ಸಿಎಂ ಕಾರಿಗೆ ಅಡ್ಡಿ: ಜನಾರ್ದನ ರೆಡ್ಡಿ ರೇಂಜ್​ರೋವರ್ ಕಾರು ಜಪ್ತಿ

ಅ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ರಾಯಚೂರಿನಿಂದ ಜಿಂದಾಲ್ ಏರ್​ಪೋರ್ಟ್​ಗೆ ತೆರಳುತ್ತಿದ್ದರು. ಈ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕಾರು ಚಾಲಕ ಸಿಎಂ ಕಾನ್ವೆಗೆ ಎದುರಾಗಿ ಚಾಲನೆ ಮಾಡಿದ್ದ. ಈ ಹಿನ್ನಲೆ ರೆಡ್ಡಿ ಬಳಸುವ ರೇಂಜ್ ರೋವರ್, ಸ್ಕಾರ್ಪಿಯೊ ಹಾಗೂ ಫಾರ್ಚೂನರ್ ಸೇರಿ ಮೂರು ಕಾರುಗಳನ್ನು ಜಪ್ತಿ ಮಾಡಲಾಗಿದೆ.

ಸಿಎಂ ಕಾರಿಗೆ ಅಡ್ಡಿ: ಜನಾರ್ದನ ರೆಡ್ಡಿ ರೇಂಜ್​ರೋವರ್ ಕಾರು ಜಪ್ತಿ
ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ಸೀಜ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 08, 2024 | 3:21 PM

ಕೊಪ್ಪಳ, ಅ.08: ಮುಖ್ಯಮಂತ್ರಿಗಳ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ(Janardhan Reddy) ಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಇಂದು(ಮಂಗಳವಾರ) ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿದ ಪೊಲೀಸರು ಗಂಗಾವತಿಗೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಬೆಂಗಾವಲು ವಾಹನಕ್ಕೆ ಎದುರಾಗಿ ಕಾರು ಚಾಲನೆ ಮಾಡಿದ್ದರು. ಈ ಹಿನ್ನಲೆ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ದೂರು ದಾಖಲಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಜನಾರ್ದನ ರೆಡ್ಡಿ, ‘ರಾಜಕೀಯವಾಗಿ ಸಿದ್ದರಾಮಯ್ಯ ಏನೇ ಇದ್ದರೂ, ತೊಂದರೆ ಕೊಟ್ಟರೂ, ಸಿದ್ದರಾಮಯ್ಯ ಅಲ್ಲದೇ ಹೋದರೂ ಸಿಎಂ‌ ಎಂದು ಮರ್ಯಾದೆ ಕೊಡುತ್ತೇನೆ. ನಾನು ಅಂದು ಗಂಗಾವತಿಗೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಹೋಗಿದ್ದೆ. ಬಳ್ಳಾರಿಯಲ್ಲಿ ಮನೆಯಲ್ಲಿ ಹೋಮ‌ ನಡೆಯುತ್ತಿತ್ತು. ಪೂರ್ಣಾಹುತಿಗೆ ಬರಬೇಕು ಎಂದು ಹೇಳಿದ್ದರು. ಹಾಗಾಗಿ ಮನೆಗೆ ಹೊರಟಿದ್ದೆ. ಕಾರಿನಲ್ಲಿ ಸಿಸಿ ಕ್ಯಾಮೆರಾ ಇದೆ, ದೃಶ್ಯಾವಳಿ ಕೊಡುತ್ತೇನೆ. ಅರ್ಧ ಗಂಟೆ ಕಾಲ ಕಾದರೂ ಕಾನ್ವೇ ಬರಲಿಲ್ಲ. ನಾನು ಪೊಲೀಸರಿಗೆ ಹೇಳಿ ಹೋಗಬಹುದಿತ್ತು. ನನ್ನ ಮುಂದೆ ಇರುವ ವಾಹನ ಬಿಟ್ಟರೆ ಅವರಿಗೆ ಸಮಸ್ಯೆ ಆಗುತ್ತದೆ ಎಂದು ಸಿಎಂ ಬರುವ ಮೊದಲು ಹೋಗಬೇಕು ಎಂದು ಡಿವೈಡರ್ ಮೇಲೆ ಹೋದೆ. ಅಷ್ಟು ಮೂರ್ಖತನ ನನಗಿಲ್ಲ ಎಂದರು.

ಕಾನೂನಿನ ಮೂಲಕ ಕೇಸ್ ಎದುರಿಸುತ್ತೇನೆ-ರೆಡ್ಡಿ

ಜೊತೆಗೆ ಇಂದು ಮದ ಎನ್ನುವುದು ಶಿವರಾಜ್ ತಂಗಡಗಿಗೆ ಬಹಳಷ್ಟು ಹೆಚ್ಚಿದೆ. ಮುಂದಿನ ದಿನಗಳಲ್ಲಿ ಜನ ಅವರಿಗೆ ಬುದ್ದಿ ಕಲಿಸುತ್ತಾರೆ. ಮುಂದೆ ಅವರಿಗೆ ಡೆಪಾಸಿಟ್ ಕೂಡ ಸಿಗಲ್ಲ. ಇನ್ನು ನಾನು ಡಿವೈಡರ್ ಮೂಲಕ ಹೋಗಿದ್ದೆ. ಆದರೆ, ಡ್ರೈವರ್ ಮೇಲೆ‌ ಎಫ್ ಐಆರ್ ಆಗಿದೆ. ನಾನು ಕಾನೂನಿನ ಮೂಲಕ ಕೇಸ್ ಎದುರಿಸಲಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಘಟನೆ ವಿವರ

ಇದೇ ಅ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ರಾಯಚೂರಿನಿಂದ ಜಿಂದಾಲ್ ಏರ್​ಪೋರ್ಟ್​ಗೆ ತೆರಳುತ್ತಿದ್ದರು. ಈ ವೇಳೆ ರೆಡ್ಡಿ ಕಾರು ಚಾಲಕ ಸಿಎಂ ಕಾನ್ವೆಗೆ ಎದುರಾಗಿ ಚಾಲನೆ ಮಾಡಿದ್ದ. ರೂಲ್ಸ್ ಬ್ರೇಕ್ ಹಿನ್ನೆಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬಳಸುವ ರೇಂಜ್ ರೋವರ್, ಸ್ಕಾರ್ಪಿಯೊ ಹಾಗೂ ಫಾರ್ಚೂನರ್ ಸೇರಿ  ಮೂರು ಕಾರಗಳ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಅದರಂತೆ ಇಂದು ಬೆಂಗಳೂರಿನಲ್ಲಿ ಸೀಜ್​ ಮಾಡಲಾಗಿದೆ.

ಇದನ್ನೂ ಓದಿ:ಡಿವೈಡರ್ ಹತ್ತಿಸಿ ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಶಾಸಕ ಜನಾರ್ದನ ರೆಡ್ಡಿ ಕಾರು

ಅಂದು ಸಿಎಂ ಸಂಚಾರ ಹಿನ್ನಲೆ ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ನಿಮಿಷಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಗಂಗಾವತಿ ನಗರದ ಸಿಬಿಎಸ್ ಸರ್ಕಲ್​ನಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡ ಸಿಲುಕ್ಕಿದ್ದರು. ಬಹಳ ಸಮಯವಾದರೂ ವಾಹನ ಸಂಚಾರಕ್ಕೆ ಅವಕಾಶ ನೀಡದ ಹಿನ್ನಲೆ ರೋಡ್​ನ ಡಿವೈಡರ್ ಮೂಲಕ ಜನಾರ್ದನ್​ ರೆಡ್ಡಿ ಕಾರು ಚಾಲಕ, ಕಾನ್ವೇ ವಿರುದ್ದ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗಿದ್ದರು. ಬಳಿಕ ರೆಡ್ಡಿ ಕಾರು ಚಾಲಕ ರೂಲ್ಸ್ ಬ್ರೇಕ್​ ಹಿನ್ನಲೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Tue, 8 October 24