AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ

ಐತಿಹಾಸಿಕ ಹಂಪಿ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಇದೀಗ ಈ ಪ್ರಕರಣದ ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದ್ದ ಕೋರ್ಟ್, ಇದೀಗ ಮರಣದಂಡನೆ ವಿಧಿಸಿದೆ.

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ
ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು
ಶಿವಕುಮಾರ್ ಪತ್ತಾರ್
| Edited By: |

Updated on:Feb 16, 2026 | 4:23 PM

Share

ಕೊಪ್ಪಳ, (ಫೆಬ್ರವರಿ 16): ಹಂಪಿ (Hampi) ಬಳಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೋರ್ಟ್ ಮರಣದಂಡನೆ ವಿಧಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ (Israel woman)ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು (Gangavathi Court), ಇದೇ ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು (ಫೆಬ್ರವರಿ 16)ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಗಳು.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ನಡೆದ ಕೇವಲ 9 ತಿಂಗಳಲ್ಲೇ ಗಂಗಾವತಿ ಕೋರ್ಟ್​ ಐತಿಹಾಸಿಕ ತೀರ್ಪು ಪ್ರಕಟಿಸಿದೆ.  ಈ ಮೂಲಕ ನ್ಯಾಯಾಂಗದ ದಕ್ಷತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನ್ಯಾಯಮೂರ್ತಿ ಸದಾನಂದ ನಾಗಪ್ಪ ನಾಯಕ್ ಅವರು ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಸಾಣಾಪೂರ ಬಳಿ ನಡೆದಿದ್ದ ಘೋರ ಕೃತ್ಯ

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು. ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕರಿನೆರಳು ಬಿದ್ದಿತ್ತು.  ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ  ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಮೂವರ ಮೇಲೆ  ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಬಳಿಕ  ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Mon, 16 February 26

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​