ಅಂಜನಾದ್ರಿ ಬೆಟ್ಟ ಏರಿ ದರ್ಶನ ಪಡೆದ ಕೆಲವೇ ಕ್ಷಣಗಳಲ್ಲಿ ಪ್ರಾಣತೆತ್ತ ರಾಜಸ್ಥಾನದ ಭಕ್ತ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 30, 2024 | 3:06 PM

ಆಂಜನೇಯನ ಜನ್ಮಸ್ಥಳ ಎಂದು ಪ್ರಸಿದ್ಧಿ ಪಡೆದಿರುವ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿದ್ದ ರಾಜಸ್ಥಾನ ಮೂಲದ ಭಕ್ತ ಭಾಗಚಂದ್ ಠಾಕ್ ಎಂಬುವವರು ಆಂಜನೇಯ ದರ್ಶನ ಪಡೆದು ಹೊರಗಡೆ ಬಂದ ಕೆಲವೇ ಕ್ಷಣಗಳಲ್ಲಿ ಪ್ರಾಣತೆತ್ತ ಘಟನೆ ಇಂದು(ಶುಕ್ರವಾರ) ನಡೆದಿದೆ.

ಅಂಜನಾದ್ರಿ ಬೆಟ್ಟ ಏರಿ ದರ್ಶನ ಪಡೆದ ಕೆಲವೇ ಕ್ಷಣಗಳಲ್ಲಿ ಪ್ರಾಣತೆತ್ತ ರಾಜಸ್ಥಾನದ ಭಕ್ತ
ಅಂಜನಾದ್ರಿ, ಅಂಜನಾದ್ರಿ ಬೆಟ್ಟ ಏರಿದ್ದ ಭಕ್ತ ಹೃದಯಾಘಾತದಿಂದ ಸಾವು
Follow us on

ಕೊಪ್ಪಳ, ಆ.30: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಏರಿದ ಬಳಿಕ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಧಾರ್ಮಿಕ ಸ್ಥಳಗಳ ದರ್ಶನಕ್ಕೆಂದು ಬಂದಿದ್ದ ರಾಜಸ್ಥಾನ ಮೂಲದ ಭಕ್ತ ಭಾಗಚಂದ್ ಠಾಕ್(63), ಆಂಜನೇಯನ ಜನ್ಮಸ್ಥಳ ಎಂದು ಪ್ರಸಿದ್ಧಿ ಪಡೆದಿರುವ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿದ್ದರು. ಅದರಂತೆ 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯ ದರ್ಶನ ಪಡೆದು ಹೊರಗಡೆ ಬಂದಾಗ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ಸರಣಿ ಅಪಘಾತ; ತಪ್ಪಿದ ಭಾರೀ ದುರಂತ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಗ್ರಾಮದ ಬಳಿ ಶಾಲಾ‌ ವಾಹನ, ಕಾರು ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಕಾರಿನಲ್ಲಿದ್ದ ಓರ್ವ ವ್ಯಕ್ತಿಯ ತಲೆಗೆ ಹಾಗೂ ಶಾಲಾ ವಾಹನದಲ್ಲಿದ್ದ ಶಿಕ್ಷಕಿಯರಿಗೆ ಸಣ್ಣಪುಟ್ಟ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ರಸ್ತೆ ಕಿರಿದಾಗಿದ್ದ ಹಿನ್ನಲೆ ಅಪಘಾತವಾಗಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೊರಟ ಭಕ್ತ: ಇತ್ತ ಮತ್ತೊಮ್ಮೆ ಮೋದಿಗಾಗಿ ಅಂಜನಾದ್ರಿಗೆ ಪಾದಯಾತ್ರೆ

ಕೆರೆಗೆ ಬಿದ್ದು ಕಾಡಾನೆ ದಾರುಣ ಸಾವು

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ಕೆರೆಗೆ ಬಿದ್ದು 10 ವರ್ಷದ ಕಾಡಾನೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ನೀರು ಕುಡಿಯಲು ಬಂದು ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಕೆರಯ ಹೂಳಿನಲ್ಲಿ‌ಸಿಲುಕಿ ಮೇಲೆ‌ ಬರಲಾರದೆ ಕೊನೆಯುಸಿರೆಳೆದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರಿಕ್ಷೆ ಬಳಿಕ ಕಾಡಾನೆಯ ಅಂತ್ಯಸಂಸ್ಕಾರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Fri, 30 August 24