ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ: ಮೂವರು ಸಾವು

ಕೊಪ್ಪಳ(Koppal) ತಾಲೂಕಿನ ಹೊಸಳ್ಳಿ ಬಳಿ ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್​ವೊಂದು ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾಗಿದ್ದು, ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ: ಮೂವರು ಸಾವು
ಕೊಪ್ಪಳದಲ್ಲಿ ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ
Updated By: ಕಿರಣ್ ಹನುಮಂತ್​ ಮಾದಾರ್

Updated on: May 17, 2024 | 10:43 PM

ಕೊಪ್ಪಳ, ಮೇ.17: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಮೇ.17) ರಾತ್ರಿ ಕೊಪ್ಪಳ(Koppal) ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾಗಿದ್ದು, ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೇವಿಗೆ ಹರಕೆ ತೀರಿಸಲು ಹೋಗಿದ್ದ 30 ಜನ

ಶಿವಪ್ಪ ಹೊಸಮನಿ ಎಂಬುವವರು ತಮ್ಮ ಸಂಬಂಧಿಕರನ್ನು ಕರೆದುಕೊಂಡು, ಹುಲಿಗೆಮ್ಮ ದೇವಿಗೆ ಹರಕೆ ತೀರಿಸುವ ಸಲುವಾಗಿ ನಿನ್ನೆ(ಮೇ.16) ರಾತ್ರಿ 8 ಗಂಟೆಗೆ ಮೂವತ್ತಕ್ಕೂ ಹೆಚ್ಚು ಜನ ಟ್ರ್ಯಾಕ್ಟರ್​ ಮೂಲಕ ಹೋಗಿದ್ದರು. ಅದರಂತೆ ಇಂದು ದೇವಿಗೆ ಪೂಜೆ ಸಲ್ಲಿಸಿ, ಹರಕೆ ತೀರಿಸಿ ಮರಳಿ ತಮ್ಮೂರಿಗೆ ಹೋಗುವಾಗ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಬಸವರಾಜ (22), ಮುತ್ತಪ್ಪ (22) ಹಾಗೂ ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60)  ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಜಸ್ಟ್​ ಮಿಸ್​

ಬೆಂಗಳೂರಿನಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇತ್ತೀಚೆಗೆ ಕ್ರೈಂ ಸಂಖ್ಯೆಗಳು ಹೆಚ್ಚಳವಾಗುತ್ತಿದ್ದು, ಅದರಂತೆ ಇಂದು ರಾತ್ರಿ ನಗರದ ಯಲಹಂಕ ನ್ಯೂಟೌನ್​ನ ಡೈರಿ ವೃತ್ತದ ಬಳಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಯಾದ ವ್ಯಕ್ತಿ ಯಾರೆಂಬುದು ಇನ್ನು ತಿಳಿದಿಲ್ಲ,ಈ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

PDO ಮೇಲೆ ಗ್ರಾ.ಪಂ. ಅಧ್ಯಕ್ಷೆ ಪತಿಯಿಂದ ಹಲ್ಲೆ ಆರೋಪ

ಮೈಸೂರು: ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದಲ್ಲಿ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪತಿ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಪಿಡಿಒ ಮಂಜುನಾಥ್ ಮೇಲೆ ಗ್ರಾ.ಪಂಚಾಯತಿ ಅಧ್ಯಕ್ಷೆ ಜಯಲಕ್ಷ್ಮೀ ಎಂಬುವವರ ಪತಿ ಕೃಷ್ಣೇಗೌಡ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ವಿಡಿಯೋ ವೈರಲ್ ಆಗಿದೆ. ಈ ಕುರಿತು ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Fri, 17 May 24