AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rice Price Hike: ತುಂಗಭದ್ರಾ ನೀರಿನ ಅಭಾವ, ಬರದ ಪರಿಣಾಮ ಕುಸಿದ ಭತ್ತ ಬೆಳೆ; ಅಕ್ಕಿ ಬೆಲೆ ಭಾರೀ ಏರಿಕೆ

Rice Price Hike In Karnataka: ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ, ಮುಂಗಾರು ಮಳೆ ಅಭಾವ ಹಾಗೂ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಗಂಗಾವತಿಯ ಅಕ್ಕಿ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕಳೆದ 15 ದಿನಗಳಲ್ಲಿ ಸೋನಾ ಮಸೂರಿ ಅಕ್ಕಿಯ ಹೋಲ್‌ಸೇಲ್ ದರ ಪ್ರತಿ ಕ್ವಿಂಟಾಲ್‌ಗೆ 200 ರೂ.ನಿಂದ 300 ರೂ.ವರೆಗೆ ಏರಿಕೆಯಾಗಿದೆ.

Rice Price Hike: ತುಂಗಭದ್ರಾ ನೀರಿನ ಅಭಾವ, ಬರದ ಪರಿಣಾಮ ಕುಸಿದ ಭತ್ತ ಬೆಳೆ; ಅಕ್ಕಿ ಬೆಲೆ ಭಾರೀ ಏರಿಕೆ
ಅಕ್ಕಿ ಬೆಲೆ ಭಾರೀ ಏರಿಕೆImage Credit source: tv9
ಶಿವಕುಮಾರ್ ಪತ್ತಾರ್
| Edited By: |

Updated on:Jul 17, 2026 | 3:03 PM

Share

ಮುಖ್ಯಾಂಶಗಳು

  • 15 ದಿನದಲ್ಲೇ ಅಕ್ಕಿ ದರ ಭಾರಿ ಏರಿಕೆ
  • ಭತ್ತದ ಕೊರತೆಯಿಂದ ಮಿಲ್‌ಗಳಿಗೆ ಸಂಕಷ್ಟ
  • ತುಂಗಭದ್ರಾ ನೀರಿನ ಅಭಾವ, ಬರದ ನೇರ ಪರಿಣಾಮ

ಕೊಪ್ಪಳ, ಜುಲೈ 17: ಭತ್ತದ ನಾಡು ಎಂದೇ ಖ್ಯಾತಿ ಪಡೆದಿರುವ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿಯಲ್ಲಿ ಅಕ್ಕಿ ಉದ್ಯಮದ ಮೇಲೆ ಬರಗಾಲದ ಬಿಸಿ ತಟ್ಟಿದೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕೊಚ್ಚಿಹೋದ ಪರಿಣಾಮ, ನೀರಿನ ಅಭಾವದಿಂದ ಭತ್ತದ ಉತ್ಪಾದನೆ ಗಣನೀಯವಾಗಿ ಕುಸಿದಿದೆ. ಇದರ ನೇರ ಪರಿಣಾಮವಾಗಿ ಸೋನಾ ಮಸೂರಿ ಸೇರಿದಂತೆ ಪ್ರಮುಖ ಅಕ್ಕಿ ತಳಿಗಳ ದರ ಕೇವಲ 15 ದಿನಗಳಲ್ಲೇ ಏರಿಕೆಯಾಗಿದೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಹಾನಿಗೊಳಗಾದ ಹಿನ್ನೆಲೆಯಲ್ಲಿ ಗಂಗಾವತಿ ಭಾಗದಲ್ಲಿ ಎರಡನೇ ಬೆಳೆಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಭತ್ತದ ಉತ್ಪಾದನೆ ಕುಂಠಿತಗೊಂಡಿತ್ತು. ಈ ವರ್ಷವೂ ಮುಂಗಾರು ದುರ್ಬಲವಾಗಿದ್ದು, ಜಲಾಶಯದಲ್ಲಿ ಕೇವಲ 25 ಟಿಎಂಸಿ ನೀರು ಸಂಗ್ರಹವಿರುವ ಕಾರಣ ಕಾಲುವೆಗಳಿಗೆ ನೀರು ಹರಿಸುವ ಕುರಿತು ಇನ್ನೂ ತೀರ್ಮಾನವಾಗಿಲ್ಲ. ಹೀಗಾಗಿ ಅನೇಕ ರೈತರು ಭತ್ತ ನಾಟಿಯಿಂದಲೇ ಹಿಂದೆ ಸರಿದಿದ್ದಾರೆ.

ಸೋನಾ ಮಸೂರಿ ಅಕ್ಕಿ ಬೆಲೆ ಈಗೆಷ್ಟಾಯ್ತು?

ಭತ್ತದ ಲಭ್ಯತೆ ಕಡಿಮೆಯಾಗಿರುವುದರಿಂದ ಅಕ್ಕಿ ಮಾರುಕಟ್ಟೆಯಲ್ಲಿ ದರ ಏರಿಕೆಯಾಗಿದೆ. ಕಳೆದ 15 ದಿನಗಳ ಅವಧಿಯಲ್ಲಿ ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಸೋನಾ ಮಸೂರಿ ಅಕ್ಕಿಯ ದರ ಪ್ರತಿ ಕ್ವಿಂಟಾಲ್‌ಗೆ ಸುಮಾರು 200 ರೂ.ನಿಂದ 300 ರೂ.ವರೆಗೆ ಹೆಚ್ಚಳವಾಗಿದೆ. ಈ ಹಿಂದೆ 4,800 ರೂ. ಇದ್ದ ದರ ಈಗ 5,000 ರೂ.ನಿಂದ 5,200 ರೂ.ಗೆ ಏರಿಕೆಯಾಗಿದೆ. ಸೋನಾ ಮಸೂರಿಯ ಜೊತೆಗೆ ಆರ್‌ಎನ್‌ಆರ್‌ ತಳಿಯ ಅಕ್ಕಿಯ ದರವೂ ಏರಿಕೆ ಕಂಡಿದೆ.

ಗಂಗಾವತಿಯ ಮಿಲ್​ಗಳಿಗೆ ಬರುತ್ತಿಲ್ಲ ಭತ್ತ

ಭತ್ತದ ಕೊರತೆಯಿಂದ ಗಂಗಾವತಿಯ ಹಲವು ಅಕ್ಕಿ ಮಿಲ್‌ಗಳಿಗೆ ಸಾಕಷ್ಟು ಕಚ್ಚಾ ವಸ್ತು ಸಿಗುತ್ತಿಲ್ಲ. ಪರಿಣಾಮ, ಕೆಲವು ಮಿಲ್‌ಗಳು ನೆರೆಯ ರಾಜ್ಯಗಳಿಂದ ಭತ್ತ ಖರೀದಿಸಿ ಕಾರ್ಯಾಚರಣೆ ಮುಂದುವರಿಸುತ್ತಿವೆ. ಆದರೆ ಇದರಿಂದ ಉತ್ಪಾದನಾ ವೆಚ್ಚವೂ ಹೆಚ್ಚಾಗಿದೆ ಎಂದು ಮಿಲ್‌ ಮಾಲೀಕರು ಹೇಳುತ್ತಿದ್ದಾರೆ.

ಗ್ರಾಹಕರಿಗೂ ಅಕ್ಕಿ ಬೆಲೆ ಏರಿಕೆ ಬರೆ

ಅಕ್ಕಿಯ ಹೋಲ್‌ಸೇಲ್ ದರ ಏರಿಕೆಯ ಪರಿಣಾಮ ಚಿಲ್ಲರೆ ಮಾರುಕಟ್ಟೆಯ ಮೇಲೂ ಬೀಳುತ್ತಿದ್ದು, ಗ್ರಾಹಕರು ಹೆಚ್ಚುವರಿ ಬೆಲೆ ನೀಡಿ ಅಕ್ಕಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ. ಒಟ್ಟಾರೆಯಾಗಿ, ನೀರಿನ ಅಭಾವ, ಭತ್ತದ ಉತ್ಪಾದನೆ ಕುಸಿತ ಹಾಗೂ ತುಂಗಭದ್ರಾ ಜಲಾಶಯದ ಸಮಸ್ಯೆಗಳ ಸರಪಳಿಯ ಪರಿಣಾಮ ಭತ್ತದ ನಾಡು ಗಂಗಾವತಿಯ ಅಕ್ಕಿ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಇದರ ಹೊರೆ ರೈತರು, ಅಕ್ಕಿ ಮಿಲ್‌ಗಳು ಮತ್ತು ಗ್ರಾಹಕರ ಮೇಲೂ ಬೀಳತೊಡಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Fri, 17 July 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ