AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ

ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದ ಅವರು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯಕ್ಕೆ ಜನಮನ್ನಣೆ ಗಳಿಸಿದ್ದರು. ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.

ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ
ಡಿಕೆ ಶಿವಕುಮಾರ್ ಆಪ್ತ, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ ನಿಧನ
ಶಿವಕುಮಾರ್ ಪತ್ತಾರ್
| Edited By: |

Updated on: Mar 23, 2026 | 9:49 AM

Share

ಕೊಪ್ಪಳ,ಮಾರ್ಚ್​ 23: ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತರಾಗಿದ್ದ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸಂಗಟಿ

ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದನ್ನೂ ಓದಿ ಡಿಕೆ ಶಿವಕುಮಾರ್​​​​ನ್ನ ಸಿಎಂ ಮಾಡಿ ಎಂದ ಸ್ವಾಮೀಜಿಗಳಿಗೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ: ಪ್ರಣವಾನಂದಶ್ರೀ

ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ. ಅವರ ಅಗಲಿಕೆಯಿಂದ ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ ಎಂದು ಹಲವರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ