AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

Koppal Family ostracized: ಅಂತರ್ಜಾತಿ ವಿವಾಹವಾದ ಕಾರಣಕ್ಕೆ ಕೊಪ್ಪಳದ ಭಾಗ್ಯನಗರದ ಕುಟುಂಬವೊಂದಕ್ಕೆ ಸಮುದಾಯ ಒಂದರ ಮುಖಂಡರು ಬಹಿಷ್ಕಾರ ಹಾಕಿದ ವಿಚಾರ ತಿಳಿದು ಬಂದಿದೆ. ಸುಮಾರು ಒಂದುವರೆ ವರ್ಷದಿಂದ ಕುಟುಂಬವು ಬಹಿಷ್ಕಾರ ಎದುರಿಸುತ್ತಿದ್ದು, ಪೊಲೀಸರಿಗೆ ದೂರು ನೀಡಲು ಮುಂದಾದರೂ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು
ಸಾಮಾಜಿಕ ಬಹಿಷ್ಕಾರ ಎದುರಿಸುತ್ತಿರುವ ಕುಟುಂಬದವರ ನಿವಾಸ ಮತ್ತು ಒಳಚಿತ್ರದಲ್ಲಿ ಕುಟುಂದವರು.
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 07, 2024 | 8:19 AM

Share

ಕೊಪ್ಪಳ, ಮಾರ್ಚ್​​ 7: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. ಹೀಗಾಗಿ ವಾಲ್ಮೀಕಿ ಸಮಾಜದ ನಾಯಕರು ಶೆಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದರು.

ಸಮಾಜದ ಯಾವುದೇ ಸಭೆ ಸಮಾರಂಭಗಳಿಗೆ ನಮಗೆ ಆಹ್ವಾನವಿಲ್ಲ. ಸಮಾಜದ ಬೇರೆ ಕುಟುಂಬದವರ ಕಾರ್ಯಕ್ರಮಕ್ಕೆ ಕೂಡಾ ಆಹ್ವಾನ ಇಲ್ಲ. ದಂಡ ಪಾವತಿ ಮಾಡುವ ವರಗೆ ಸಮಾಜದ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರು ಎಂದು ಸಮಾಜದ ಮುಖಂಡರಿಂದ ಆದೇಶವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂಬ ಆರೋಪ ಸಮಾಜದ ಮುಖಂಡರ ಮೇಲಿದೆ. ಇದನ್ನು ಶೆಂಕ್ರಪ್ಪ ನಿರಾಕರಿಸಿದ್ದರು. ಹೀಗಾಗಿ ಬುಧವಾರ ಸಭೆ ಸೇರಿದ್ದ ಮುಖಂಡರು, 21 ಸಾವಿರ ರೂ. ದಂಡ ನೀಡಬೇಕು ಎಂದು ಸೂಚಿಸಿದ್ದರು. ಹಣ ನೀಡದೇ ಇದ್ದರೆ ಸಮಾಜದ ಯಾವುದೇ ಕಾರ್ಯಕ್ರಮದಲ್ಲಿ ಸೇರಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಈ ಕಾರಣಕ್ಕೆ ವಾಲ್ಮೀಕಿ ಸಮಾಜದ ಮುಖಂಡರ ವಿರುದ್ಧ ಶೆಂಕ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ಬಡಗಿ ವೃತ್ತಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ವಡಕಿ ಗ್ರಾಮದಲ್ಲಿ ವಿಶೇಷ ಜಾತ್ರೆ; ರಥದ ಮೇಲಿಂದ ಮಕ್ಕಳನ್ನು ಎಸೆದು, ಮಹಿಳೆಯರೇ ಎಳಿತಾರೆ ರಥ

ಈ ಹಿಂದೆ ಕೂಡಾ ಕೊಪ್ಪಳದಲ್ಲಿ ಅನೇಕ ಕುಟುಂಬಕ್ಕೆ ಬಹಿಷ್ಕಾರ ಹಾಕಲಾಗಿತ್ತು ಎಂಬ ಆರೋಪವಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಇದೆ.

ಹೀಗೆಲ್ಲ ಇದೆ ಬಹಿಷ್ಕಾರದ ನಿಯಮ!

ಬಹಿಷ್ಕಾರ ಹಾಕಿದ ಕುಟುಂಬವನ್ನು ಆ ಸಮುದಾಯದ ಬೇರೆಯವರು ತಮ್ಮ ಮನೆಗಳ ಕಾರ್ಯಕ್ರಮಕ್ಕೆ ಕರೆಯುವಂತಿಲ್ಲ. ಬೇರೆ ಕುಟುಂಬದವರು ಕೂಡಾ ಶೆಂಕ್ರಪ್ಪ ಅವರ ಮನೆಗೆ ಹೋಗುವಂತಿಲ್ಲ. ಶುಭಕಾರ್ಯ ಸೇರಿದಂತೆ ಯಾವುದೇ ಸಭೆ ಸಮಾರಂಭಗಳಿಗೆ ಹೋಗುವಂತಿಲ್ಲ ಮತ್ತು ಕರೆಯುವಂತಿಲ್ಲ ಎಂದು ಸಮುದಾಯದ ಮುಖಂಡರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ