ಕೊಪ್ಪಳ: 2023ರ ವಿಧಾನಸಭಾ ಚುನಾವಣೆಗೆ(Karnataka assembly election) ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಅದರಂತೆ ಇದೀಗ ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ ನಡೆಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3 ಲಕ್ಷದ 15 ಸಾವಿರ ರೂಪಾಯಿಯ ಜೊತೆ ಬಟ್ಟೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ. ಕೊಪ್ಪಳದಿಂದ ಹೊಸಪೇಟೆಗೆ ಗೌತಮ್ ಜೈನ್ ಹಾಗೂ ಜಿತೇಂದ್ರ ಜೈನ್ ಎನ್ನುವವರು ದಾಖಲೆ ಇಲ್ಲದ ಲಕ್ಷಾಂತರೂ ಹಣವನ್ನ ಸ್ಕೂಟಿಯಲ್ಲಿ ಇಟ್ಟುಕೊಂಡು ತೆರಳುತ್ತಿದ್ದರು. ಈ ವೇಳೆ ಸಿಪಿಐ ಸಂತೋಷ ಹಳ್ಳೂರ್ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ. ಕೊಪ್ಪಳದ ನಗರಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಇನ್ನು ಇದೇ ಸಂದರ್ಭದಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.5 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಇಳಕಲ್ನಿಂದ ಕುಷ್ಟಗಿ ಕಡೆ ಹೋಗುತ್ತಿದ್ದ ಮಹಿಂದ್ರಾ ಸ್ಕಾರ್ಫಿಯೋ ಕಾರ್ನ್ನ ತಪಾಸಣೆ ಮಾಡಿದ ವೇಳೆ ಹಣ ಪತ್ತೆಯಾಗಿದೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗಜೇಂದ್ರಗಡ ಪಟ್ಟಣದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಸೀಜ್
ಗದಗ: ಗಜೇಂದ್ರಗಡ ಪಟ್ಟಣದ ಚೆಕ್ಪೋಸ್ಟ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ:ದಾಖಲೆಗಳಿಲ್ಲದೆ ಅಕ್ರಮವಾಗಿ ಹಣ ಸಾಗಾಟ: 1.14 ಕೋಟಿ ರೂ. ಹಣ ಜಪ್ತಿ, ಓರ್ವ ವ್ಯಕ್ತಿಯ ಬಂಧನ
ಸೂಕ್ತ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಕೆಜಿ ಬೆಳ್ಳಿ ಆಭರಣ ವಶ
ಬೆಂಗಳೂರು: ಸೂಕ್ತ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 10 ಕೆ.ಜಿ ಬೆಳ್ಳಿ ಆಭರಣವನ್ನ ಜಪ್ತಿ ಮಾಡಲಾಗಿದೆ. ಎಸ್.ಜೆ.ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ