AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಬೊಕ್ಕಸ ಖಾಲಿ: ಡೀಸೆಲ್ ಹಾಕಿಸಲೂ ಹಣವಿಲ್ಲದೆ ಸ್ಥಗಿತಗೊಂಡ ಕೆಎಸ್‌ಆರ್‌ಟಿಸಿ ಬಸ್ ಸಂಚಾರ

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಕೊಪ್ಪಳದ ಕುಷ್ಟಗಿಯಲ್ಲಿ ಡೀಸೆಲ್ ಕೊರತೆಯಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪರದಾಡಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ್ ಪ್ರತಿಭಟನೆ ನಡೆಸಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ಆರೋಪಿಸಿದ್ದಾರೆ. ಸಿಲುಕಿದ ಪ್ರಯಾಣಿಕರಿಗಾಗಿ ಶಾಸಕರು ಸ್ವಂತ ವೆಚ್ಚದಲ್ಲಿ ಖಾಸಗಿ ವಾಹನಗಳನ್ನು ವ್ಯವಸ್ಥೆ ಮಾಡಿದರು.

ಸರ್ಕಾರದ ಬೊಕ್ಕಸ ಖಾಲಿ: ಡೀಸೆಲ್ ಹಾಕಿಸಲೂ ಹಣವಿಲ್ಲದೆ ಸ್ಥಗಿತಗೊಂಡ ಕೆಎಸ್‌ಆರ್‌ಟಿಸಿ ಬಸ್ ಸಂಚಾರ
ಸಾರಿಗೆ ಸಂಕಷ್ಟ
ಶಿವಕುಮಾರ್ ಪತ್ತಾರ್
| Edited By: |

Updated on: Oct 08, 2026 | 9:28 AM

Share

ಕೊಪ್ಪಳ, ಅ.8: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆಯ ಅನುಷ್ಠಾನದ ಬೆನ್ನಲ್ಲೇ ಸಾರಿಗೆ ಸಂಸ್ಥೆಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂಬ ಆರೋಪಗಳಿಗೆ ಪುಷ್ಟಿ ನೀಡುವಂತಹ ಆಘಾತಕಾರಿ ಘಟನೆಯೊಂದು ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದಿದೆ. ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸಂಸ್ಥೆಯ ಬಳಿ ಹಣವಿಲ್ಲದೆ ಕೆಲವು ಮಾರ್ಗಗಳಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇಂತಹ ಅನೇಕ ಘಟನೆಗಳು ರಾಜ್ಯದ ಹಲವು ಭಾಗಗಳಲ್ಲಿ ನಡೆದಿದೆ.

ಪಾವತಿಸದ ಕಾರಣ ಡೀಸೆಲ್ ಅಭಾವ ಎದುರಾಗಿದೆ. ಇದರಿಂದಾಗಿ ಮಂಗಳವಾರ ಮತ್ತು ಬುಧವಾರ ವಿವಿಧ ಗ್ರಾಮೀಣ ಹಾಗೂ ಪ್ರಮುಖ ಮಾರ್ಗಗಳ ಬಸ್ ಸಂಚಾರ ದಿಢೀರ್ ರದ್ದಾಗಿದೆ. ಬೆಳಿಗ್ಗೆ ಶಾಲೆ, ಕಾಲೇಜುಗಳಿಗೆ ತೆರಳಬೇಕಿದ್ದ ವಿದ್ಯಾರ್ಥಿಗಳು ಹಾಗೂ ಕೆಲಸ ಕಾರ್ಯಗಳಿಗೆ ಹೊರಟಿದ್ದ ಪ್ರಯಾಣಿಕರು ಗಂಟೆಗಟ್ಟಲೆ ಬಸ್ ನಿಲ್ದಾಣದಲ್ಲೇ ಕಾಯುವಂತಾಯಿತು.

ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರು ಬಸ್ ನಿಲ್ದಾಣಕ್ಕೆ ಧಾವಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಬಸ್ ನಿಲ್ದಾಣದ ಮುಂದೆ ಖಾಲಿ ಕೊಡ ಹಿಡಿದು ಕುಳಿತ ಶಾಸಕರು, ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ ದೇಣಿಗೆ ಸಂಗ್ರಹಿಸಿ ಸರ್ಕಾರ ಮತ್ತು ಸಾರಿಗೆ ಇಲಾಖೆಯ ವಿರುದ್ಧ ಧರಣಿ ನಡೆಸಿದರು. ಬಸ್ ನಿಲ್ದಾಣದಲ್ಲಿ ಕಂಗಾಲಾಗಿ ನಿಂತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗಾಗಿ ಶಾಸಕರು ಸ್ವಂತ ವೆಚ್ಚದಲ್ಲಿ 5 ಖಾಸಗಿ ಕ್ರೂಸರ್ ವಾಹನಗಳನ್ನು ತರಿಸಿ, ಅವರನ್ನು ಸುರಕ್ಷಿತವಾಗಿ ತಮ್ಮ ತಮ್ಮ ಗ್ರಾಮಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದರು.

ಇದನ್ನೂ ಓದಿ: ಒಂದು ಬಳೆಯಿಂದ ಜೋಗತಿ ಕೊಲೆ ಕೇಸ್ ರಹಸ್ಯ ಭೇದಿಸಿದ ಪೊಲೀಸರು: ಸ್ಫೋಟಕ ಹೇಳಿಕೆ ನೀಡಿದ ಪ್ರಿಯಕರ

“ಗ್ಯಾರಂಟಿಯಿಂದ ಸರ್ಕಾರದ ಬೊಕ್ಕಸ ಸಂಪೂರ್ಣ ಖಾಲಿ” – ಶಾಸಕರ ಆರೋಪ:

ಪ್ರತಿಭಟನೆ ನಡೆಸಿ ಮಾತನಾಡಿದ ಶಾಸಕ ದೊಡ್ಡನಗೌಡ ಪಾಟೀಲ್, “ಗ್ಯಾರಂಟಿ ಯೋಜನೆಗಳ ಭರಾಟೆಯಲ್ಲಿ ರಾಜ್ಯ ಸರ್ಕಾರದ ಬೊಕ್ಕಸ ಸಂಪೂರ್ಣವಾಗಿ ಖಾಲಿಯಾಗಿದೆ. ಸಾರಿಗೆ ಸಂಸ್ಥೆಗಳಿಗೆ ಅನುದಾನ ನೀಡದ ಕಾರಣ ಬಸ್‌ಗಳ ರಿಪೇರಿ ಹಾಗೂ ಡೀಸೆಲ್ ಖರೀದಿಸಲೂ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಕುಷ್ಟಗಿ ಡಿಪೋದ ಈ ಸ್ಥಿತಿಯೇ ಸಾರಿಗೆ ಸಂಸ್ಥೆಯ ಕಂಗಾಲು ಸ್ಥಿತಿಗೆ ತಾಜಾ ಉದಾಹರಣೆಯಾಗಿದೆ” ಎಂದು ಸರ್ಕಾರ ಹಾಗೂ ಸಾರಿಗೆ ಇಲಾಖೆಯ ವಿರುದ್ಧ ಗಂಭೀರ ಆರೋಪ ಮಾಡಿದರು.

ರಾಜ್ಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ