AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್: ಡೀಸೆಲ್ ಅಭಾವದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ; 4 ಸಾರಿಗೆ ನಿಗಮಗಳ ಇಂಧನ ಬಾಕಿ ಪಾವತಿಗೆ 100 ಕೋಟಿ ರೂ. ಬಿಡುಗಡೆಗೆ ಆದೇಶ

ಕೊಪ್ಪಳ, ವಿಜಯಪುರದಲ್ಲಿ ಡೀಸೆಲ್ ಕೊರತೆ ಎದುರಾದ ಬೆನ್ನಲ್ಲೇ, ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳ ಡೀಸೆಲ್ ಬಾಕಿ ತೀರಿಸಲು 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಕ್ರಮವು ಸಾರ್ವಜನಿಕ ಸಾರಿಗೆ ಬಸ್ ಸೇವೆಗಳ ನಿರಂತರ ಕಾರ್ಯಾಚರಣೆಗೆ, ವಿಶೇಷವಾಗಿ 'ಶಕ್ತಿ' ಯೋಜನೆ ಪ್ರಯಾಣಿಕರಿಗೆ ಇಂಧನ ವ್ಯತ್ಯಯವಿಲ್ಲದೆ ಸಹಾಯ ಮಾಡಲಿದೆ. ಬಿಎಂಟಿಸಿಗೆ ಅತಿ ಹೆಚ್ಚು ಪಾಲು ದೊರೆತಿದೆ.

ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್: ಡೀಸೆಲ್ ಅಭಾವದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ; 4 ಸಾರಿಗೆ ನಿಗಮಗಳ ಇಂಧನ ಬಾಕಿ ಪಾವತಿಗೆ 100 ಕೋಟಿ ರೂ. ಬಿಡುಗಡೆಗೆ ಆದೇಶ
ಸಾಂದರ್ಭಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: |

Updated on: Oct 10, 2026 | 6:11 PM

Share

ಬೆಂಗಳೂರು, ಅ.10: ಇತ್ತಿಚೆಗೆ ಕೊಪ್ಪಳ ಮತ್ತು ವಿಜಯಪುರದಲ್ಲಿ ಬಸ್‌ಗಳಿಗೆ ಡೀಸೆಲ್ ಅಭಾವ ಎದುರಾಗಿತ್ತು. ಇಂಧನಕ್ಕಾಗಿ ಡಿಪೋಗಳಲ್ಲಿ ಬಸ್‌ಗಳು ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು ಪರದಾಡು ಸ್ಥಿತಿ ನಿರ್ಮಾಣವಾಗಿತ್ತು ಎಂಬ ಬಗ್ಗೆ ಟಿವಿ9 ಕನ್ನಡ ವರದಿ ಮಾಡಿತ್ತು. ಇದೀಗ ಟಿವಿ9 ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ. ರಾಜ್ಯದ ನಾಲ್ಕೂ ಸರ್ಕಾರಿ ರಸ್ತೆ ಸಾರಿಗೆ ನಿಗಮಗಳು ಎದುರಿಸುತ್ತಿದ್ದ ತೀವ್ರ ಇಂಧನ ವೆಚ್ಚದ ಹೊರೆ ಹಾಗೂ ಡೀಸೆಲ್ ಬಾಕಿ ಪಾವತಿಯ ಸಮಸ್ಯೆಗೆ ರಾಜ್ಯ ಸರ್ಕಾರ ಕೊನೆಗೂ ಪರಿಹಾರ ನೀಡಿದೆ. ನಾಲ್ಕೂ ಸಾರಿಗೆ ನಿಗಮಗಳ ಡೀಸೆಲ್ ಬಾಕಿ ಮೊತ್ತವನ್ನು ತೀರಿಸಲು ಒಟ್ಟು 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2026-27ನೇ ಸಾಲಿನ ಬಜೆಟ್ ಹಂಚಿಕೆಯಡಿ ಈ ಅನುದಾನ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದು, ಸಾರಿಗೆ ಸಂಸ್ಥೆಗಳ ದಿನನಿತ್ಯದ ಕಾರ್ಯಾಚರಣೆಗೆ ಈ ನಿರ್ಧಾರ ಭಾರಿ ಬೆಂಬಲ ನೀಡಲಿದೆ.

ಯಾವ ಸಾರಿಗೆ ನಿಗಮಕ್ಕೆ ಎಷ್ಟು ಅನುದಾನ ಬಿಡುಗಡೆ?:

ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು 100 ಕೋಟಿ ರೂ. ಅನುದಾನದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಅತಿ ಹೆಚ್ಚಿನ ಪಾಲು ದೊರೆತಿದೆ. ನಿಗಮವಾರ ಹಂಚಿಕೆಯ ವಿವರ ಹೀಗಿದೆ.

ಸಾರಿಗೆ ನಿಗಮ ಬಿಡುಗಡೆಯಾದ ಅನುದಾನ (ರೂ. ಗಳಲ್ಲಿ)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ₹62.53 ಕೋಟಿ (ಅತಿ ಹೆಚ್ಚು)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ₹18.90 ಕೋಟಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ₹10.61 ಕೋಟಿ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ₹7.96 ಕೋಟಿ

ಇದನ್ನೂ ಓದಿ: ಕೊಪ್ಪಳ ಆಯ್ತು, ಈಗ ವಿಜಯಪುರದಲ್ಲೂ ಕೆಎಸ್​ಆರ್​ಟಿಸಿ ಬಸ್​ಗಳಿಗೆ ಡೀಸೆಲ್ ಅಭಾವ!

ಆರ್ಥಿಕ ಇಲಾಖೆಯು ಅಕ್ಟೋಬರ್ 8 ರಂದು ಈ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿತ್ತು. ಅದರ ಬೆನ್ನಲ್ಲೇ ಅಕ್ಟೋಬರ್ 9 ರಂದು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣವಾಗಿ ಡೀಸೆಲ್ ಬಾಕಿ ಪಾವತಿಗೆ ಮಾತ್ರವೇ ಬಳಸಬೇಕು ಹಾಗೂ ಸರ್ಕಾರದ ನಿರ್ದಿಷ್ಟ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ವಿನಿಯೋಗಿಸಬೇಕು ಎಂದು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸರ್ಕಾರದ ಈ ಸಮಯೋಚಿತ ನಿರ್ಧಾರದಿಂದಾಗಿ ಸಾರ್ವಜನಿಕ ಸಾರಿಗೆ ಬಸ್‌ಗಳಿಗೆ ಇಂಧನ ಪೂರೈಕೆಯಲ್ಲಿ ಎದುರಾಗಬಹುದಾಗಿದ್ದ ವ್ಯತ್ಯಯ ತಪ್ಪಿದಂತಾಗಿದೆ. ಇನ್ನು ಇದು ರಾಜ್ಯಾದ್ಯಂತ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಹಾಗೂ ‘ಶಕ್ತಿ’ ಯೋಜನೆಯಡಿ ಪ್ರಯಾಣಿಸುವ ಮಹಿಳೆಯರಿಗೆ ಬಸ್ ಸಂಚಾರದಲ್ಲಿ ಇಂಧನ ಕೊರತೆಯಿಂದ ಯಾವುದೇ ವ್ಯತ್ಯಯ ಉಂಟಾಗದಂತೆ ತಡೆಯಲು ಈ ಅನುದಾನ ನೆರವಾಗಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಮಹಾಲಯ ಅಮಾವಾಸ್ಯೆಯಂದೇ ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಏರ್‌ಪೋರ್ಟ್‌ನಲ್ಲೇ ಹೈಟೆಕ್ ಭಿಕ್ಷಾಟನೆ!
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್