ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಪೂಜಾ ವಿವಾದ: ವಿಚಾರಣೆಗೆ ಹಾಜರಾಗುವಂತೆ ಡಿಸಿಗೆ ಸುಪ್ರೀಂ ತಾಕೀತು
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯ ದೇವಸ್ಥಾನದಲ್ಲಿ ಪೂಜಾ ವಿವಾದದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಸುಪ್ರೀಂಕೋರ್ಟ್ ತಾಕೀತು ನೀಡಿದೆ. ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶವನ್ನು ಪಾಲಿಸದ ಕಾರಣ ಡಿಸಿ ಅವರು ಆಗಸ್ಟ್ 11 ರಂದು ಆನ್‌ಲೈನ್‌ನಲ್ಲಿ ಖುದ್ದು ಹಾಜರಾಗುವಂತೆ ಸೂಚಿಸಿದೆ.

ಕೊಪ್ಪಳ, ಆಗಸ್ಟ್ 06: ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ (Anjanadri Hill) ಪೂಜಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) ಆದೇಶವನ್ನು ಜಿಲ್ಲಾಡಳಿತ ಪಾಲಿಸದ ಹಿನ್ನೆಲೆ ಆನ್‌ಲೈನ್‌ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗಲು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಇತ್ತೀಚೆಗೆ ವಿದ್ಯಾದಾಸ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ವಾದ ಆಲಿಸಿದ ಸುಪ್ರೀಂಕೋರ್ಟ್ ಡಿಸಿಗೆ ಆ.11ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಬೇರೋಬ್ಬ ಅರ್ಚಕರಿಂದ ಪೂಜೆ
ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದ ಮೇಲೆ ಆಂಜನೇಯ ದೇಗುಲವಿದೆ. ಸುಪ್ರೀಂಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ, ಅರ್ಚಕ ವಿದ್ಯಾದಾಸ್ ಬಾಬಾರಿಗೆ ಪೂಜೆಗೆ ಅವಕಾಶ ನೀಡಬೇಕೆಂದು ತಿಳಿಸಿತ್ತು. ಜೊತೆಗೆ ಬೆಟ್ಟದ ಮೇಲೆ ಅವರಿಗೆ ಮೂಲ ಸೌಲಭ್ಯ ಇರುವ ಕೊಠಡಿ ನೀಡಬೇಕು ಎಂದು ಸೂಚಿಸಿತ್ತು. ಆದರೆ ಇತ್ತೀಚಿಗೆ ಡಿಸಿ ಸುರೇಶ್ ಇಟ್ನಾಳ್ ಅಂಜನಾದ್ರಿಗೆ ಭೇಟಿ ನೀಡಿದ್ದ ವೇಳೆ ಬೇರೋಬ್ಬ ಅರ್ಚಕರು ಪೂಜೆ ಸಲ್ಲಿಸಿದ್ದರು. ಇದಕ್ಕೆ ವಿದ್ಯಾದಾಸ್ ಬಾಬಾ ವಿರೋಧ ವ್ಯಕ್ಯಪಡಿಸಿದ್ದರು.
ಇದನ್ನೂ ಓದಿ: ಅಂಜನಾದ್ರಿ ಆಂಜನೇಯನ ದರ್ಶನಕ್ಕೆ ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ಇದಾದ ಬಳಿಕ ಹುಂಡಿ ವಿಚಾರವಾಗಿಯೂ ವಿದ್ಯಾದಾಸ್ ಬಾಬಾ ಮತ್ತು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶರಾವ್ ಮಧ್ಯೆ ಮಾತಿನ ಚಕಮಕಿ ಸಹ ನಡೆದಿತ್ತು. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ನಲ್ಲಿ ವಿದ್ಯಾದಾಸ್ ಬಾಬಾ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ.
ಇದನ್ನೂ ಓದಿ: ಅಂಜನಾದ್ರಿ ಟು ಅಯೋಧ್ಯೆ ರೈಲು ಸಂಪರ್ಕಕ್ಕೆ ಹೆಚ್ಚಿದ ಆಗ್ರಹ: ಪರಿಶೀಲನೆ ಭರವಸೆ ನೀಡಿದ ಸಚಿವ ಸೋಮಣ್ಣ
ದೇವಾಲಯದ ಅರ್ಚಕರ ಪರವಾಗಿ ವಕೀಲ ವಿಷ್ಣು ಶಂಕರ್ ಜೈನ್ ವಾದಿಸಿದ್ದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ಆಗಸ್ಟ 11ರಂದು ಡಿಸಿ ಸುರೇಶ ಇಟ್ನಾಳ್ಗೆ ಆನ್‌ಲೈನ್‌ನಲ್ಲಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:36 am, Wed, 6 August 25



