AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾವತಿ ಕ್ಷೇತ್ರದ ಪ್ರತಿ ಗ್ರಾಪಂಗೆ ಒಂದು ಕೋಟಿ ರೂಪಾಯಿ ಅನುದಾನ; ಗಾಲಿ ಜನಾರ್ದನ ರೆಡ್ಡಿ ಭರವಸೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಜೀವ ಕೊಟ್ಟು, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಸರ್ಕಾರದ ಅನುದಾನ ಸೇರಿದಂತೆ ಕೈಗಾರಿಕೆಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಗಂಗಾವತಿ ಕ್ಷೇತ್ರದ ಪ್ರತಿ ಗ್ರಾಪಂಗೆ ಒಂದು ಕೋಟಿ ರೂಪಾಯಿ ಅನುದಾನ; ಗಾಲಿ ಜನಾರ್ದನ ರೆಡ್ಡಿ ಭರವಸೆ
ಗಾಲಿ ಜನಾರ್ದನ ರೆಡ್ಡಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 26, 2023 | 7:59 PM

Share

ಕೊಪ್ಪಳ: ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದ (Gangavati Assembly Constituency) ಪ್ರತಿಯೊಂದು ಗ್ರಾಮ ಪಂಚಾಯತಿಗೂ ಗ್ರಾಮಗಳ ಅಭಿವೃದ್ಧಿಗಾಗಿ ಒಂದು ಕೋಟಿ ರೂಪಾಯಿ ಒದಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಗಂಗಾವತಿ ನೂತನ ಶಾಸಕ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ (Gali Janardhana Reddy) ಭರವಸೆ ನೀಡಿದ್ದಾರೆ. ಗಂಗಾವತಿ ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಂದ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ, ನೂತನವಾಗಿ ಅಧಿಕಾರಕ್ಕೆ ಬಂದಿರುವ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ತಮ್ಮ ಹೆಸರು ಉಳಿಯುವಂತೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇಂಥವರ ಅಧಿಕಾರದ ಅವಧಿಯಲ್ಲಿ ಈ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಗ್ರಾಮದ ಜನರು ಮಾತನಾಡಿಕೊಳ್ಳುವ ರೀತಿಯಲ್ಲಿ ನಿವೆಲ್ಲರೂ ಕೆಲಸ ಮಾಡಬೇಕು ಎಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಜೀವ ಕೊಟ್ಟು, ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಸರ್ಕಾರದ ಅನುದಾನ ಸೇರಿದಂತೆ ಕೈಗಾರಿಕೆಗಳನ್ನು ಕರೆತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು ಎನ್ನುವ ರೀತಿಯಲ್ಲಿ ಕೆಲಸ ಮಾಡಲಾಗುವುದು. ಯಾರಿಗೂ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಳೆ ಹಾನಿ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್: ಸಿಎಂ ಸಿದ್ಧರಾಮಯ್ಯ ಹೇಳಿದ್ದಿಷ್ಟು

ನಂತರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಬಲಿತರಾಗಿ ಆಯ್ಕೆಯಾದ 11 ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು. ಸದ್ಯ ರಾಜ್ಯದಲ್ಲಿ ತಮ್ಮ ಪಕ್ಷದ ಏಕೈಕ ಶಾಸಕರಾಗಿರೋ ಜನಾರ್ದನ ರೆಡ್ಡಿಯವರು ಗ್ರಾಮ ಪಂಚಾಯತ್​​ನಲ್ಲೂ ತಮ್ಮ ಪಕ್ಷ ಬಲವರ್ಧನೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಪಂಚಾಯತ್​ಗಳಿಗೆ ಅನುದಾನದ ಭರವಸೆ ನೀಡಿದ್ದು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಮೇಲೆ ರೆಡ್ಡಿ ಕಣ್ಣಿಟ್ಟಿದ್ದಾರೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯತ್​ಗಳ ಅಭಿವೃದ್ಧಿ ಮಾಡಿದ್ರೆ, ಸುಲಭವಾಗಿ ಗ್ರಾಮೀಣ ಭಾಗದಲ್ಲಿ ಮತದಾರನ್ನ ಓಲೈಸಿಕೊಳ್ಳಬಹುದು ಎನ್ನೋ ಲೆಕ್ಕಚಾರ ಹಾಕಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರಬಹುದು. ಹೀಗಾವೇ ರೆಡ್ಡಿ ಇವಾಗಿನಿಂದಲೇ ತಯಾರಿಸಿ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?