ಕೊಪ್ಪಳ ಭೀಕರ ಅಪಘಾತದಲ್ಲೊಂದು ಕರುಣಾಜನಕ ಕಥೆ; ತಾಯಿಯನ್ನ ಕಳೆದುಕೊಂಡು ಅನಾಥರಾದ ಮೂವರು ಮಕ್ಕಳು
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಮಾಹಿತಿ ನೀಡಿದ್ದಾರೆ.
ಕೊಪ್ಪಳ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ (Accident) ಹೊಂದಿರುವಂತಹ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬಾನಾಪುರ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯವಾಗಿದೆ. ಭೀಕರ ಅಪಘಾತದಲ್ಲೊಂದು ಕರುಣಾಜನ ಕಥೆ ಕಂಡುಬಂದಿದ್ದು, ಮೂವರು ಮಕ್ಕಳು ಅನಾಥರಾಗಿದ್ದಾರೆ. ಕಳೆದ ವರ್ಷ ತಂದೆಯನ್ನ ಕಳೆದುಕೊಂಡಿದ್ದ ಮಕ್ಕಳು, ನಿನ್ನೆ ನಡೆದ ಅಪಘಾತದಲ್ಲಿ ತಾಯಿ ಪಾರವ್ವನನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಅಪಘಾತದಲ್ಲಿ ತಾಯಿ ಪಾರವ್ವ ಸಾವನ್ನಪ್ಪಿದ್ದು, ಪುಟ್ಟರಾಜ್ ಹಾಗೂ ಭೂಮಿಕಾಗೆ ಗಾಯವಾಗಿದೆ. ಇನ್ನೋರ್ವ ಮಗ ಬಸವರಾಜ್ ಅಪಘಾತದಲ್ಲಿ ಪಾರಾಗಿದ್ದಾನೆ. ಪಾರವ್ವ ಪತಿ ಬೀರಪ್ಪ ಕಳೆದ ವರ್ಷ ಅನಾರೋಗ್ಯದಿಂದ ಮೃತಪಟ್ಟಿದ್ದರು. ಬೀರಪ್ಪ, ಪಾರವ್ವ ದಂಪತಿಗಳ ಮಕ್ಕಳಾದ ಬಸವರಾಜ್, ಪುಟ್ಟರಾಜ, ಭೂಮಿಕಾ ಅನಾಥರಾಗಿದ್ದಾರೆ. ಸದ್ಯ ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಪುಟ್ಟರಾಜ್, ಭೂಮಿಕಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕೊಪ್ಪಳ: ಅಪಘಾತದಲ್ಲಿ ಐವರ ದುರ್ಮರಣ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದರು. ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕುಕನೂರ ತಾಲೂಕು ಆಸ್ಪತ್ರೆಗೆ ಸಚಿವ ಹಾಲಪ್ಪ ಆಚಾರ್ ಭೇಟಿ ನೀಡಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ: ಗಾಂಜಾ ಮತ್ತಲ್ಲಿ ದರೋಡೆ: ರಾಬರಿ ಮಾಡಿದ ಹಣದಲ್ಲಿ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಿ ಪ್ರಾಯಶ್ಚಿತ