AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಎದುರಲ್ಲೇ ಯುವಕನ ಭೀಕರ ಕೊಲೆ: ಬೆಚ್ಚಿಬಿದ್ದ ಕೊಪ್ಪಳ ಜನ, ಮುಳುವಾಯ್ತು ಪ್ರೀತಿ!

ಭಾನುವಾರ ರಾತ್ರಿ ಮಸೀದಿ ಎದುರಲ್ಲೇ ನಡೆದ ಭೀಕರ ಕೊಲೆಗೆ ಇಡೀ ಕೊಪ್ಪಳದ ಜನರು ಬೆಚ್ಚಿ ಬಿದ್ದಿದ್ದಾರೆ. ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ ಆಗಿದೆ. ಸದ್ಯ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಆರೋಪ ಕೂಡ ಕೇಳಿಬಂದಿದೆ.

ಮಸೀದಿ ಎದುರಲ್ಲೇ ಯುವಕನ ಭೀಕರ ಕೊಲೆ: ಬೆಚ್ಚಿಬಿದ್ದ ಕೊಪ್ಪಳ ಜನ, ಮುಳುವಾಯ್ತು ಪ್ರೀತಿ!
ಕೊಲೆಯಾದ ಗವಿಸಿದ್ದಪ್ಪ ನಾಯಕ್, ಆರೋಪಿ ಸಾದಿಕ್
ಶಿವಕುಮಾರ್ ಪತ್ತಾರ್
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 04, 2025 | 10:36 AM

Share

ಕೊಪ್ಪಳ, ಆಗಸ್ಟ್​ 04: ಅನ್ಯ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆ (kill) ನಡೆದಿರುವಂತಹ ಘಟನೆ ಭಾನುವಾರ ರಾತ್ರಿ ಕೊಪ್ಪಳ (Koppal) ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ನಡೆದಿದೆ. ಸಾದಿಕ್ ಕೋಲ್ಕಾರ್​ ಎಂಬುವನಿಂದ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಲಾಗಿದೆ. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ.

ಕೊಲೆ ಮಾಡಿ ಶರಣಾದ ಆರೋಪಿ

ಗವಿಸಿದ್ದಪ್ಪನನ್ನ ಕೊಲೆ ಮಾಡಿದ ಸಾದಿಕ್​ ನೇರವಾಗಿ ಬಂದು ನಗರ ಠಾಣೆಗೆ ಶರಣಾಗಿದ್ದಾನೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​​ 103(1) ಬಿಎನ್​ಎಸ್​ 2023 ಕಲಂ 3(2)ವಿ, ಎಸ್​ಸಿ-ಎಸ್​ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಇದನ್ನೂ ಓದಿ
Image
ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ
Image
ಕಸಗುಡಿಸ್ತಿದ್ದವನ ಬಳಿ 100 ಕೋಟಿ ರೂ ಆಸ್ತಿ: KRIDLನ ಮತ್ತಷ್ಟು ಅಕ್ರಮ ಬಯಲು
Image
ಅನೈತಿಕ ಸಂಬಂಧ, ಗೆಣೆಕಾರನ ಜೊತೆಸೇರಿ ಪತಿಯನ್ನು ಕೊಂದ ಪತ್ನಿ
Image
ಪ್ರಿಯಕರನೊಂದಿಗೆ ಸೇರಿ ಹಬ್ಬದ ದಿನವೇ ಪತಿಗೆ ಮುಹೂರ್ತ ಇಟ್ಟ ಪತ್ನಿ: ಕೊಲೆ

ಈ ಕೊಲೆಗೆ ಕಾರಣವಾಗಿದ್ದು ಗವಿಸಿದ್ದಪ್ಪ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು. ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಜೊತೆಗೆ ಮನೆ ಬಿಟ್ಟು ಓಡಿ ಸಹ ಹೋಗಿದ್ದರು.‌ ಈ ಕುರಿತಂತೆ ನಾಲ್ಕೈದು ಬಾರಿ ಪಂಚಾಯತಿ ಸಹ ಮಾಡಲಾಗಿತ್ತು. ಆದರೂ ಸಹ ಗವಿಸಿದ್ದಪ್ಪ ಹಾಗೂ ಮುಸ್ಲಿಂ ಯುವತಿಯ ನಡುವೆ ಪ್ರೀತಿ ಮುಂದುವರೆದಿತ್ತು. ಹೀಗಾಗಿ ಗವಿಸಿದ್ದಪ್ಪನನ್ನು ಸಾದಿಕ್ ಮಚ್ಚಿನಿಂದ ಕೊಲೆ ಮಾಡಿದ್ದಾನೆ.

ಸದ್ಯ ಇದೊಂದು ಪಕ್ಕಾ ಪ್ರೀ ಪ್ಲ್ಯಾನ್ಡ್ ಮರ್ಡರ್ ಅನ್ನೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಬಹದ್ದೂರ ಬಂಡಿ ರಸ್ತೆಯಿಂದ ಬರುತ್ತಿದ್ದ ಗವಿ ಸಿದ್ದಪ್ಪನನ್ನ ಅಡ್ಡ ಹಾಕಿ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಪ್ಪಳ ನಗರದಲ್ಲಿ ಇಷ್ಟೊಂದು ಭೀಕರ ಕೊಲೆ ನಡೆದಿರಲಿಲ್ಲ. ಯಾವಾಗ ಇಂತಹದ್ದೊಂದು ಕೊಲೆ ಸುದ್ದಿ ಕೇಳಿದ ಬಳಿಕ ಇಡೀ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಇನ್ನು ಕೊಲೆಯಾದ ಯುವಕ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತ್​ ಸದಸ್ಯ ಯಮನೂರಪ್ಪ ನಾಯಕ್​​ ಸಂಬಂಧಿ.

ಇನ್ನು ಮೂಲಗಳ ಪ್ರಕಾರ ಈ ಮೊದಲು ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಮುಸ್ಲಿಂ ಅಪ್ರಾಪ್ತ ಯುವತಿಯನ್ನು ಸಾದಿಕ್ ಪ್ರೀತಿಸುತ್ತಿದ್ದನಂತೆ.‌ ಸಾದಿಕ್​ನೊಂದಿಗೆ ಲವ್ ಬ್ರೇಕಪ್ ಮಾಡಿಕೊಂಡ ಯುವತಿ ಗವಿಸಿದ್ದಪ್ಪನನ್ನು ಪ್ರೀತಿಸಲು ಶುರು ಮಾಡಿದ್ದಳು. ಈ ವಿಷಯ ತಿಳಿದ ಸಾದಿಕ್ ಅನೇಕ ಬಾರಿ ಗವಿಸಿದ್ದಪ್ಪನೊಂದಿಗೆ ಜಗಳ ಸಹ ಮಾಡಿದ್ದನಂತೆ.‌ ಈ ವಿಷಯ ಅತಿರೇಕಕ್ಕೆ ಹೋಗಿ ರವಿವಾರ ರಾತ್ರಿ 8 ಗಂಟೆಗೆ ಮಸೀದಿ ಬಳಿ ಬೈಕ್​ನಲ್ಲಿ ಬರುತ್ತಿದ್ದ ಗವಿಸಿದ್ದಪ್ಪನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಪ್ರೀತಿ ವಿಚಾರವಾಗಿ ಕೊಲೆ

ಘಟನೆಯ ಸುದ್ದಿ ತಿಳಿಯುತ್ತಲೇ ಎಸ್​ಪಿ ಡಾ. ರಾಮ್ ಅರಸಿದ್ದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಸಹ ಕೊಪ್ಪಳಕ್ಕೆ ಭೇಟಿ ನೀಡಿ ಸಿಟಿ ರೌಂಡ್ಸ್ ಹಾಕಿದರು. ಸದ್ಯ ಸಾದಿಕ್​ ಪೊಲೀಸರಿಗೆ ಶರಣಾಗಿದ್ದಾನೆ. ಆದರೆ ಆತನಿಗೆ ಸಹಾಯ ಮಾಡಿದ ಇಬ್ಬರು ಮೂವರು ನಾಪತ್ತೆಯಾಗಿದ್ದಾರೆ. ಕೊಲೆ ಮಾಡಿ ಶರಣಾದ ಸಾದಿಕ್​ ಪ್ರೀತಿ ವಿಚಾರವಾಗಿ ಕೊಲೆ ಮಾಡಿದ್ದೇನೆಂದು ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಳಿಯನಿಂದಲೇ ಮಾವನ ಕೊಲೆ: ಶವ ಸುಟ್ಟ ಹೆಂಡತಿ, ಮಗಳು

ಘಟನಾ ಸ್ಥಳದಲ್ಲಿ ಎರಡು ಮಚ್ಚುಗಳು ಪತ್ತೆಯಾಗಿವೆ‌, ಆದರೆ ಪೊಲೀಸರು ಮಾತ್ರ ಸಾದಿಕ್ ಒಬ್ಬನೇ ಕೊಲೆ ಮಾಡಿದ್ದಾನೆ ಎನ್ನುವುದು ಹಲವು ಅನುಮಾನಗಳನ್ನು ಉಂಟುಮಾಡಿದೆ. ಇನ್ನು ಮೂಲಗಳ ಪ್ರಕಾರ ಮೂರು ಜನ ಮುಸ್ಲಿಂ ಯುವಕರು ಸೇರಿ ಗವಿಸಿದ್ದಪ್ಪನನ್ನು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇನ್ನುಳಿದವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಪೊಲೀಸರ ನಿರ್ಲಕ್ಷ್ಯದಿಂದ ಕೊಲೆ ಆಯ್ತಾ?

ಪೊಲೀಸರ ನಿರ್ಲಕ್ಷ್ಯದಿಂದ ಗವಿಸಿದ್ದಪ್ಪ ನಾಯಕ್ ಕೊಲೆ ಆಯ್ತಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿವೆ. ಏಕೆಂದರೆ ಭಾನುವಾರ ಕೊಲೆಗೂ‌ ಮುನ್ನ ಸಾದಿಕ್​ ಮಚ್ಚು ಹಿಡಿದು ರೀಲ್ಸ್ ಮಾಡಿ ಬಿಲ್ಡಪ್ ಕೊಟ್ಟಿದ್ದ. ತನ್ನ ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದ. ಬಳಿಕ ರಾತ್ರಿ 7.30 ಕ್ಕೆ ಗವಿಸಿದ್ದಪ್ಪನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದ. ಒಟ್ಟಿನಲ್ಲಿ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಕೊಲೆಯಾಗಿರುವ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 am, Mon, 4 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ