AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮ ಶ್ರೇಷ್ಠ: ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ರಾಯರೆಡ್ಡಿ

ಈ ಹಿಂದೆ ಸಿಎಂ ಅಧಿಕಾರ ಹಸ್ತಾಂತರ ಸಂಬಂಧ ಸಚಿವ ಬಸವರಾಜ ರಾಯರೆಡ್ಡಿ, ಸಿದ್ದರಾಮಯ್ಯನವರ ಪರ ಬ್ಯಾಟಿಂಗ್ ಮಾಡಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿದ್ದರು. ಇದೀಗ ಡಿಕೆ ಶಿವಕುಮಾರ್ ಸರ್ಕಾರದಲ್ಲಿ ಸಚಿವರಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ರಾಜಕೀಯ ಬಿಟ್ಟು ಧರ್ಮದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ.

ಬೇರೆ ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮ ಶ್ರೇಷ್ಠ:  ಹಜ್ ಯಾತ್ರೆಗೆ ಹೋಗುವ ಆಸೆ ಬಿಚ್ಚಿಟ್ಟ ರಾಯರೆಡ್ಡಿ
Basavaraj Rayareddy
ಶಿವಕುಮಾರ್ ಪತ್ತಾರ್
| Edited By: |

Updated on: Aug 30, 2026 | 6:52 PM

Share

ಕೊಪ್ಪಳ, (ಆಗಸ್ಟ್ 30): ಬೇರೆ ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ (Islam) ಧರ್ಮ ಶ್ರೇಷ್ಠ. ನನಗೆ ಹಜ್ ಯಾತ್ರೆಗೆ ಹೋಗುವ ಆಸೆ ಇದೆ. ಆದ್ರೆ, ಹಜ್​ ಯಾತ್ರೆಗೆ ಹೋಗಲು ನಾವು ಕನ್ವರ್ಟ್ ಆಗಿರಬೇಕು ಎಂದು ಸಚಿವ ರಬಸವರಾಜ ರಾಯರೆಡ್ಡಿ (Basavaraj rayareddy) ಹಜ್ ಯಾತ್ರೆಗೆ ಹೋಗುವ ಆಸೆ ಬಿಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರಿನಲ್​ಲಿಂದು ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಠ ಮಂದಿರಗಳಿಗೆ ಹೋಗಬಾರದು, ನಾನು ಹೋಗಲ್ಲ. ಇಸ್ಲಾಂ ಶ್ರೇಷ್ಠ ಧರ್ಮ, ಇಸ್ಲಾಂ ಬಗ್ಗೆ ತಪ್ಪು ಕಲ್ಪನೆ ಇದೆ. ನಾನು ಕುರಾನ್ ಅಧ್ಯಯನ ಮಾಡುವುದಕ್ಕೆ ತಯಾರಿದ್ದೇನೆ ಎಂದು ಹೇಳಿದರು.

ಕುರಾನ್ ಅಧ್ಯಯನ ಮಾಡಲು ಸಿದ್ಧ

ಇಸ್ಲಾಂ ಅತ್ಯಂತ ಮಾನವೀಯತೆಯಿಂದ ಕೂಡಿದ ಶ್ರೇಷ್ಠ ಧರ್ಮವಾಗಿದೆ. ಆದರೆ ಇಸ್ಲಾಂ ಧರ್ಮದ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆಗಳನ್ನು ಹರಡಲಾಗುತ್ತಿದೆ. ಮನುಷ್ಯ ಸಮಾಜದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಈ ಧರ್ಮ ಹೇಳಿಕೊಡುತ್ತದೆ. ಕುರಾನ್ ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಲ್ಲ. ಮಹಮ್ಮದ್ ಪೈಗಂಬರರು ಇಡೀ ಬ್ರಹ್ಮಾಂಡಕ್ಕೆ ಕುರಾನ್ ನೀಡಿದ್ದಾರೆ. ಯಾರು ಬೇಕಾದರೂ ಕುರಾನ್ ಓದಬಹುದು, ನಾನೂ ಸಹ ಕುರಾನ್ ಅಧ್ಯಯನ ಮಾಡಲು ಸಿದ್ಧನಿದ್ದೇನೆ ಎಂದರು.

ಜನರು ಮತಾಂಧರು ಮತ್ತು ಜಾತಿವಾದಿಗಳಾಗಬಾರದು. ಕೇವಲ ಮಸೀದಿಗೆ ಹೋಗಿ ‘ಅಲ್ಲಾಹು ಅಕ್ಬರ್’ ಎಂದ ಮಾತ್ರಕ್ಕೆ, ಅಥವಾ ದೇವಸ್ಥಾನಗಳಿಗೆ ಹೋದ ಮಾತ್ರಕ್ಕೆ ಎಲ್ಲವೂ ಸರಿಯಾಗುವುದಿಲ್ಲ, ಎಲ್ಲಾ ಧರ್ಮಗಳಲ್ಲಿರುವ ಒಳ್ಳೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮುಸ್ಲಿಂ ಸಮುದಾಯ ಅಭಿವೃದ್ಧಿ ಮಾಡುವುದು ಆಧ್ಯತೆ ಎಂದ ಯತೀಂದ್ರ

ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಮುಸ್ಲಿಂ ಜನಸಂಖ್ಯೆ ದೊಡ್ಡದಿದ್ದರೂ ಇನ್ನೂ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯ ಅಭಿವೃದ್ಧಿ ಮಾಡುವುದು ನಮ್ಮ ಆಧ್ಯತೆ. ಸಿದ್ದರಾಮಯ್ಯ ಅವರು ಬಂದ ಮೇಲೆ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಿಕ್ಕಿದೆ ಎಂದರು.

ಎಲ್ಲರ ಸೃಷ್ಟಿಕರ್ತ ಒಬ್ಬನೇ. ಬೇರೆಯವರನ್ನು ಪ್ರೀತಿಯಿಂದ ಕಾಣಬೇಕು. ಧರ್ಮ ಧರ್ಮಗಳ ಮದ್ಯೆ ಜಗಳ ಹಚ್ಚಿ ರಾಜಕೀಯ ಬೆಳೆ ಬೆಯಿಸಿಕೊಳ್ಳಬಾರದು. ಧರ್ಮದ ಮಧ್ಯೆ ರಾಜಕಾರಣ ಇರಬಾರದು. ಅಂತಹ ಕೆಲಸವನ್ನು ಕೆಲವೊಂದು ಪಕ್ಷ ಮಾಡುತ್ತವೆ. ಹೀಗಾಗಿ ರಾಜಕಾರಣದಲ್ಲಿ ಧರ್ಮ ಬೆರೆಸುವ ಪಕ್ಷಕ್ಕೆ ನಿಮ್ಮ ಬೆಂಬಲ ಇರಬಾರದು ಎಂದು ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸಬೇಡಿ ಎಂದು ಕರೆ ನೀಡಿದರು.

ಬಸವರಾಜ ರಾಯರೆಡ್ಡಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಇಸ್ಲಾಂ ಧರ್ಮದ ಬಗ್ಗೆ ರಾಯರೆಡ್ಡಿ ಅವರಿಗೆ ಜ್ಞಾನ ಇದೆ. ರಾಯರೆಡ್ಡಿ ಅವರು ಸಿದ್ದರಾಮಯ್ಯ ಅವರೊಂದಿಗೆ ಉತ್ತಮ‌ ಬಾಂಧವ್ಯ ಹೊಂದಿದ್ದಾರೆ. ಸಿದ್ದರಾಮಯ್ಯ ಅವರೊಂದಿಗೆ ರಾಜಕಾರಣ ಆರಂಭ ಮಾಡಿದ್ದಾರೆ. ತಂದೆ ಅವರ ಹಾದಿಯಲ್ಲಿ ರಾಯರೆಡ್ಡಿ ಅವರು ನಡೆಯುತ್ತಿರುತ್ತಾರೆ ಎಂದು ರಾಯರೆಡ್ಡಿ ಅವರನ್ನು ಹಾಡಿಹೊಗಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ