ಪ್ರಾಣ ಬಿಟ್ಟೇವು ಭೂಮಿ ಬಿಡಲ್ಲ: ಪರಮಾಣು ವಿದ್ಯುತ್ ಸ್ಥಾವರ ಆರಂಭಕ್ಕೆ ಕೊಪ್ಪಳ ಅರಸಿನಕೇರಿ ಗ್ರಾಮಸ್ಥರ ವಿರೋಧ

ಆ ಗ್ರಾಮದಲ್ಲಿ ಕೇಂದ್ರ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರ ಆರಂಭಿಸಲು ಚಿಂತನೆ ನಡೆಸಿದೆ. ಅದಕ್ಕಾಗಿ ಭೂಮಿ ಗುರುತಿಸುವ ಕೆಲಸ ಕೂಡಾ ಆರಂಭವಾಗಿದೆ. ಆದರೆ, ನಾವು ಸತ್ತರು ಪರವಾಗಿಲ್ಲ, ಭೂಮಿ ನೀಡುವುದಿಲ್ಲ. ನಮ್ಮ ಹೆಣದ ಮೇಲೆ ಮಾಡಲಿ ಎಂದು ಗ್ರಾಮದ ಜನರು ಪಟ್ಟು ಹಿಡದಿದ್ದಾರೆ. ಇನ್ನೊಂದಡೆ ಕರಡಿ ಸಂರಕ್ಷಿತ ಧಾಮ ಮಾಡಲು ಮುಂದಾಗಿದ್ದ ಭೂಮಿಯಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಬೇಡ ಎಂಬ ಕೂಗು ಕೂಡಾ ಜೋರಾಗಿದೆ.

ಪ್ರಾಣ ಬಿಟ್ಟೇವು ಭೂಮಿ ಬಿಡಲ್ಲ: ಪರಮಾಣು ವಿದ್ಯುತ್ ಸ್ಥಾವರ ಆರಂಭಕ್ಕೆ ಕೊಪ್ಪಳ ಅರಸಿನಕೇರಿ ಗ್ರಾಮಸ್ಥರ ವಿರೋಧ
ಅರಸಿನಕೇರಿ ಗ್ರಾಮಸ್ಥರ ಪ್ರತಿಭಟನೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Ganapathi Sharma

Updated on:Dec 19, 2024 | 3:13 PM

ಕೊಪ್ಪಳ, ಡಿಸೆಂಬರ್ 19: ‘‘ನಾವು ಸತ್ತರೂ ಪರವಾಗಿಲ್ಲ, ತುಂಡು ಭೂಮಿಯನ್ನು ಕೂಡಾ ನೀಡುವುದಿಲ್ಲ’’ ಎಂದು ಅನೇಕ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಗ್ರಾಮದ ಉಳಿದ ಜನರು, ‘‘ನಮಗೆ ಕೆಲ ದಿನಗಳಿಂದ ನಿದ್ದೆ ಬರುತ್ತಿಲ್ಲಾ, ಆತಂಕ ಮನೆ ಮಾಡಿದೆ. ಯಾವುದೇ ಕಾರಣಕ್ಕೂ ಕೂಡಾ ನಮ್ಮ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ. ದಶಕಗಳಿಂದ ಕರಡಿ, ಚಿರತೆ ಹಾವಳಿಯಿಂದ ಜೀವ ಉಳಿಸಿಕೊಂಡು ಬಂದಿದ್ದೇವೆ. ಆದರೆ ಇದೀಗ ಜೀವ ಬಿಟ್ಟೇವೆ ಭೂಮಿ ನೀಡುವುದಿಲ್ಲ’’ ಎಂದು ಪಟ್ಟು ಹಿಡಿದಿದ್ದಾರೆ. ಹೀಗೆ ಪಟ್ಟು ಹಿಡಿದವರು ಕೊಪ್ಪಳ ತಾಲೂಕಿನ ಅರಸಿನಕೇರಿ ಗ್ರಾಮದ ಜನರು. ಸರಿಸುಮಾರು ಎರಡುವರೆ ಸಾವಿರ ಜನಸಂಖ್ಯೆ ಇರುವ ಗ್ರಾಮದಲ್ಲಿ ಇದೀಗ ದೊಡ್ಡ ಆತಂಕ ಮನೆಮಾಡಿದೆ. ನಮ್ಮ ಭೂಮಿ ಪಡೆದು, ನಮ್ಮನ್ನು ಒಕ್ಕಲೆಬ್ಬಿಸಿದರೆ ನಾವು ಹೋಗುವುದು ಎಲ್ಲಿಗೆ, ಹೊಟ್ಟೆ ತುಂಬಿಕೊಳ್ಳುವುದು ಹೇಗೆ ಎಂಬ ಚಿಂತೆ ಗ್ರಾಮದ ಜನರನ್ನು ಕಾಡುತ್ತಿದೆ. ಅಷ್ಟಕ್ಕೂ ಇವರ ಆಕ್ರೋಶ, ಚಿಂತೆಗೆ ಕಾರಣವಾಗಿದ್ದು, ಗ್ರಾಮದ ಬಳಿ ಪರಮಾಣ ವಿದ್ಯುತ್ ಸ್ಥಾವರಕ್ಕೆ ಮುಂದಾಗಿರುವುದು.

ಪರಮಾಣು ವಿದ್ಯುತ್ ಸ್ಥಾವರಕ್ಕೆ ಗ್ರಾಮಸ್ಥರ ವಿರೋಧ

ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಸ್ಟೀಲ್ ಸೇರಿದಂತೆ ನೂರಕ್ಕೂ ಹೆಚ್ಚು ಫ್ಯಾಕ್ಟರಿಗಳಿವೆ. ಅವುಗಳ ದೂಳು ಮತ್ತು ತ್ಯಾಜ್ಯದಿಂದ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಸಮಯದಲ್ಲಿ ಜಿಲ್ಲೆಯ ಅರಸಿನಕೇರಿ ಗ್ರಾಮದಲ್ಲಿ ಪರಮಾಣ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಪರಮಾಣು ವಿದ್ಯುತ್ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಸೂಚನೆ ಬಂದಿದ್ದು, ಜಿಲ್ಲಾಡಳಿತ ಅರಸಿನಕೇರಿ ಗ್ರಾಮದ ಸುತ್ತಮುತ್ತ ಕನಿಷ್ಠ 1200 ಎಕರೆ ಭೂಮಿಯನ್ನು ಗುರುತಿಸಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸ್ಥಳೀಯ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಅಧಿಕಾರಿಗಳು ಭೂಮಿ ಗುರುತಿಸುವ ಕೆಲಸ ಆರಂಭಿಸಿದ್ದಾರೆ.

Arishinakeri Village Women Protest

ಅರಸಿನಕೇರಿ ಗ್ರಾಮದ ಮಹಿಳೆಯರ ಪ್ರತಿಭಟನೆ

ಅರಸಿನಕೇರಿ ಗ್ರಾಮದಲ್ಲಿ ಸರ್ವೇ ನಂಬರ್ 80 ರಲ್ಲಿ 400ಕ್ಕೂ ಅಧಿಕ ಎಕರೆ ಅರಣ್ಯ ಭೂಮಿಯಿದ್ದು, ಸರ್ವೇ ನಂಬರ್ 9 ರಲ್ಲಿ ಇನ್ನೂರಕ್ಕೂ ಅಧಿಕ ಎಕರೆ ಅರಣ್ಯ ಭೂಮಿಯಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ 800ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಸರ್ಕಾರಿ ಮತ್ತು ಅರಣ್ಯ ಇಲಾಖೆಗೆ ಸೇರಿದ ಭೂಮಿ ಇರುವುದರಿಂದ, ಇದೇ ಸ್ಥಳದಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ತಮ್ಮೂರ ಬಳಿ ಪರಮಾಣ ವಿದ್ಯುತ್ ಸ್ಥಾವರ ಬೇಡ ಎಂದು ಗ್ರಾಮದ ಜನರು ಆಗ್ರಹಿಸುತ್ತಿದ್ದಾರೆ.

ಇನ್ನು ಗ್ರಾಮದ ಜನರು ಈ ಹಿಂದೆ ಕರಡಿ, ಚಿರತೆ ಹಾವಳಿ ಹೆಚ್ಚಾದಾಗ ಕೂಡಾ ಗ್ರಾಮವನ್ನು ಬಿಡದೇ, ಗ್ರಾಮದಲ್ಲಿಯೇ ಜೀವನ ನಡೆಸಿಕೊಂಡು ಬಂದಿದ್ದಾರೆ. ಹೆಚ್ಚಿನ ಜನರು ಕೃಷಿ ಕೆಲಸ ಮಾಡಿಕೊಂಡಿದ್ದು, ಸುತ್ತಮುತ್ತಲಿನ ಅರಣ್ಯ ಭೂಮಿಯಲ್ಲಿ ಕೂಡಾ ಉಳುಮೆ ಮಾಡಿಕೊಂಡಿದ್ದಾರೆ. ಅಕ್ರಮ ಸಕ್ರಮದಲ್ಲಿ ನಮಗೆ ಭೂಮಿ ನೀಡಬೇಕು ಎಂಬ ಹೋರಾಟವನ್ನು ಅನೇಕ ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಆದರೆ ಇದೀಗ ಸರ್ಕಾರ ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಾಡಿದರೆ ಯಾವುದೇ ಪರಿಹಾರವು ಬರುವುದಿಲ್ಲಾ, ಭೂಮಿಯೂ ಸಿಗುವುದಿಲ್ಲಾ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯದ ಮೇಲೆ ದುಷ್ಪರಿಣಾಮದ ಆತಂಕ

ಪರಮಾಣು ವಿದ್ಯುತ್ ಸ್ಥಾವರದಿಂದ ಸುತ್ತಮುತ್ತಲಿನ ಗ್ರಾಮದ ಜನರ ಆರೋಗ್ಯದ ಮೇಲೆ ಕೂಡಾ ದುಷ್ಪರಿಣಾಮ ಬೀರುವ ಆತಂಕ ಹೆಚ್ಚಾಗಿದೆ. ಹೀಗಾಗಿ ಜನವಸತಿ ಪ್ರದೇಶದ ಬಳಿ ಪರಮಾಣು ವಿದ್ಯುತ್ ಸ್ಥಾವರ ಬೇಡ ಎಂದು ಗ್ರಾಮದ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: 7ನೇ ತರಗತಿ ಪಾಸಾದರೂ ಕೊಪ್ಪಳ ಜಿಲ್ಲೆಯ 7 ಸಾವಿರ ಮಕ್ಕಳಿಗೆ ಓದಲು, ಬರೆಯಲು ಬರುತ್ತಿಲ್ಲ!

ಅರಸಿನಕೇರಿ ಸುತ್ತಮುತ್ತಲಿರುವ ಅರಣ್ಯ ಪ್ರದೇಶದ ಭೂಮಿಯಲ್ಲಿ ಕರಡಿ ಧಾಮ ಆರಂಭಿಸಲು ಈಗಾಗಲೇ ಅರಣ್ಯ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ. ಆದರೆ ಇದೇ ಭೂಮಿಯನ್ನು ಇದೀಗ ಪರಮಾಣು ಸ್ಥಾವರ ನಿರ್ಮಾಣಕ್ಕೆ ನೀಡಿದರೆ ಕರಡಿ, ಚಿರತೆ ಸೇರಿದಂತೆ ಅನೇಕ ವನ್ಯ ಪ್ರಾಣಿಗಳಿಗೆ ಕೂಡಾ ಕುತ್ತು ಬರುತ್ತದೆ. ಈ ಬಗ್ಗೆ ಕೊಪ್ಪಳ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿರುವ ಸ್ಥಳೀಯರು, ತಮ್ಮೂರ ಬಳಿ ಪರಮಾಣು ವಿದ್ಯುತ್ ಸ್ಥಾವರ ಬೇಡ ಎಂದು ಮನವಿ ಕೂಡಾ ನೀಡಿದ್ದಾರೆ. ಮನವಿಗೆ ಸ್ಪಂದಿಸದೇ ಇದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Thu, 19 December 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ