AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮೀಯರು ವ್ಯಾಪಾರ ಮಾಡುತ್ತಿದ್ದರೆ ಖಂಡಿಸುತ್ತೇನೆ- ಶಶಿಕಲಾ ಜೊಲ್ಲೆ

ಗಂಗಾವತಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಅನ್ಯ ಧರ್ಮೀಯರ ವ್ಯಾಪಾರಕ್ಕೆ ವಿರೋಧಿಸಿ ಮನವಿ ಕೊಟ್ಟಿದ್ದಾರೆ. ಅನ್ಯ ಧರ್ಮದವರು ವ್ಯಾಪಾರ ಮಾಡುತಿದ್ದರೆ ಅದನ್ನು ನಾನು ಖಂಡಿಸುತ್ತೇನೆ. ನಮ್ಮ ಧರ್ಮದವರಿಗೆ ಅನುಕೂಲ ಆಗುವ ರೀತಿ ಮಾಡಿಕೊಡುತ್ತೇನೆ ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮೀಯರು ವ್ಯಾಪಾರ ಮಾಡುತ್ತಿದ್ದರೆ ಖಂಡಿಸುತ್ತೇನೆ- ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 05, 2022 | 3:00 PM

Share

ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅಂಜನಾದ್ರಿ ಬೆಟ್ಟದಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ವಿರೋಧ ವಿಚಾರವಾಗಿ ಈಗಾಗಲೇ ಮನವಿ ಕೊಟ್ಟಿದ್ದಾರೆ. ನನ್ನ ಗಮನಕ್ಕೆ ಬಂದಿದೆ. ಈ ಕುರಿತು  ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕೋ ಅದನ್ನ ಮಾಡುತ್ತೇನೆ. ಅನ್ಯ ಧರ್ಮಿಯರು ವ್ಯಾಪಾರ ಮಾಡುತ್ತಿದ್ದರೆ ಅದನ್ನು ಖಂಡಿಸುತ್ತೇನೆ. ಆದಷ್ಟು ನಮ್ಮ ಧರ್ಮದವರಿಗೆ ಅನುಕೂಲ ಆಗುವ ರೀತಿ ಮಾಡಿಕೊಡುತ್ತೇನೆ ಎಂದಿದ್ದಾರೆ.

ಗಂಗಾವತಿ ತಾಲೂಕಿನಲ್ಲಿರುವ ಹನುಮ ಜನ್ಮಸ್ಥಳ ಐತಿಹಾಸಿಕ ಅಂಜನಾದ್ರಿಯಲ್ಲಿಂದು ಹನುಮ ಮಾಲೆ ವಿಸರ್ಜನೆ ಹಿನ್ನಲೆ. ಅಂಜನಾದ್ರಿಯಲ್ಲಿ ಈ ಭಾರಿ ಹಿಂದೂಗಳನ್ನು ಹೊರತುಪಡಿಸಿ ವ್ಯಾಪಾರ ವಹಿವಾಟು ನೆಡಸದಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಾಣ ವೇದಿಕೆ ಮನವಿ ಮಾಡಿತ್ತು. ಹೀಗಾಗಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಇದರ ಹೊರತಾಗಿ ಇಂದು ಮುಸ್ಲಿಂ ವರ್ತಕರು ವ್ಯಾಪಾರ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

ಇದನ್ನೂ ಓದಿ:ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ

ಇನ್ನು ಇದೆ ಸಂದರ್ಭದಲ್ಲಿ ಮದರಸಾಗಳಂತೆ ಕೇಸರಿ ಶಾಲೆಗಳನ್ನ ಆರಂಭಿಸಬೇಕು ಎನ್ನುವ ವಿಚಾರವಾಗಿ ಮಾತನಾಡಿದ ಅವರು ಈಗಾಗಲೇ ಆ ಬೇಡಿಕೆಯಿದೆ, ಸಂಘರ್ಷ ನಡೆಯುತ್ತಿದೆ. ಶಿಕ್ಷಣ ಸಚಿವರು, ಸಿಎಂ ವಿಶೇಷ ಕಾಳಜಿ ವಹಿಸುತ್ತಾರೆ. ಯಾವುದಕ್ಕೂ ಹಿಂದುಗಳಿಗೆ ಅನ್ಯಾಯ ಆಗಬಾರದು. ಒಂದೇ ನಿಯಮದಡಿ ಶಿಕ್ಷಣ ಕಲಿಯಬೇಕು ಮದರಾಸಗಳನ್ನ ಸ್ಥಗಿತಗೊಳಬೇಕು ಎನ್ನುವುದಲ್ಲ, ಅಲ್ಲಿ ಹಿಂದೂ ವಿರೋಧಿ ಚಟುವಟಿಕೆ ಆಗಬಾರದು ಎಂದು ಹೇಳಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Mon, 5 December 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್