AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ವ್ಯಕ್ತಿ ಸಾವು; ವಿಂಡ್ ಪವರ್ ಕಂಪನಿ ವಿರುದ್ದ ಆಕ್ರೋಶ

ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಿನ್ನೆ(ಮೇ.09) ಮೇಕೆಗಳನ್ನು ಮೇಯಿಸಿಕೊಂಡು ಬರಲು ಹೋಗಿದ್ದವ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಮನೆಗೆ ಮೇಕೆಗಳು ಬಂದ್ರು ಮೇಕೆಯ ಮಾಲೀಕ ಮಾತ್ರ ನಾಪತ್ತೆಯಾಗಿದ್ದ. ಹೀಗಾಗಿ ಕುಟುಂಬದವರು ಹುಡುಕಿದಾಗ ಶವವಾಗಿ ಪತ್ತೆಯಾಗಿದ್ದಾನೆ. ಆದ್ರೆ, ವ್ಯಕ್ತಿಯ ಸಾವಿಗೆ ವಿಂಡ್ ಪವರ್ ಕಂಪನಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇಂದು ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ವ್ಯಕ್ತಿ ಸಾವು; ವಿಂಡ್ ಪವರ್ ಕಂಪನಿ ವಿರುದ್ದ ಆಕ್ರೋಶ
ಮೃತ ವ್ಯಕ್ತಿ ಸಂಬಂಧಿಕರ ಗೋಳಾಟ
ಸಂಜಯ್ಯಾ ಚಿಕ್ಕಮಠ
| Edited By: |

Updated on: May 10, 2024 | 3:28 PM

Share

ಕೊಪ್ಪಳ, ಮೇ.10: ಜಿಲ್ಲೆಯ ಕುಕನೂರು(Kuknoor) ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದ ಐವತ್ತೈದು ವರ್ಷದ ಈರಪ್ಪ ಎನ್ನುವವರು ನಿನ್ನೆ (ಮೇ.09) ಸಂಜೆ ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿ ಮೃತಪಟ್ಟಿದ್ದಾರೆ. ಇದೀಗ ಆತನ ಸಾವಿಗೆ ವಿಂಡ್ ಪವರ್ ಕಂಪನಿಯೇ ಕಾರಣ ಎಂದು ಗ್ರಾಮಸ್ಥರು ಮತ್ತು ಕುಟುಂಬದವರು ಆರೋಪಿಸಿದ್ದಾರೆ. ಮೃತ ಈರಪ್ಪ, ಮೇಕೆಗಳನ್ನು ಮೇಯಿಸಿಕೊಂಡು ಇಡೀ ಕುಟುಂಬವನ್ನ ತಾನೇ ಸಾಕುತ್ತಿದ್ದ. ನಿನ್ನೆ ತನ್ನ ಮೇಕೆಗಳನ್ನು ಹೊಡೆದುಕೊಂಡು, ಗ್ರಾಮದ ಹೊರವಲಯಕ್ಕೆ ಹೋಗಿದ್ದ ಈರಪ್ಪ, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಆದರೆ, ಈರಪ್ಪನ ಮೇಕೆಗಳು ಮನೆಗೆ ಬಂದಿದ್ದವು. ಈ ಹಿನ್ನಲೆ ಕುಟುಂಬದವರು ಮತ್ತು ಗ್ರಾಮಸ್ಥರು ಈರಪ್ಪನಿಗಾಗಿ ನಿನ್ನೆ ಸಂಜೆಯಿಂದ ಹುಡುಕಾಟ ನಡೆಸಿದ್ದರು. ಆದ್ರೆ, ರಾತ್ರಿ ಹನ್ನೊಂದು ಗಂಟೆ ಸಮಯದಲ್ಲಿ ಈರಪ್ಪ, ಗ್ರಾಮದ ಹೊರವಲಯದಲ್ಲಿರುವ ಮರದ ಕೆಳಗೆ ಶವವಾಗಿ ಪತ್ತೆಯಾಗಿದ್ದ. ಕೃಷಿ ಜಮೀನಿನಲ್ಲಿರುವ ಹೈಟೆನ್ಷನ್ ವಿದ್ಯುತ್ ವೈಯರ್ ತಗುಲಿದ ಪರಿಣಾಮ, ಈರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದ.

ತನ್ನ ಮೇಕೆಗಳಿಗೆ ತಪ್ಪಲು ಹಾಕುವ ಉದ್ದೇಶದಿಂದ ಬನ್ನಿ ಮರವೇರಿದ್ದ ಈರಪ್ಪ, ಟೊಂಗೆಗಳನ್ನು ಕತ್ತರಿಸಿದ್ದ. ಆದ್ರೆ, ಟೊಂಗೆಗಳ ಸಮೀಪವೇ ಇದ್ದಿದ್ದ ಹೈಟೆನ್ಷನ್ ವೈಯರ್​ಗೆ ಟೊಂಗೆಗಳು ಟಚ್ ಆಗಿದ್ದರಿಂದ, ವಿದ್ಯುತ್ ಪ್ರವಹಿಸಿ, ಈರಪ್ಪ ಮರದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೀಗಾಗಿ ಈರಪ್ಪನ ಸಾವಿಗೆ ವಿಂಡ್ ಪವರ್ ಕಂಪನಿ ಕಾರಣ ಎಂದು ಕುಟುಂಬದವರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಂಡ್ ಪ್ಯಾನ್​ಗಳಿಂದ ಉತ್ಪತ್ತಿಯಾಗೋ ವಿದ್ಯುತ್​ನ್ನು ಸರಬರಾಜು ಮಾಡಲು ರೈತರ ಜಮೀನಿನಲ್ಲಿ 33 ಕೆವಿ ವಿದ್ಯುತ್ ಲೈನ್​ನನ್ನು ವಿಂಡ್ ಪವರ್ ಕಂಪನಿಯವರು ಹಾಕಿದ್ದಾರೆ. ಆದ್ರೆ, ಅನೇಕ ಕಡೆ ಹೈಟೆನ್ಷನ್ ವೈಯರ್ ಬಳಿಯೇ ಮರಗಳು ಇದ್ದರೂ ಮರದ ಟೊಂಗೆಗಳನ್ನು ಕತ್ತಿರಿಸುವ ಕೆಲಸ ಮಾಡಿಲ್ಲ. ಜೊತೆಗೆ ಯಾವುದೇ ಸೂಚನಾ ಫಲಕಗಳನ್ನು ಕೂಡಾ ಹಾಕಿಲ್ಲ.

ಇದನ್ನೂ ಓದಿ:ಶಿವಮೊಗ್ಗ ಗ್ಯಾಂಗ್​ವಾರ್​ನಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಸಾವು, ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಹೀಗಾಗಿ ಯಾವುದೇ ಮಾಹಿತಿ ಇಲ್ಲದ ಕುರಿಗಾಹಿ ಈರಪ್ಪ, ಟೊಂಗೆಗಳನ್ನು ಕತ್ತರಿಸಲು ಹೋಗಿ, ಜೀವವನ್ನೇ ಕಳೆದುಕೊಂಡಿದ್ದಾನೆ. ಇನ್ನು ವಿಂಡ್ ಪವರ್ ಕಂಪನಿ ವಿರುದ್ದ ಕ್ರಮ ಕೈಗೊಳ್ಳಬೇಕು. ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪರಿಹಾರ ನೀಡೋವರಗೆ ಶವವನ್ನು ಸ್ಥಳದಿಂದ ತಗೆದುಕೊಂಡು ಹೋಗಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾರೆ.

ಗ್ರಾಮಸ್ಥರ ಮನವೊಲಿಕೆ ಮಾಡುವ ಕೆಲಸವನ್ನು ಪೊಲೀಸರು ಮತ್ತು ತಹಶೀಲ್ದಾರ್ ಮಾಡಿದ್ರು ಕೂಡ ಗ್ರಾಮಸ್ಥರು ವಿಂಡ್ ಪವರ್ ಕಂಪನಿ ವಿರುದ್ದ ಕ್ರಮ ಕೈಗೊಳ್ಳಬೇಕು. ಪರಿಹಾರ ನೀಡಬೇಕು ಎಂದು ಪಟ್ಟು ಹಿಡದಿದ್ದಾರೆ. ಕೊಪ್ಪಳ ಜಿಲ್ಲೆಯ ಹಲವೆಡೆ ವಿಂಡ್ ಪವರ್ ಕಂಪನಿಗಳ ಹಾವಳಿಯಿಂದ ಜನರು, ಜಾನುವಾರುಗಳು, ಕಾಡು ಪ್ರಾಣಿಗಳು ಜೀವವನ್ನು ಕಳೆದುಕೊಳ್ಳುತ್ತಿವೆ. ಹೀಗಾಗಿ ಕಂಪನಿ ಇನ್ನಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ