ಕೊಪ್ಪಳ, ಜನವರಿ 21: ಸೋಮವಾರ (ಜ.22) ರಂದು ಅಯೋಧ್ಯೆಯಲ್ಲಿ (Ayodhya) ರಾಮಲಲ್ಲಾ (Ramlalla) ಮೂರ್ತಿ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯುತ್ತದೆ. ಇತ್ತ ರಾಮನ ಬಂಟ ಹನುಮ ಜನ್ಮಸ್ಥಳ ಅಂಜನಾದ್ರಿ (Anjanadri) ಬೆಟ್ಟದ ಕೆಳಗೆ 500 ಕೆಜಿ ತೂಕವಿರುವ, 9 ಅಡಿ ಎತ್ತರದ ಪಂಚಲೋಹದ ಶ್ರೀರಾಮನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಪಂಚಲೋಹದ ಶ್ರೀರಾಮನ ಮೂರ್ತಿಯನ್ನು ಬೆಂಗಳೂರಿನ ಖಾಸಗಿ ಸಂಸ್ಥೆಯವರು ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ತಯಾರು ಮಾಡಿಸಿದ್ದಾರೆ. ಸದ್ಯ ಈ ಮೂರ್ತಿಯನ್ನು ಸಂಸ್ಥೆಯವರು ಮುಜರಾಯಿ ಇಲಾಖೆಯ ಆಡಳಿತಾಧಿಕಾರಿ ಮಹಾಂತೇಶ್ ಅವರಿಗೆ ಹಸ್ತಾಂತರಿಸಿದ್ದಾರೆ.
ಮೊದಲು ರಾಮನ ಮೂರ್ತಿ ಸ್ವೀಕರಿಸಲು ಮುಜರಾಯಿ ಇಲಾಖೆ ಅಧಿಕಾರಿಗಳು ನಿರಾಕರಿಸಿದ್ದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರು ರಾಮನ ಮೂರ್ತಿ ಸ್ವೀಕರಿಸುವಂತೆ ಹೇಳಿದ ಬಳಿಕ, ಮುಜರಾಯಿ ಇಲಾಖೆ ಕಾರ್ಯದರ್ಶಿ ಸೂಚನೆ ಮೇರೆಗೆ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: Ayodhya Ram Mandir: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮಮಂದಿರ, ಫೋಟೋಗಳು ಇಲ್ಲಿವೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮಮಂದಿರ ಸೆಟ್ ಹಾಕಲಾಗಿದೆ. ಬಿಜೆಪಿ ಯುವಘಟಕ ರಾಜ್ಯಾಧ್ಯಕ್ಷ ಹಾಗೂ ಸ್ಥಳಿಯ ಶಾಸಕ ದೀರಜ್ ಮುನಿರಾಜು ಅವರು ರಾಮಮಂದಿರ ಸೆಟ್ ಅನ್ನು ನಿರ್ಮಾಣ ಮಾಡಿಸಿದ್ದಾರೆ. ಈ ಸೆಟ್ ಜನರ ಕಣ್ಮನ ಸೆಳೆಯುತ್ತಿದೆ. ರಾಮಮಂದಿರ ಸೆಟ್ ಮುಂದೆ ನಿಂತು ಸಾರ್ವಜನಿಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.
ಅಲ್ಲದೇ ಪೋಷಕರು ಮಕ್ಕಳಿಗೆ ರಾಮ, ಸೀತೆ ಮತ್ತು ಆಂಜನೇಯನ ವೇಷ ಹಾಕಿಸಿ ಸೆಟ್ ಮುಂದೆ ನಿಲ್ಲಿಸಿ ಫೋಟೋ ತೆಗೆಸಿಕೊಳ್ಳುತ್ತಿದ್ದಾರೆ. ಅಲ್ಲದೇ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ ವೀಕ್ಷಿಸಲು ಬೃಹತ್ ಎಲ್ಇಡಿ ವಾಲ್ ಅಳವಡಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:15 pm, Sun, 21 January 24