಯಾಲೆಸ್ತೇನ್’ ಬರಹ ಹಾಕಲಾಗಿತ್ತು. ಇದಕ್ಕೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಫ್ರೀ ಪ್ಯಾಲೆಸ್ತೇನ್ ಎಂಬ ಬರಹಕ್ಕೆ ಪ್ಯಾಚ್ ಹಾಕಿದ್ದಾರೆ.
ಇಂದು ಈದ್ ಮಿಲಾದ್ ಹಬ್ಬ ಆಚರಣೆ ಹಿನ್ನೆಲೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಿಲ್ಲಾ ಏರಿಯಾದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಈ ಬ್ಯಾನರ್ನ ಒಂದು ಭಾಗದಲ್ಲಿ ಫ್ರೀ ಪ್ಯಾಲೆಸ್ತೇನ್ ಎಂದು ಬರೆಯಲಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದರಿಂದ ಎಚ್ಚೆತ್ತ ಕಮಿಟಿ ಫ್ರೀ ಪ್ಯಾಲೆಸ್ತೇನ್ ಬರಹಕ್ಕೆ ಪ್ಯಾಚ್ ಹಾಕಿದೆ. ರಾತ್ರೋ ರಾತ್ರಿ ಬರಹಕ್ಕೆ ಪ್ಯಾಚ್ ಹಾಕಲಾಗಿದೆ.
ಇದನ್ನೂ ಓದಿ: ಬೆಂಗಳೂರು ಈದ್ ಮಿಲಾದ್: ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ
ಇನ್ನು ಹಿಂದೂ ಸಂಘಟನೆಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಸಂಘಟಕರು ಬ್ಯಾನರ್ ಬದಲಾವಣೆ ಮಾಡಿದ್ದಾರೆ. ಕೇವಲ ಈದ್ ಮಿಲಾದ್ ಹಬ್ಬದ ಹೊಸ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.
ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ ಹಿನ್ನೆಲೆ ಈದ್ ಮಿಲಾದ್ ದಿನವಾದ ಇಂದು ಬಿ.ಸಿ.ರೋಡ್ ಚಲೋಗೆ ಕರೆ ನೀಡಲಾಗಿದೆ. ಫೇಸ್ಬುಕ್ ನಲ್ಲಿ ಭಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ಪೋಸ್ಟ್ ಹಾಕಿದ್ದು, ಜಿಹಾದಿಗಳೇ ನಿಮ್ಮ ಸವಾಲನ್ನು ಸ್ವೀಕರಿಸಿದ್ದೇವೆ, ನಾವು ಬರುತ್ತಿದ್ದೇವೆ. ನಿಮಗೆ ತಾಕತ್ತು ಇದ್ದರೆ ತಡೆಯಿರಿ ಅಂತಾ ಬರೆದುಕೊಂಡಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ