ಕೊಪ್ಪಳ: ಡಿಸಿಎಂ ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ದಾಳಿ
IT Raid: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಫೆ.07) ಬೆಳಂಬೆಳಿಗ್ಗೆ ಬೆಂಗಳೂರಿನ 8 ಕ್ಕೂ ಹೆಚ್ಚು ಮತ್ತು ಬಳ್ಳಾರಿಯ ಎರಡು ಕಡೆಗಳಲ್ಲಿ ದಾಳಿ ಮಾಡಿದ್ದರು. ಇದೀಗ ಕೊಪ್ಪಳ ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ವಿ.ಆರ್ ಪಾಟೀಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.
ಕೊಪ್ಪಳ, ಫೆಬ್ರವರಿ 07: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗೋವಾ (Goa) ಮತ್ತು ಹುಬ್ಬಳ್ಳಿಯಿಂದ (Hubballi) ಬಂದಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಕೊಪ್ಪಳ (Koppal) ತಾಲೂಕಿನ ಹೊಸ ಲಿಂಗಾಪುರ ಗ್ರಾಮದಲ್ಲಿರುವ ಡಿಕೆ ಶಿವಕುಮಾರ್ ಅವರ ಆಪ್ತ ವಿಆರ್ ಪಾಟೀಲ್ (VR Patil) ಮನೆ ಮೇಲೆ ಇಂದು (ಫೆ.07) ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಉದ್ಯಮಿಯಾಗಿರುವ ವಿ.ಆರ್ ಪಾಟೀಲ್ ಒಡೆತನದ ಖಾಸಗಿ ಶಾಲೆಗೆ ಕಳೆದ ಜನವರಿ 27 ರಂದು ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ಬಂದು ಹೋದ ಕೆಲವೇ ದಿನಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಬಳ್ಳಾರಿಯಲ್ಲೂ ಐಟಿ ರೇಡ್
ಬಳ್ಳಾರಿ: ನಗರದ ಶ್ರೀನಿವಾಸ್ ಕನ್ಸಟ್ರಕ್ಷನ್ಸ್ ಮಾಲಿಕರ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ರಸ್ತೆ, ಕ್ಯಾನಲ್ ಸೇರಿದಂತೆ ವಿವಿಧ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಆಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದಾರೆ.
(ಹೆಚ್ಚಿನ ಮಾಹಿತಿಯನ್ನು ಅಪ್ಡೇಟ್ ಮಾಡಲಾಗುತ್ತಿದೆ)
Published On - 11:55 am, Wed, 7 February 24