ಕೊಪ್ಪಳ: ಲಾರಿ ಡಿಕ್ಕಿ; ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಪ್ರತ್ಯೇಕ ಘಟನೆ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಟಿಕ್ಕಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ: ಲಾರಿ ಡಿಕ್ಕಿ; ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 01, 2024 | 4:52 PM

ಕೊಪ್ಪಳ, ಸೆ.01: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಪರಶುರಾಮ (40) ಹಾಗೂ ಹನುಮಂತ (35) ಮೃತ ದುರ್ದೈವಿಗಳು. ಇನ್ನು ಘಟನೆ ಬಳಿಕ ಸ್ಥಳದಿಂದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶಿಲನೆ ನಡೆಸಿದ್ದಾರೆ.

ಬೈಕ್​ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ; ಟೆಕ್ಕಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೈಕ್​ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಟಿಕ್ಕಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಗಾಂಧಿನಗರದ ಚಿರಾಯು (24) ಧಾರುಣ ಸಾವು. ವೀಕೆಂಡ್ ಹಿನ್ನಲೆ ಬೈಕ್​ನಲ್ಲಿ ಜಾಲಿ ರೈಡ್ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಸವಾರನಿಗೆ ಕಾಲು ಮುರಿತವಾಗಿದ್ದು, ಗಾಯಾಳುವನ್ನ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಮಧ್ಯರಸ್ತೆಯಲ್ಲಿ ಕುರ್ಚಿ ಹಾಕಿ ಕುಳಿತವನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಟ್ರಕ್

ಲಾರಿಗೆ ಬೈಕ್​ ಡಿಕ್ಕಿಯಾಗಿ ಯುವಕ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ4 ದಾಬಸ್ ಪೇಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ರಿವರ್ಸ್ ಬರುತ್ತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತಾಯಿ ಮಮತಾ(45) ಕೂರಿಸಿಕೊಂಡು ಊರಿಗೆ ಹೊರಟಿದ್ದ ಮಗ ಕುಶಾಲ್(20)ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ತಾಯಿ ಮಮತಾಗೆ ಗಂಭೀರ ಗಾಯವಾಗಿದ್ದು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಚಾಲಕ ದಿವಾಕರ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Sun, 1 September 24

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ