ಕೊಪ್ಪಳ: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ದೂರು ದಾಖಲು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಸ್ತೆ ದುರಸ್ಥಿಗೆ ಆಗ್ರಹಿಸಿ ಅಕ್ಟೋಬರ್ 1 ರಂದು ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಲವರು ಅವರ ಕಾರು ಅಡ್ಡಗಟ್ಟಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಂದು ಆರೋಪಿಸಿದ ತಹಶೀಲ್ದಾರ್​ ವಿಠ್ಠಲ್ ಚೌಗಲಾ ಅವರು ಕವಲಗಾ ಗ್ರಾಮದ 14 ಜನರ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕೊಪ್ಪಳ: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ದೂರು ದಾಖಲು, ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಕವಲೂರು ಗ್ರಾಮಸ್ಥರ ಆಕ್ರೋಶ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 03, 2024 | 2:46 PM

ಕೊಪ್ಪಳ, ಅ.03: ರಸ್ತೆಗಾಗಿ ಪ್ರತಿಭಟನೆ ಮಾಡಿದವರ ವಿರುದ್ಧ ತಹಶೀಲ್ದಾರ್(Tahsildar)​ ದೂರು ನೀಡಿರುವ ಘಟನೆ ಕೊಪ್ಪಳ(Koppal) ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ‌ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ವಿವರ

ರಸ್ತೆ ದುರಸ್ಥಿಗೆ ಆಗ್ರಹಿಸಿ ಅಕ್ಟೋಬರ್ 1 ರಂದು ಕವಲೂರು ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಸೇರಿದಂತೆ ಎಲ್ಲರೂ ಭಾಗಿಯಾಗಿದ್ದರು. ಗ್ರಾಮದ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಕವಲೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಹದಗೆಟ್ಟಿದ್ದರಿಂದ ಬಂದ್ ನಡೆಸಿ, ಗ್ರಾಮದ ಜನ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಆರೋಪ; ಹಿಂದೂ ಸಂಘಟನೆಗಳಿಂದ ಬಿಇಒ ಕಚೇರಿ ಎದುರು ಪ್ರತಿಭಟನೆ

ವಲಗಾ ಗ್ರಾಮದ 14 ಜನರ ವಿರುದ್ಧ ದೂರು

ಇನ್ನು ಪ್ರತಿಭಟನೆ ದಿನ, ಮನವಿ ಸ್ವೀಕರಿಸಲು ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ, ಪಿಡ್ಲೂಡಿ ಎಇಇ ವೆಂಕಟೇಶ್ ಅವರು ಬಂದಿದ್ದರು. ಈ ಸಮಯದಲ್ಲಿ ಕೆಲವರು ಅವರ ಕಾರು ಅಡ್ಡಗಟ್ಟಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಎಂದು ತಹಶೀಲ್ದಾರ್​ ವಿಠ್ಠಲ್ ಚೌಗಲಾ ಅವರು ಕವಲಗಾ ಗ್ರಾಮದ 14 ಜನರ ವಿರುದ್ಧ ದೂರು ನೀಡಿದ್ದಾರೆ. ರಸ್ತೆ ರಿಪೇರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಾರ್ವಜನಿಕರ‌ ಮೇಲೆ ದೂರು ದಾಖಲಿಸಿದ ತಹಶೀಲ್ದಾರ್​ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 3 October 24