AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು

ಕುರುಬ, ಮುಸ್ಲಿಂ ಸಮುದಾಯದ ಮುಖಂಡರು ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Janardhan Reddy: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿದ ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು
TV9 Web
| Edited By: |

Updated on:Jan 02, 2023 | 12:59 PM

Share

ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇವೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಜೋರಾಗಿದೆ.‌ ಅಲ್ಲದೆ ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(Kalyan Rajya Pragathi Paksha) ಕಟ್ಟಿ ಚುನಾವಣಾ ಯುದ್ಧಕ್ಕೆ ಇಳಿದಿದ್ದಾರೆ. ಜನಾರ್ದನ ರೆಡ್ಡಿ ಕಾಂಗ್ರೆಸ್(Congress) ಪಕ್ಷದ ಬುಟ್ಟಿಗೆ ಕೈ ಹಾಕಿದ್ದು ಗಂಗಾವತಿ ಕ್ಷೇತ್ರದ ಕೆಲ ಕಾಂಗ್ರೆಸ್ ಮುಖಂಡರು ಕೆಆರ್​​ಪಿಪಿ ಸೇರ್ಪಡೆಯಾಗಿದ್ದಾರೆ.

ಕುರುಬ, ಮುಸ್ಲಿಂ ಸಮುದಾಯದ ಮುಖಂಡರು ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜನಾರ್ಧನರೆಡ್ಡಿಗೆ ಕಂಬಳಿ ಹಾಕಿ ಕುರುಬ ಸಮುದಾಯ ಮುಖಂಡರು ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಬಲಗೈ ಬಂಟರಾಗಿರುವ ಇಕ್ಬಾಲ್ ಅನ್ಸಾರಿ ಅವರಿಗೆ ನಡುಕ ಹುಟ್ಟಿಸಿದ್ದಾರೆ.

ಇದನ್ನೂ ಓದಿ: Janardhana Reddy: ಪತಿ ಜನಾರ್ದನ ರೆಡ್ಡಿ ಪರ ಬಳ್ಳಾರಿಯಲ್ಲಿ ಪತ್ನಿ ಪ್ರಚಾರ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಬಾವುಟ ಬಿಡುಗಡೆ

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಮಾರ್ಜುನ ನಾಗಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್ ಆರ್ ಶ್ರೀನಾಥ್ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಲ್ಲಿ ಅನ್ಸಾರಿ ಹಾಗೂ ಶ್ರೀನಾಥ್ ಮಧ್ಯೆ ಮಾತ್ರ ಫೈಟ್ ಇದೆ. ಇವರಿಬ್ಬರಲ್ಲಿ ಯಾರಿಗೇ ಟಿಕೆಟ್ ಸಿಕ್ಕರೂ ಸಹ ಒಬ್ಬರು ಇನ್ನೊಬ್ಬರನ್ನು ಸೋಲಿಸುವುದು ಪಕ್ಕಾ ಎನ್ನಲಾಗುತ್ತಿದೆ.

ವಿಧಾನಪರುಷತ್ ಸದಸ್ಯ ಎಚ್ ಆರ್ ಶ್ರೀನಾಥ್ ಹಾಗೂ ಅವರ ತಂದೆ ಮಾಜಿ ಸಂಸದ ಎಚ್ ಜಿ ರಾಮುಲು ಅವರ ಕಟ್ಟಾ ಕಾಂಗ್ರೆಸ್ ಬೆಂಬಲಿಗರು.‌ ಆದರೆ ಇಕ್ಬಾಲ್ ಅನ್ಸಾರಿ ಸಿದ್ದರಾಮಯ್ಯ ಪಾಳಯದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಇತ್ತೀಚಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳದ ಒಣಬಳ್ಳಾರಿಗೆ ಆಗಮಿಸಿದ್ದರು. ಈ ವೇಳೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಇಕ್ಬಾಲ್ ಅನ್ಸಾರಿಗೆ ಬೆಂಬಲಿಸಿ ಎಂದು ಮದುವೆಯ ಕಾರ್ಯಕ್ರಮದಲ್ಲಿ ಹೇಳಿದ್ದರು. ಈ ಹೇಳಿಕೆಗೆ ಎಚ್ ಆರ್ ಶ್ರೀನಾಥ್ ವಿರೋಧ ವ್ಯಕ್ಯಪಡಿಸಿದ್ದರು. ಈ ಹಿನ್ನಲೆಯಲ್ಲಿ ಇವರಿಬ್ಬರ ಮಧ್ಯೆ ಇದೀಗ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿದೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಗಂಗಾವತಿ ಟಿಕೆಟ್ ಯಾರಿಗೆ ಕೊಡುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಇದರ ನಡುವೆ ಈಗ ಕುರುಬ ಸಮುದಾಯ ಮುಖಂಡರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರಿದ್ದಾರೆ.

ಆಪ್ತ ಸ್ನೇಹಿತನ ಪಕ್ಷವನ್ನು ಕುಟುಕಿದ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರದು ಎಂದು ಪರೋಕ್ಷವಾಗಿ ಸ್ನೇಹಿತ ಜನಾರ್ದನ ರೆಡ್ಡಿ ಪಕ್ಷ ಪ್ರಭಾವ ಬೀರಲ್ಲ ಎಂದು ರಾಮುಲು ಸಂದೇಶ ನೀಡಿದ್ದಾರೆ. ರಾಮುಲು ಮುಖ ನೋಡಿ ಅಥವಾ ಮತ್ತೊಬ್ಬರ (ಜನಾರ್ದನ ರೆಡ್ಡಿ) ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲ ಕಲ್ಯಾಣ ಕರ್ಣಾಟಕ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ. ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಪ್ರಭಾವ ಬೀರಲ್ಲ.

ಬಳ್ಳಾರಿ ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್, ಕರುಣಾಕರ ರೆಡ್ಡಿ, ಸೋಮಶೇಖರ್ ರೆಡ್ಡಿ ಗೆಲುತ್ತಾರೆ ಎನ್ನುವ ಮೂಲಕ ಸ್ನೇಹಿತ ಜನಾರ್ದನ ರೆಡ್ಡಿ ಬಿಟ್ಟು, ಉಳಿದ ರೆಡ್ಡಿ ಸಹೋದರರ ಕಡೆ ರಾಮುಲು ವಾಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಪಕ್ಷ ಕಟ್ಟಬಹುದು, ಚುನಾವಣೆಯಲ್ಲಿ ಸ್ಪರ್ಧಿಸಬಹು. ಆದರೆ ಜನರ ಒಲವು, ಬಿಜೆಪಿ ಪಕ್ಷದ ಮೇಲೆ ಇದೆ. ದೇಶದ ಚುನಾವಣೆ ಮೋದಿ ಹಾಗೂ ರಾಜ್ಯದ ಚುನಾವಣೆ ಬಸವರಾಜ ಬೊಮ್ಮಾಯಿ ಹಾಗೂ ಬಿಎಸ್ ವೈ ಅವರ ನೇತ್ರತ್ವದಲ್ಲಿ ನಡೆಯಲಿದೆ. ಪ್ರಾದೇಶಿಕ ಪಕ್ಷದಿಂದ ಕಾರ್ಯಕರ್ತರಲ್ಲಿ ಗೊಂದಲ ಇಲ್ಲ. ನಮ್ಮ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:39 pm, Mon, 2 January 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​