ಸಿದ್ದರಾಮಯ್ಯ ಹೆಸರು ಹೇಳಿ ನಾಲಿಗೆ ಹೊಲಸು ಮಾಡಿಕೊಳ್ಳಲ್ಲ: ಸಚಿವ ಕೆಎಸ್​ಈಶ್ವರಪ್ಪ

| Updated By: preethi shettigar

Updated on: Nov 10, 2021 | 3:53 PM

ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸಿದ್ದರಾಮಯ್ಯ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಸಚಿವ ಕೆಎಸ್​ಈಶ್ವರಪ್ಪ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹೆಸರು ಹೇಳಿ ನಾಲಿಗೆ ಹೊಲಸು ಮಾಡಿಕೊಳ್ಳಲ್ಲ: ಸಚಿವ ಕೆಎಸ್​ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
Follow us on

ಕೊಪ್ಪಳ: ಈ ಪುಣ್ಯ ಕ್ಷೇತ್ರದಲ್ಲಿ ನಾನು ಸಿದ್ದರಾಮಯ್ಯ ಹೆಸರನ್ನು ನನ್ನ ಬಾಯಿಂದ ಹೇಳಲ್ಲ. ನಾನು ನನ್ನ ನಾಲಿಗೆಯನ್ನು ಪವಿತ್ರವಾಗಿ ಇಟ್ಟುಕೊಂಡಿದ್ದೇನೆ. ಆ ಪುಣ್ಯಾತ್ಮನ ಹೆಸರು ಹೇಳಿ ನಾಲಿಗೆ ಹೊಲಸು ಮಾಡಿಕೊಳ್ಳಲ್ಲ. ಸಿದ್ದರಾಮಯ್ಯ ತಾನು ದಲಿತ ಅಂತಾರೆ. ಸಿದ್ದರಾಮಯ್ಯ ದಲಿತರೂ ಹೌದು, ಮುಸ್ಲಿಮರೂ ಹೌದು ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಸಿದ್ದರಾಮಯ್ಯ ಕುರಿತು ಪ್ರಶ್ನೆ ಕೇಳಿದ್ದಕ್ಕೆ ಸಚಿವ ಕೆಎಸ್​ಈಶ್ವರಪ್ಪ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಬಿಟ್ ಕಾಯಿನ್ ದಂಧೆಯಲ್ಲಿ ಯಾರೇ ಇದ್ದರು ಕಿತ್ತೆಸೆಯುತ್ತೇವೆ: ಸಚಿವ ಈಶ್ವರಪ್ಪ
ಬಿಟ್ ಕಾಯಿನ್ ದಂಧೆಯಲ್ಲಿ ಯಾರೇ ಮಂತ್ರಿಗಳು ಅಥವಾ ಯಾರೇ ಇದ್ದರೂ ಒಂದು ಕ್ಷಣವೂ ಇಟ್ಟುಕೊಳ್ಳಲ್ಲ. ಕಾಂಗ್ರೆಸ್‌ನವರು ಬದುಕಿದ್ದೇವೆಂದು ತೋರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತನಾಡುತ್ತಿದ್ದಾರೆ. ನಾ ಮುಂದು ತಾ ಮುಂದು ಎಂದು ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಬಳಿಕ ಪ್ರಿಯಾಂಕ್ ಖರ್ಗೆ ಮಾತಾಡುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಬೇಜವ್ದಾರಿಯಾಗಿ ಮಾತನಾಡಿದ್ದಾರೆ. ಬಿಟ್ ಕಾಯಿನ್ ದಂಧೆ ಬಗ್ಗೆ ಚೂರು ಪೇಪರ್ ಇದ್ದರೂ ಬಹಿರಂಗಪಡಿಸಲಿ. ಆ ಭಾಗದಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್. ಗೃಹ ಸಚಿವ ಆರಗ ಜ್ಞಾನೇಂದ್ರ ಯಾವ ವಸೂಲಿ ಮಾಡಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾಗಲ್ಲ. ಬಸವರಾಜ ಬೊಮ್ಮಾಯಿಯವರೇ ಸಿಎಂ ಆಗಿ ಇರುತ್ತಾರೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

ಮತ್ತೊಮ್ಮೆ ಕಾಂಗ್ರೆಸ್ ಬ್ಲಾಕ್ ಮೇಲ್ ಮಾಡುತ್ತಾರೆ. ಬಿಜೆಪಿ ನಾಯಕರು ಯಾರೂ ಇದರಲ್ಲಿ ಇಲ್ಲ. ಮೂರು ಜನ ಮುಖ್ಯಮಂತ್ರಿ ಮಾಡೋದು ಕಾಂಗ್ರೆಸ್​ಗೆ ಅಭ್ಯಾಸ ಇದೆ. ಚುನಾವಣೆವರೆಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ:
ಮೇಕೆದಾಟು ಯೋಜನೆ ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ, ಕಾಂಗ್ರೆಸ್​ಗೆ ಈಗೇಕೆ ಮೇಕೆದಾಟು ನೆನಪಿಗೆ ಬಂತು? – ಸಚಿವ ಈಶ್ವರಪ್ಪ ಪ್ರಶ್ನೆ

Siddaramaiah: ಜಿಟಿ ದೇವೇಗೌಡ ನನ್ನನ್ನೇ ಚುನಾವಣೆಯಲ್ಲಿ ಸೋಲಿಸಿದ್ದ ಗಿರಾಕಿ; ಜಿಟಿಡಿ ಬಗ್ಗೆ ಸಿದ್ದರಾಮಯ್ಯ ಗುಣಗಾನ

Published On - 2:11 pm, Wed, 10 November 21