AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ -ಸಿಎಂ

ಕುಮಾರಸ್ವಾಮಿ ಅವರನ್ನು ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಕೊಪ್ಪಳದಲ್ಲಿ ಗುಡುಗಿದ್ದಾರೆ. ರಾಜ್ಯಪಾಲರು, ಹೆಚ್​ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆಂದು ಭಯ ಪಟ್ಟಿದ್ದಾರೆ ಎಂದರು.

ಕುಮಾರಸ್ವಾಮಿ ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ, ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ -ಸಿಎಂ
ಸಿಎಂ ಸಿದ್ದರಾಮಯ್ಯ, ಹೆಚ್​ಡಿ ಕುಮಾರಸ್ವಾಮಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Aug 21, 2024 | 2:41 PM

Share

ಕೊಪ್ಪಳ, ಆಗಸ್ಟ್​.21: ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಅರೆಸ್ಟ್​ ಮಾಡಿ ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ ಅಂತಹ ಸನ್ನಿವೇಶ ಬಂದ್ರೆ ಮುಲಾಜಿಲ್ಲದೆ ಅರೆಸ್ಟ್ ಮಾಡುತ್ತೇವೆ. ಕುಮಾರಸ್ವಾಮಿ ಭಯ ಪಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟಾಂಗ್ ಕೊಟ್ಟಿದ್ದಾರೆ. SSVM ಕಂಪನಿಗೆ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಆರೋಪಕ್ಕೆ ಸಂಬಂಧಿಸಿ ಕೊಪ್ಪಳ ತಾಲೂಕಿನ ಗಿಣಗೇರಾ ಏರ್​ಸ್ಟ್ರಿಪ್​​ನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಸುಳ್ಳು ಹೇಳಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಎದುರಾಗಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿ, ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ 60 ಕೇಸ್ ಇದೆ ಎಂದಿದ್ದರು. ಸದ್ಯ ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಿರಗೇಟು ಕೊಟ್ಟಿದ್ದಾರೆ. ಕುಮಾರಸ್ವಾಮಿ ಭಯ ಪಟ್ಟುಕೊಂಡಿದ್ದಾರೆ ಅಂತಾ ಲೇವಡಿ ಮಾಡಿದ್ದಾರೆ.

ಅರೆಸ್ಟ್ ಮಾಡಿ ಅಂತ ನಾನು ಎಲ್ಲೂ ಹೇಳಿಲ್ಲ, ಅಂತಹ ಸನ್ನಿವೇಶ ಬಂದ್ರೆ ಯಾವುದೇ ಮುಲಾಜಿಲ್ಲದೇ ಅರೆಸ್ಟ್ ಮಾಡ್ತೇವೆ. ಕುಮಾರಸ್ವಾಮಿ ಭಯ ಪಟ್ಟಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡ್ತಾರೆಂದು ಭಯ ಪಟ್ಟಿದ್ದಾರೆ.

ಪ್ರಾಸಿಕ್ಯೂಷನ್​​ಗೆ ನಾವು ಕೇಳಿಲ್ಲ, ಖಾಸಗಿಯವರು ಸಹ ಕೇಳಿಲ್ಲ. ಎಸ್​​ಐಟಿ ಹಾಗೂ ಲೋಕಾಯುಕ್ತ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹ ಮಾಡಿ ಪ್ರಾಸಿಕ್ಯೂಷನ್​​ಗೆ ಅನುಮತಿ ಕೇಳಿದ್ದಾರೆ. ಅದರ ಅರ್ಥ ಕುಮಾರಸ್ವಾಮಿ ವಿರುದ್ಧ ಸಾಕ್ಷಿಗಳು ಇವೆ ಅಂತಾ. ತನಿಖೆ ಮಾಡಿ, ಸಾಕ್ಷಿ ಇದ್ದರೂ ಸಹ ಬಿಟ್ಟುಬಿಡಬೇಕಾ? ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ, ನನಗೆ ನೋಟಿಸ್ ಕೊಟ್ರು, ಟಿ.ಜೆ.ಅಬ್ರಹಾಂ ಕೊಟ್ಟ ಪತ್ರದ ಮೇಲೆ ಅವತ್ತೇ ನೋಟಿಸ್ ನೀಡಿದ್ದಾರೆ. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿಗೆ ಯಾಕೆ ನೋಟಿಸ್​ ಕೊಡಲಿಲ್ಲ? ಲೋಕಾಯುಕ್ತ ತನಿಖೆ ಮಾಡಿ ಪ್ರಾಶಿಕ್ಯೂಷನ್​ಗೆ ಕೇಳಿದ್ರೂ ಕೊಟ್ಟಿಲ್ಲ. ಕುಮಾರಸ್ವಾಮಿ ಸುಳ್ಳು ಹೇಳಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಪ್ರಾಸಿಕ್ಯೂಷನ್ ಸಂಕಷ್ಟ: ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಪ್ರಕರಣಗಳ ವ್ಯತ್ಯಾಸವೇನು? ಇಲ್ಲಿದೆ ವಿವರ

ಏನಿದು ಪ್ರಕರಣ?

2007ರಲ್ಲಿ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಮಯ. ಈ ವೇಳೆ ಬಳ್ಳಾರಿಯ ಸಂಡೂರಿನಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಭೂಮಿ ಮಂಜೂರು ಮಾಡಿದ್ದರು. ನಿಯಮ ಉಲ್ಲಂಘಿಸಿ 550 ಹೆಕ್ಟೇರ್​ ಭೂಮಿ ಮಂಜೂರು ಆರೋಪ ಕೇಳಿಬಂದಿತ್ತು. ಈ ವಿಚಾರವನ್ನ 2011ರ ಲೋಕಾಯುಕ್ತರ ವರದಿಯಲ್ಲಿ ಕೂಡ ಉಲ್ಲೇಖ ಮಾಡಲಾಗಿತ್ತು. ಅದಾದ ಬಳಿಕ ಲೋಕಾಯುಕ್ತರು ತನಿಖೆ ಮಾಡಿ ಗವರ್ನರ್​ಗೆ ಪತ್ರ ಬರೆದಿದ್ದರು. 2023ರ ನವೆಂಬರ್ 21ರಂದು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡುವಂತೆ ಕೇಳಿದ್ದರು. ಬರೋಬ್ಬರಿ 8 ತಿಂಗಳ ಬಳಿಕ ಲೋಕಾಯುಕ್ತರು ರಚಿಸಿರೋ ಎಸ್​ಐಟಿಗೆ ಸ್ಪಷ್ಟನೆ ಕೇಳಿದ್ದಾರೆ. ಇದೇ ವರ್ಷ ಜುಲೈ 29ರಂದು ಎಸ್​ಐಟಿಗೆ ಪತ್ರ ಬರೆದಿದ್ದಾರೆ. ಪತ್ರಕ್ಕೆ ಪ್ರತಿಕ್ರಿಯೆ ಕೊಟ್ಟ ಎಸ್​ಐಟಿ ಮುಖ್ಯಸ್ಥರು, ಗವರ್ನರ್​ಗೆ ನಿನ್ನೆ ಸ್ಪಷ್ಟನೆ ನೀಡಿದ್ದರು. ಈ ಸ್ಪಷ್ಟನೆಯಲ್ಲೇ ಚಾರ್ಜ್​ಶೀಟ್​​ ಸಲ್ಲಿಸ್ತೀವಿ ಅನುಮತಿ ಕೊಡಿ ಅಂತಾ ಲೋಕಾಯುಕ್ತರು ಮನವಿ ಮಾಡಿದ್ದಾರೆ.

ಇದೇ ವಿಚಾರ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಸೃಷ್ಟಿ ಮಾಡ್ತಿದೆ. ನಿನ್ನೆ ಕೈ ನಾಯಕರು ನಡೆಸಿದ್ದ ದಾಳಿಗೆ ಇವತ್ತು ಕುಮಾರಸ್ವಾಮಿ ಪ್ರತಿದಾಳಿ ಮಾಡಿದ್ರು. ಆದೇಶ ಪ್ರತಿಯಲ್ಲಿನ ಸಹಿ ನನ್ನದಲ್ಲ ಅಂತಾ ಕೈ ಪಡೆಯ ವಿರುದ್ಧವೇ ತಿರುಗುಬಾಣ ಬಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:30 pm, Wed, 21 August 24