ಕೊಪ್ಪಳ: ಹಟ್ಟಿ ಚಿನ್ನದ ಗಣಿಯಿಂದ 70 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಚಿನ್ನದ ನಿಕ್ಷೇಪ
ಕಳೆದ ಮೂರು ವರ್ಷಗಳ ಹಿಂದೆ ಕುಷ್ಟಗಿ ತಾಲೂಕಿನ ಕೆಲ ಭಾಗದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿತ್ತು ಎನ್ನುವ ಸುದ್ದಿಗಳು ಹರಿದಾಡಿದ್ದವು. ಇದೀಗ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ.
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಸುಮಾರು 113 ಅಡಿ ಆಳದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಹಟ್ಟಿ ಚಿನ್ನದ ಗಣಿಯಿಂದ ನಾರಿನಾಳ ಗ್ರಾಮ 70 ಕಿ.ಮೀ. ದೂರದಲ್ಲಿದೆ. ಚಿನ್ನದ ನಿಕ್ಷೇಪ ಪತ್ತೆಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ತಂಡ ಅಧ್ಯಯನ ನಡೆಸಿತ್ತು. ಕಳೆದ ಮೂರು ದಿನಗಳಿಂದ ಈ ತಂಡ ನಾರಿನಾಳ ಗ್ರಾಮದಲ್ಲಿ ಬೀಡು ಬಿಟ್ಟಿತ್ತು.
ಕಳೆದ ಮೂರು ವರ್ಷಗಳ ಹಿಂದೆ ಕುಷ್ಟಗಿ ತಾಲೂಕಿನ ಕೆಲ ಭಾಗದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿತ್ತು ಎನ್ನುವ ಸುದ್ದಿಗಳು ಹರಿದಾಡಿದ್ದವು. ಇದೀಗ ನಾರಿನಾಳ ಗ್ರಾಮದಲ್ಲಿ ಚಿನ್ನದ ನಿಕ್ಷೇಪ ಪತ್ತೆಯಾಗಿದೆ. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಹುಡಕಾಟ ನಡೆಸುತ್ತಿತ್ತು. ಚಿನ್ನದ ನಿಕ್ಷೇಪ ಪತ್ತೆ ಬಗ್ಗೆ ಅಧ್ಯಯನ ನಡೆಸಿದ್ದ ತಂಡಕ್ಕೆ ನಾರಿನಾಳ ಗ್ರಾಮದ ಬಳಿ 113 ಅಡಿ ಆಳದಲ್ಲಿ ನಿಕ್ಷೇಪ ಪತ್ತೆಯಾಗಿದೆ.
ಆರೋಪಿ ಸೆರೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಕೊರೊನಾಗೆ ಚಿಕಿತ್ಸೆ ಪಡೆಯುವ ವೇಳೆ ಆರೋಪಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯ, ಫಿಂಗರ್ ಪ್ರಿಂಟ್ ಆಧರಿಸಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಬೆಂಗಳೂರಿನ ಬಾಗಲೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ 6.67 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 90 ಗ್ರಾಂ ಬೆಳ್ಳಿ ಮತ್ತು 15 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ
Kotigobba 3, Salaga Release LIVE: ತೆರೆ ಮೇಲೆ ‘ಕೋಟಿಗೊಬ್ಬ 3’, ‘ಸಲಗ’ ಹವಾ ಶುರು; ಇಲ್ಲಿದೆ ಲೈವ್ ಅಪ್ಡೇಟ್ಸ್